ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದುಕೊಂಡಿದ್ದೇಕೆ? ಸ್ಪಷ್ಟನೆ ನೀಡಿದ ಆರಗ ಜ್ಞಾನೇಂದ್ರ
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಮತಿನ್ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ಎನ್‌ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗ, ಏಪ್ರಿಲ್ 05: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ (Bengaluru Rameshwaram cafe blast Case) ಸಂಬಂಧಿಸಿದಂತೆ ಎನ್‌ಐಎ ತನಿಖೆ ಚುರುಕುಗೊಂಡಿದ್ದು, ಈ ಕೇಸ್‌ಗೆ ಸಂಬಂಧಿಸಿದಂತೆ ಇಂದು ಎನ್‌ಐಎ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿತ್ತು. ಸದ್ಯ ಈ ವಿಚಾರವಾಗಿ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಮತಿನ್ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್‌ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೇಸ್ನಲ್ಲಿ ಬಿಜೆಪಿ ಕಾರ್ಯಕರ್ತರ ಭಾಗಿ ಬಗ್ಗೆ ಅಪಪ್ರಚಾರ ಮಾಡಲಾಗಿದೆ. ತೀರ್ಥಹಳ್ಳಿಯ ಮೊಬೈಲ್ ಅಂಗಡಿಯಲ್ಲಿ ಸಿಮ್ ಖರೀದಿಸಿ 8 ಹಿಂದುಗಳ ಹೆಸರಿನಲ್ಲಿ ಮತಿನ್ ನಕಲಿ ಫೇಸ್ಬುಕ್ ಅಕೌಂಟ್ ಮಾಡಿದ್ದಾನೆ. ಇವರನ್ನು NIA ತಂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ. ಬಿಜೆಪಿ ಕಾರ್ಯಕರ್ತ ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿ ಆಗಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀರ್ಥಹಳ್ಳಿ ಬಿಜೆಪಿ ಕಾರ್ಯದರ್ಶಿ ಎನ್‌ಐಎ ವಶಕ್ಕೆ
ಸಾಯಿ ಪ್ರಸಾದ್ ಒಬ್ಬ ಕಾರ್ಯಕರ್ತ ಉತ್ತಮ ಜೀವನ ಆತ ನಡೆಸುತ್ತಿದ್ದಾನೆ. ಆತ ಓರ್ವ ಪೆಂಟರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾನೆ. ಆತ ವಿಚಾರಣೆಯಲ್ಲಿ ಸಹಕರಿಸಿ ಆತ ಸತ್ಯ ಸಂಗತಿ ಹೇಳಿದ್ದಾನೆ. ಆದ್ದರಿಂದ ಆತನಿಗೆ ಒಳ್ಳೆಯದ್ಧು ಆಗಿದೆ. ದಯವಿಟ್ಟು ಅಪಾರ್ಥ ಕಲ್ಪಿಸುವ, ಪ್ರಚಾರ ಬೇಡವೆಂದು ಆಗರ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಎನ್‌ಐಎ ಸ್ಪಷ್ಟನೆ
ಮಾರ್ಚ್ 1ರಂದು ಬೆಂಗಳೂರಿನ ವೈಟ್ಫೀಲ್ಡ್ ಬಳಿ ಇರುವ ITPLನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ, ಇಬ್ಬರು ಆರೋಪಿಗಳನ್ನ ಪತ್ತೆ ಹಚ್ಚಿದೆ. ಐಇಡಿ ಬಾಂಬ್ ಹೊತ್ತು ತಂದಿದ್ದ ಮುಸಾವೀರ್ ಹುಸೇನ್ ಹಾಗೂ ಸಹಾ ಸಂಚುಕೋರ ಅಬ್ದುಲ್ ಮತೀನ್ ತಾಹ ಇಬ್ಬರೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರು ಎಂಬುದು ಗೊತ್ತಾಗಿದೆ.
ಪ್ರಕರಣದಲ್ಲಿ ಬಾಂಬ್ ಸ್ಫೋಟಕ್ಕೆ ಸಹಾಯ ಮಾಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸಾ ಮೂಲದ ಮುಜಾಮಿಲ್ ಷರೀಫ್ ಎಂಬಾತನನ್ನ ಬಂಧಿಸಲಾಗಿದೆ. ಅಲ್ಲದೆ ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ದೇಶದ 18 ಕಡೆ ದಾಳಿ ಮಾಡಿ, ಪರಿಶೀಲನೆ ಮಾಡಲಾಗಿದೆ. ಇಬ್ಬರು ಆರೋಪಿಗಳ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್: ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್‌ಐಎ ಮನವಿ
ತನಿಖೆಯ ಭಾಗವಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ಮಾಡಲಾಗುತ್ತಿದೆ. ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆ ಆಗುತ್ತೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸಲು NIA ಮನವಿ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.