ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್ ಪಡೆಯಲು ನೀವೂ ಅರ್ಹರೇ? ತಿಳಿಯುವ ವಿಧಾನ ಇಲ್ಲಿದೆ

Gruha Jyothi Scheme; ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ಬಿಲ್ ಪಡೆಯಲು ನಾವೂ ಅರ್ಹರೇ? ಲೆಕ್ಕಾಚಾರ ಹಾಕುವುದು ಹೇಗೆ? ಶೂನ್ಯ ಬಿಲ್ ಹೇಗಿರಲಿದೆ? ಇಲ್ಲಿದೆ ಮಾಹಿತಿ.

ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್ ಪಡೆಯಲು ನೀವೂ ಅರ್ಹರೇ? ತಿಳಿಯುವ ವಿಧಾನ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Aug 02, 2023 | 2:56 PM

ಬೆಂಗಳೂರು, ಆಗಸ್ಟ್ 1:: ಕಾಂಗ್ರೆಸ್ ಸರ್ಕಾರದ ಪ್ರಮುಖ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸುವ ಗೃಹ ಜ್ಯೋತಿ’ ಯೋಜನೆ (Gruha Jyothi Scheme) ಈ ತಿಂಗಳು ಜಾರಿಯಾಗುತ್ತಿದೆ. ಆಗಸ್ಟ್ 5ರಂದು ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ಸರಾಸರಿ ಬಳಕೆಯ ಮಿತಿಯೊಳಗೆ ವಿದ್ಯುತ್ ಬಳಸಿದ ಹಲವಾರು ಗ್ರಾಹಕರು ‘ಶೂನ್ಯ’ ಬಿಲ್‌ಗಳನ್ನು (Electricity Bill) ಪಡೆದಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಅರ್ಹರಾಗಿದ್ದೇವೆಯೇ ಎಂದು ತಿಳಿಯವುದು ಹೇಗೆ? ಇಲ್ಲಿದೆ ಮಾಹಿತಿ.

ಯೋಜನೆಯ ನೋಂದಣಿಯನ್ನು ಜುಲೈ 1 ರಂದು ಪ್ರಾರಂಭಿಸಲಾಗಿದ್ದು, ಜುಲೈ 27 ರವರೆಗೆ ನೋಂದಾಯಿಸಿಕೊಂಡವರು ಜುಲೈ ತಿಂಗಳಲ್ಲಿ ಸರಾಸರಿ ಮಿತಿಯ ಒಳಗೆ ವಿದ್ಯುತ್ ಬಳಸಿದ್ದರೆ ಅವರಿಗೆ ‘ಶೂನ್ಯ’ ಬಿಲ್ ಬರಲಿದೆ. ಜುಲೈ 27ರ ನಂತರ ನೋಂದಾಯಿಸಿಕೊಂಡವರನ್ನು ಆಗಸ್ಟ್ ಬಿಲ್ಲಿಂಗ್​ಗೆ ಪರಿಗಣಿಸಲಾಗುತ್ತದೆ.

ಯೋಜನೆಗೆ ಹೆಸರು ನೋಂದಾಯಿಸಿದ ಗ್ರಾಹಕರು ‘ಶೂನ್ಯ’ ಬಿಲ್‌ ಪಡೆಯಲು ಪ್ರಾರಂಭಿಸಿದ್ದಾರೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಮಂಗಳವಾರ ತಿಳಿಸಿದ್ದಾರೆ.

ಗೃಹ ಜ್ಯೋತಿ ಯೋಜನೆ ಅಡಿ ಬಿಲ್ ಲೆಕ್ಕಾಚಾರ ಹೇಗೆ?

ಗ್ರಾಹಕರ 12 ತಿಂಗಳ ವಿದ್ಯುತ್ ಬಳಕೆಯ ಯೂನಿಟ್​​ಗಳ ಸರಾಸರಿಯನ್ನು ಗಣನೆಗೆ ತೆಗೆದುಕೊಂಡು ಅದಕ್ಕೆ ಶೇಕಡಾ 10 ರಷ್ಟು ಸೇರಿಸಲಾಗುತ್ತದೆ. ಅದು 200 ಯೂನಿಟ್​​ಗಿಂತ ಕಡಿಮೆ ಇದ್ದರೆ ಅಂಥ ಗ್ರಾಹಕರು ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಸರ್ಕಾರ ಹೇಳಿದೆ.

ಉದಾಹರಣೆಗೆ; ಒಬ್ಬ ವ್ಯಕ್ತಿಯ ಸರಾಸರಿ ವಿದ್ಯುತ್ ಬಳಕೆ ಯೂನಿಟ್ 120 ಆಗಿದ್ದರೆ, ಸರ್ಕಾರವು ಅದಕ್ಕೆ ಶೇ 10 ರಷ್ಟು ಯೂನಿಟ್​ ಸೇರ್ಪಡೆಗೊಳಿಸುತ್ತದೆ. ಆಗ ಅದು 132 ಯೂನಿಟ್ ಆಗುತ್ತದೆ. ಅಂಥ ಗ್ರಾಹಕರು ಬಳಕೆದಾರರು 132 ಯೂನಿಟ್ ಅಥವಾ ಅದಕ್ಕಿಂತ ಕಡಿಮೆ ಬಳಸಿದರೆ ಅವರು ‘ಶೂನ್ಯ’ ಬಿಲ್ ಪಡೆಯುತ್ತಾರೆ. ಒಂದು ವೇಳೆ, 132 ಯೂನಿಟ್‌ಗಳಿಗಿಂತ ಹೆಚ್ಚಿನ ವಿದ್ಯುತ್ ಅನ್ನು ಗ್ರಾಹಕರು ಬಳಸಿದರೆ, ಅವರು ಹೆಚ್ಚುವರಿ ಯೂನಿಟ್​​ಗಳಿಗೆ ಮಾತ್ರ ಬಿಲ್ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿಗೆ ಚಾಲನೆ, ಜು. 27ರೊಳಗೆ ಅರ್ಜಿ ಸಲ್ಲಿಸಿದ ಎಲ್ಲರಿಗೂ ಉಚಿತ ವಿದ್ಯುತ್​

200ಕ್ಕೂ ಹೆಚ್ಚು ಯೂನಿಟ್ ಬಳಕೆ ಮಾಡುತ್ತಿರುವವರು ಸಂಪೂರ್ಣ ಬಿಲ್ ಪಾವತಿಸಬೇಕಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Tue, 1 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ