ಆಕಸ್ಮಿಕ ಬೆಂಕಿ: 3 ಎಕರೆ ಕಬ್ಬು ಬೆಳೆ ಭಸ್ಮ

|

Updated on: Dec 18, 2019 | 6:45 PM

ಹಾವೇರಿ: ತಿಮ್ಮಾಪುರ ಎಂ.ಎ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ. ವೀರಭದ್ರಪ್ಪ, ಬಸವರಾಜ, ಮಂಜುನಾಥ ಎಂಬ ರೈತರಿಗೆ ಸೇರಿದ ಕಬ್ಬು ಬೆಳೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಕಬ್ಬು ಬೆಳೆ ಸುಟ್ಟು ಕರಕಲಾಗಿದೆ. ಇದರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ಬೆಳೆ ಹಾನಿಯಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕ ಬೆಂಕಿ: 3 ಎಕರೆ ಕಬ್ಬು ಬೆಳೆ ಭಸ್ಮ
Follow us on

ಹಾವೇರಿ: ತಿಮ್ಮಾಪುರ ಎಂ.ಎ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ. ವೀರಭದ್ರಪ್ಪ, ಬಸವರಾಜ, ಮಂಜುನಾಥ ಎಂಬ ರೈತರಿಗೆ ಸೇರಿದ ಕಬ್ಬು ಬೆಳೆಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಕಬ್ಬು ಬೆಳೆ ಸುಟ್ಟು ಕರಕಲಾಗಿದೆ. ಇದರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ಬೆಳೆ ಹಾನಿಯಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:45 pm, Wed, 18 December 19