ಬೆಂಗಳೂರಿನಲ್ಲಿ ಸುಮಾರು 3000 ಕೊರೊನಾ ಸೋಂಕಿತರು ನಾಪತ್ತೆ: ಸಚಿವ ಆರ್. ಅಶೋಕ್

Coronavirus: ಬೆಂಗಳೂರಿನಲ್ಲಿ ಎರಡು ಸಾವಿರದಿಂದ ಮೂರು ಸಾವಿರ ಜನರು ಫೋನ್ ಸ್ವಿಚ್ ಆಫ್ ಮಾಡಿ ಅವರ ಮನೆಯಿಂದ ಹೊರಗೆ ಹೋಗಿದ್ದಾರೆ. ಅವರು ಎಲ್ಲಿಗೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ.ರೋಗ ಉಲ್ಬಣವಾಗಿ ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಹೋಗುವುದು ತಪ್ಪು. ಈ ರೀತಿ ಮಾಡುವುದರಿಂದ ಸೋಂಕಿನ ಪ್ರಮಾಣವೂ ಜಾಸ್ತಿ ಆಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 3000 ಕೊರೊನಾ ಸೋಂಕಿತರು ನಾಪತ್ತೆ: ಸಚಿವ ಆರ್. ಅಶೋಕ್
ಆರ್. ಅಶೋಕ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 29, 2021 | 5:49 PM

ಬೆಂಗಳೂರು: ಕೊರೊನಾವೈರಸ್ ಸೋಂಕಿಗೊಳಗಾಗಿರುವ ಸುಮಾರು 3000 ನಿವಾಸಿಗಳು ಬೆಂಗಳೂರಿನಿಂದ ನಾಪತ್ತೆಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿಮಾಡಿದೆ. ನಾಪತ್ತೆಯಾದವರನ್ನು ಹುಡುಕಲು ರಾಜ್ಯ ಸರ್ಕಾರ ಪೊಲೀಸರಿಗೆ ಆದೇಶ ನೀಡಿದೆ.  ನಾವು ಜನರಿಗೆ ಉಚಿತ ಔಷಧಿ ನೀಡುತ್ತಿದ್ದೇವೆ, ಅದರಿಂದಾಗಿ ಶೇ90 ರಷ್ಟು ಪ್ರಕರಣಗಳನ್ನು ಕಡಿಮೆ ಮಾಡಬಹುದು. ಆದರೆ ಕೊರೊನಾ ಸೋಂಕಿತರು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ. ತುಂಬಾ ಗಂಭೀರ ಪರಿಸ್ಥಿತಿ ಬಂದಾಗ ಅವರು ಐಸಿಯು ಬೆಡ್​ಗಾಗಿ ಆಸ್ಪತ್ರೆಗಳಿಗೆ ಬರುತ್ತಾರೆ. ಈಗ ಆಗುತ್ತಿರುವುದೂ ಅದೇ ಎಂದು ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಎರಡು ಸಾವಿರದಿಂದ ಮೂರು ಸಾವಿರ ಜನರು ಫೋನ್ ಸ್ವಿಚ್ ಆಫ್ ಮಾಡಿ ಅವರ ಮನೆಯಿಂದ ಹೊರಗೆ ಹೋಗಿದ್ದಾರೆ. ಅವರು ಎಲ್ಲಿಗೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ.ರೋಗ ಉಲ್ಬಣವಾಗಿ ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಹೋಗುವುದು ತಪ್ಪು. ಈ ರೀತಿ ಮಾಡುವುದರಿಂದ ಸೋಂಕಿನ ಪ್ರಮಾಣವೂ ಜಾಸ್ತಿ ಆಗುತ್ತದೆ. ಸಾಂಕ್ರಾಮಿಕ ರೋಗ ಆರಂಭವಾದಂದಿನಿಂದಲೂ ಬೆಂಗಳೂರಿನಲ್ಲಿ ಈ ರೀತಿಯ ಸಮಸ್ಯೆ ಇದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿರುವುದಾಗಿ ಸುದ್ದಿಸಂಸ್ಧೆಯೊಂದು ವರದಿ ಮಾಡಿದೆ. ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕಳೆದ ಒಂದು ವರ್ಷದಿಂದ ನಾನು ಕೆಲಸ ಮಾಡುತ್ತಿದ್ದೇನೆ.

ನನ್ನ ಅನುಭವದಿಂದಹೇಳುವುದಾದರೆ ಶೇ 20ರಷ್ಟು ಮಂದಿ ಫೋನ್ ಕರೆಗೆ ಉತ್ತರಿಸುವುದಿಲ್ಲ. ಹೆಚ್ಚಿನ ಪ್ರಕರಣಗಳಲ್ಲಿ ಪೊಲೀಸರು ಅವರು ದಾರಿ ಪತ್ತೆ ಹಚ್ಚಿದರೆ ಅವರು ಬೇರೆ ರಾಜ್ಯಗಳಿಗೆ ಹೋಗಿರುತ್ತಾರೆ. ಈ ಮೂಲಕ ಅವರು ಅಲ್ಲಿಗೂ ರೋಗ ಸಾಗಿಸುತ್ತಾರೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಸುಧಾಕರ್ ಹೇಳಿದ್ದರು.

ಸೋಂಕಿತ ವ್ಯಕ್ತಿಯ ಕನಿಷ್ಠ 20 ಸಂಪರ್ಕಗಳನ್ನು ಪತ್ತೆಹಚ್ಚಬೇಕು ಎಂದು ಮಾರ್ಗಸೂಚಿಗಳು ಆದೇಶಿಸಿದ್ದರೂ, ರಾಜ್ಯದ ಅಧಿಕಾರಿಗಳು ಪ್ರತಿ ವ್ಯಕ್ತಿಗೆ ನಾಲ್ಕು ಸಂಪರ್ಕಗಳನ್ನು ಮಾತ್ರ ಪತ್ತೆಹಚ್ಚುತ್ತಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಇದು ಬೆಳಕಿಗೆ ಬಂದ ನಂತರ, ರಾಜ್ಯ ಸರ್ಕಾರವು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ.

ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನ ಅಂಕಿಗಳು ಬುಧವಾರ ಮತ್ತೊಂದು ದಾಖಲೆ ಬರೆದಿವೆ. ರಾಜ್ಯದಲ್ಲಿ ಒಟ್ಟು 39,047 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 229 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22,596 ಜನರಿಗೆ ಸೋಂಕು ದೃಢಪಟ್ಟಿದ್ದು, 137 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ (14.39 ಲಕ್ಷ) ಏರಿಕೆಯಾಗಿದೆ. ಈ ಪೈಕಿ 10,95,883 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 229 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ. 3,28,884 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 22,596 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಈ ಪೈಕಿ 4,80,055 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 137 ಜನರ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸತ್ತವರ ಒಟ್ಟು ಸಂಖ್ಯೆ 6,139ಕ್ಕೆ ಏರಿಕೆಯಾಗಿದೆ. 224152 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 39,047 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 22,596 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ 5 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರು 1759, ಕೋಲಾರ 1194, ತುಮಕೂರು 1174, ಬಳ್ಳಾರಿ 1106, ಹಾಸನ 1001 ಜನರಲ್ಲಿ ಸೋಂಕು ದೃಢಪಟ್ಟಿದೆ.

ಮಂಡ್ಯ 935, ಕಲಬುರಗಿ 901, ಬೆಂಗಳೂರು ಗ್ರಾಮಾಂತರ 732, ಚಿಕ್ಕಬಳ್ಳಾಪುರ 683, ದಕ್ಷಿಣ ಕನ್ನಡ 664, ಉಡುಪಿ 664, ಧಾರವಾಡ 654, ರಾಯಚೂರು 511, ಕೊಪ್ಪಳ 444, ಚಾಮರಾಜನಗರ 424, ವಿಜಯಪುರ 394, ಕೊಡಗು 388, ಬೆಳಗಾವಿ 360, ಬಾಗಲಕೋಟೆ 333, ಶಿವಮೊಗ್ಗ 333, ಉತ್ತರ ಕನ್ನಡ 301, ಯಾದಗಿರಿ 295, ಚಿಕ್ಕಮಗಳೂರು 297, ಬೀದರ್ 269, ದಾವಣಗೆರೆ 196, ರಾಮನಗರ 164, ಗದಗ 129, ಚಿತ್ರದುರ್ಗ 110, ಹಾವೇರಿ 36 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿ:  #KarnatakaLockdown: ‘ಉಪಚುನಾವಣೆ ಮುಗೀತಾ ಮುಖ್ಯಮಂತ್ರಿಗಳೇ’: ಲಾಕ್​ಡೌನ್ ಘೋಷಣೆಯ ಬೆನ್ನಲ್ಲೇ ಟ್ವಿಟರ್​ನಲ್ಲಿ ಮೀಮ್​ಗಳ ಸುರಿಮಳೆ

(Around 3,000 Covid infected residents missing from Bengaluru says Karnataka Revenue Minister R Ashoka)

Published On - 5:38 pm, Thu, 29 April 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?