AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ

ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ಬಂಧಿಸಿದ್ದು, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಕಾಂಗ್ರೆಸ್ ಸರ್ಕಾರ ಗುರಿಯಾಗಿದೆ. ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ಮುಗಿಬೀಳುತ್ತಿದೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jan 02, 2024 | 2:54 PM

Share

ವಿಜಯಪುರ, ಜ.2: ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಬಂಧಿಸಿದ್ದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ವಿಜಯಪುರದ ಬಿಎಲ್​ಡಿಇ ಹೆಲಿಪ್ಯಾಡ್​ನಲ್ಲಿ ಮಾತನಾಡಿದ ಅವರು, ಯಾವತ್ತೂ ಅಪರಾಧಿ ಅಪರಾಧಿಯೇ ಆಗುತ್ತಾನೆ. ಹಳೆ ಪ್ರಕರಣವನ್ನು ಮುಗಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರೀಓಪನ್ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಕಾಂಗ್ರೆಸ್​ ನೀಚ ಸರ್ಕಾರ ಎಂಬ ಪ್ರಲ್ಹಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅಪರಾಧಿಗಳಿಗೆ ಬೆಂಬಲ‌ ಕೊಡುವ ಕೇಂದ್ರ ಸಚಿವ ಜೋಶಿಯವರದ್ದು ನೀಚತನ. ಈಗ ಅರೆಸ್ಟ್ ಮಾಡಿದರೆ ಏನು ತಪ್ಪು, ಬಂಧಿಸಬಾರದು ಅಂತಾ ಇದೆಯಾ? ಜೋಶಿ ಏನು ಕೋರ್ಟಾ? ಜೋಶಿ ಹೇಳಿದ್ದೇ ಅಂತಿಮವೇ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜಕೀಯವಾಗಿ ಮಾತನಾಡುತ್ತಿದ್ದಾರೆ. ಕಾನೂನಾತ್ಮಕವಾಗಿ ಮಾತನಾಡಲಿ. ಕಾನೂನು ಏನ್ ಹೇಳುತ್ತೋ ಅದನ್ನು ಸರ್ಕಾರ ಮಾಡುತ್ತೆ ಎಂದು ಹೇಳುವ ಮೂಲಕ ಶ್ರೀಕಾಂತ್ ಪೂಜಾರಿ ಬಂಧನವನ್ನು ಸಮರ್ಥಿಸಿಕೊಂಡರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್