AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರ ಬಂಧನ, ಸ್ಫೋಟಕ ಪತ್ತೆ ಹಿನ್ನೆಲೆ; ಸ್ವಾತಂತ್ರ್ಯೋತ್ಸವ ಭದ್ರತೆಗಾಗಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

ಸ್ವಾತಂತ್ರ್ಯ ದಿನಾಚರಣೆಗೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಮೊದಲ ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಜಂಟಿ ಅಯುಕ್ತರು, ಡಿಸಿ, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಶಂಕಿತ ಉಗ್ರರ ಬಂಧನ, ಸ್ಫೋಟಕ ಪತ್ತೆ ಹಿನ್ನೆಲೆ; ಸ್ವಾತಂತ್ರ್ಯೋತ್ಸವ ಭದ್ರತೆಗಾಗಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ
ಸಾಂದರ್ಭಿಕ ಚಿತ್ರ
Shivaprasad
| Updated By: Ganapathi Sharma|

Updated on:Jul 20, 2023 | 10:22 PM

Share

ಬೆಂಗಳೂರು, ಜುಲೈ 20: ನಗರದಲ್ಲಿ ಶಂಕಿತ ಉಗ್ರರ ಬಂಧನ ಹಾಗೂ ಸ್ಫೋಟಕಗಳು ಪತ್ತೆಯಾಗಿರುವ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತರ (Bengaluru Police) ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೆ (Independence Day) 25 ದಿನ ಮುನ್ನವೇ ಪೊಲೀಸ್ ಅಧಿಕಾರಿಗಳು ಸಭೆ ಸೇರಿದ್ದು, ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಸಾಮಾನ್ಯವಾಗಿ ಸ್ವಾತಂತ್ರ್ಯೋತ್ಸವಕ್ಕೆ 10 ದಿನ ಮುಂಚಿತವಾಗಿ ಭದ್ರತಾ ಸ್ಥಿತಿಗತಿ ಕುರಿತು ಚರ್ಚಿಸಲು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತದೆ. ಆದರೆ, ಈ ಬಾರಿ ಮೊದಲೇ ಸಭೆ ನಡೆಸಿ ಭದ್ರತಾ ಕ್ರಮಗಳ ಬಗ್ಗೆ ಚರ್ಚಸಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಮೊದಲ ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಜಂಟಿ ಅಯುಕ್ತರು, ಡಿಸಿ, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಮತ್ತು ರಾಜ್ಯದ ಇತರೆಡೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಮತ್ತು ಭದ್ರತಾ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ಈ ಮಧ್ಯೆ, ಶಂಕಿತ ಉಗ್ರರ ಬಂಧನ ಹಾಗೂ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 4 ಸಜೀವ ಗ್ರೆನೇಡ್ ಪತ್ತೆಯಾದ ಕಾರಣ ಕರ್ನಾಟಕದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ರೈಲು ನಿಲ್ದಾಣ, ಬಸ್​ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

ವಿಜಯಪುರ ಬಸ್​ ಹಾಗೂ ರೈಲು ನಿಲ್ದಾಣಗಳಲ್ಲಿ ಬುಧವಾರವೇ ತಪಾಸಣೆ ಬಿಗಿಗೊಳಿಸಲಾಗಿತ್ತು. ಇದೀಗ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಹೈಅಲರ್ಟ್​​​ ಘೋಷಿಸಲಾಗಿದೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದ್ದು, ಪ್ರಯಾಣಿಕರ ಬ್ಯಾಗ್​​ಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:21 pm, Thu, 20 July 23

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು