Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್: ಕೊನೆಗೂ ಮೂವರು ಅರೆಸ್ಟ್

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್​ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ ಮಾಡಲಾಗಿದೆ. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್: ಕೊನೆಗೂ ಮೂವರು ಅರೆಸ್ಟ್
ವಿಧಾನಸೌಧ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on:Mar 04, 2024 | 7:27 PM

ಬೆಂಗಳೂರು, ಮಾರ್ಚ್ 4:  ವಿಧಾನಸೌಧದ (Vidhana Soudha) ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ಈಗ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ. ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌, ಜಿಂದಾಬಾದ್‌ ಅಂತಾ ಕೂಗುತ್ತಾರೆ. ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು ಆಧರಿಸಿ ಆರೋಪಿಗಳ ಬಂಧನ

ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಾ ಇದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.

ಇದನ್ನೂ ಓದಿ: ಪಾಕ್​ ಪರ ಘೋಷಣೆ ಆರೋಪ: ಡಿಜಿ&ಐಜಿಪಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ, FSL ವರದಿ ಬಿಡುಗಡೆಗೆ ಮನವಿ

ಪಾಕಿಸ್ತಾನ ಪರ ಘೋಷಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ, 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್​ ಸ್ಯಾಂಪಲ್ಸ್​ಗಳನ್ನ ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿತ್ತು. ಮೆಲುಧ್ವನಿ, ಏರುಧ್ವನಿ ಮಾದರಿಯಲ್ಲಿ ಸ್ಯಾಂಪಲ್ಸ್​ಗಳನ್ನ ಸಂಗ್ರಹಿಸಲಾಗಿದ್ದು, ಎಫ್​ಎಸ್​ಎಲ್ ತಂಡ​ ಪರಿಶೀಲನೆ ಮಾಡಿದೆ. ಘಟನೆ ನಡೆದ ದೃಶ್ಯಗಳನ್ನು ಸಹ ರವಾನಿಸಲಾಗಿತ್ತು.

ಸರ್ಕಾರ ಕೂಡ ಕಟ್ಟುನಿಟ್ಟಿನ ತನಿಖೆಗೆ ಮುಂದಾಗಿದ್ದು, ಎಫ್ಎಸ್​ಎಲ್​ ಮೇಲೆ ಇಡೀ ಪ್ರಕರಣವೇ ನಿಂತಿದೆ. ಸರ್ಕಾರ ಇನ್ನು ಎಫ್​​ಎಸ್ಎಲ್ ವರದಿ ಬಂದಿಲ್ಲ ಅಂತಿದ್ದರೆ, ಇತ್ತ ಬಿಜೆಪಿ ನಾಯಕರು ಮಾತ್ರ ನಿನ್ನೆಯೇ ವರದಿ ಬಂದಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: ಬಿಜೆಪಿಯ ಖಾಸಗಿ ಎಫ್​ಎಸ್​ಎಲ್​ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಜಿ ಪರಮೇಶ್ವರ್​​

ಕೇಸ್​ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಎಫ್​ಎಸ್​ಎಲ್ ವರದಿ ಕಾಂಗ್ರೆಸ್​ ಕೈ ಸೇರಿದೆ. ಆದರೆ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ದೇಶಭಕ್ತಿಯನ್ನ ಬಿಜೆಪಿಯವರು ಹೇಳಿಕೊಡುವ ಅಗತ್ಯವಿಲ್ಲ: ಸಿಎಂ ಕಿಡಿ

ಎಫ್​ಎಸ್​ಎಲ್ ವರದಿ ಬಿಡುಗಡೆ ಬಿಜೆಪಿಯವರು ಒತ್ತಾಯಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವರದಿ ಬಂದ ತಕ್ಷಣವೇ ಬಿಡುಗಡೆ ಮಾಡುತ್ತೇವೆ. ದೇಶಭಕ್ತಿಯನ್ನ ಬಿಜೆಪಿಯವರು ಹೇಳಿಕೊಡುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:03 pm, Mon, 4 March 24

ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ