Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಲ್ಲದ ಕಿಡಿ

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯಗೆ ಮುಸ್ಲಿಮರು ಅಂದರೆ ಪ್ರೀತಿ. ಎಲ್ಲರ ಮೀಸಲಾತಿ ತೆಗೆದು ಅವರಿಗೆ ಕೊಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಲ್ಲದ ಕಿಡಿ
ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಲ್ಲದ ಕಿಡಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 14, 2024 | 3:16 PM

ಹುಬ್ಬಳ್ಳಿ, ಡಿಸೆಂಬರ್​​ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು

ಎಲ್ಲರ ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡಲು ಹೊರಟಿದ್ದಾರೆ. ಹಸಿ ಗೋಡೆ ಮೇಲೆ ಹಳ್ಳು ಒಗೆಯುವ ಕೆಲಸವನ್ನು ಸಿಎಂ ಮಾಡಿದ್ದಾರೆ. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು. ಮೀಸಲಾತಿ ಕೊಡುವುದು ಹೇಗೆ ಸಂವಿಧಾನ ವಿರೋಧಿಯಾಗುತ್ತೆ? ಈ ಬಗ್ಗೆ ಸಿಎಂ ಶ್ವೇತ ಪತ್ರ ಹೊರಡಿಸಲಿ ಎಂದಿದ್ದಾರೆ.

ಲಾಠಿ ಚಾರ್ಜ್ ಸಂಪೂರ್ಣ ಜವಾಬ್ದಾರಿ ಸಿದ್ದರಾಮಯ್ಯನವರದ್ದು

ಲಿಂಗಾಯತರಿಗೆ, ಒಕ್ಕಲಿಗರಿಗೆ, ಮರಾಠರಿಗೆ ಮೀಸಲಾತಿ ಕೊಡಲ್ಲ ಅಂತ ಘೋಷಣೆ ಮಾಡಲಿ. ಸಂವಿಧಾನದ ವಿರುದ್ಧವಾಗಿ ಮುಸ್ಲಿಮರಿಗೆ ಮೀಸಲಾತಿ ಕೊಡಲಾಗಿದೆ. ಅದರ ಬಗ್ಗೆ ಇವರು ಮಾತನಾಡುವುದಿಲ್ಲ. ಸಿಎಂ ಪ್ರಕಾರ ಮುಸ್ಲಿಮರು ಬಿಟ್ಟು ಬೇರೆ ಯಾರು ಏನು ಕೇಳಬಾರದು, ಏನೇ ಕೇಳಿದರೂ ಮುಸ್ಲಿಮರಷ್ಟೇ ಕೇಳಬೇಕು. ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ. ಲಾಠಿ ಚಾರ್ಜ್ ಸಂಪೂರ್ಣ ಜವಾಬ್ದಾರಿ ಸಿಎಂ ಸಿದ್ದರಾಮಯ್ಯನವರದ್ದು. ನಮ್ಮ ಸರ್ಕಾರ ಇದ್ದಾಗ ಇದಕ್ಕಿಂತ ಬಹಳ ಜನ ಕೂಡಿದ್ದರು. ಆವಾಗ ನಮ್ಮ ಸಿಎಂ ಮತ್ತು ಸಚಿವರು ಸೇರಿ ಒಂದು ಪರಿಹಾರ ಕಂಡುಹಿಡಿಯಲು ಮುಂದಾಗಿದ್ವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ಆರ್‌ಎಸ್‌ಎಸ್​​ನವರು: ಕಾಶಪ್ಪನವರ್​ ಹೊಸ ಬಾಂಬ್​

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮುಸ್ಲಿಮರನ್ನು ಓಲೈಸುವುದನ್ನು ಬಿಟ್ಟರೆ ಏನು ಇಲ್ಲ. ಹಿಂದೂ ಸಮಾಜ ಅವರಿಗೆ ಮತ ಹಾಕಿದೆ ಎನ್ನುವ ಕಲ್ಪನೆ ಕೂಡ ಅವರಿಗಿಲ್ಲ. ಕೇವಲ ಮುಸ್ಲಿಂ ಸಮಾಜದ ಬಗ್ಗೆ ಕಾಳಜಿ ಇದೆ. ಮುಸ್ಲಿಂ ಸಮಾಜಕ್ಕೂ ಮಾಡಲಿ, ನಾವು ಬೇಡ ಅನ್ನಲ್ಲ, ಆದರೆ ಬೇರೆಯವರೂ ಇದಾರಲ್ಲ. ಎಲ್ಲಾ ದುಡ್ಡು ಮೀಸಲಾತಿ ಮುಸ್ಲಿಂ ಸಮಾಜಕ್ಕೆ ಕೊಡುವುದಾದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಶೇ. 36 ಒಬಿಸಿ ಮೀಸಲಾತಿ ಇದೆ. ಅದರಲ್ಲಿ ಶೇ. 23 ಮುಸ್ಲಿಂ ಸಮಾಜಕ್ಕಿದೆ. ಧರ್ಮ ಆಧಾರಿತ ಮೀಸಲಾತಿ ಇಲ್ಲ ಅಂತ ಅಂಬೇಡ್ಕರ್ ಸಂವಿಧಾನ ಹೇಳಿದೆ. ಶೈಕ್ಷಣಿಕ ಮತ್ತು ಸಾಮಾಜಿಕ ಆಧಾರದ ಮೇಲೆ ಮೀಸಲಾತಿ ಇದೆ. ಸಂಪೂರ್ಣ ಮುಸ್ಲಿಂ ಅಂತ ನಾಲ್ಕು ಪರ್ಸೆಂಟ್ ಕೆಟೆಗೆರಿ ಮಾಡಿದ್ದಾರೆ. ಕೆಟೆಗೆರಿ 2ಎ ದಲ್ಲಿ ಶೇ. 18 ರಷ್ಟು ಮುಸ್ಲಿಂಗೆ ನೀಡಿದ್ದಾರೆ. ಕೆಟೆಗೆರಿ 1ರಲ್ಲಿ ಮುಸ್ಲಿಂ ಸಮಾಜಕ್ಕೆ ನೀಡಿದ್ದಾರೆ. ಮುಸ್ಲಿಂಮರಿಗೆ ಶೇ. 23 ರಷ್ಟು ಕೊಟ್ಟರೆ ಬೇರೆಯವರು ಏನು ಮಾಡಬೇಕು? ಶೇ. 4 ರಷ್ಟು ಮೀಸಲಾತಿ ಸಂವಿಧಾನ ವಿರೋಧವಾಗಿ ಅದನ್ನ ತೆಗೆದು ಮರಾಠ, ಒಕ್ಕಲಿಗರು, ಲಿಂಗಾಯಿತರು, ರೆಡ್ಡಿಗೆ ಕೊಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್: ಆದೇಶ ಪಾಲನೆ ಸರಿಯಾದ ಕ್ರಮವೆಂದ ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಕೈಯಲ್ಲಿ ಸಂವಿಧಾನ ಹಿಡಿದುಕೊಂಡವರ ಹಾಗೆ ಬೈಬಲ್ ಹಿಡಿದುಕೊಂಡಿರುತ್ತಾರೆ. ಮಾತು ಎತ್ತಿದ್ರೆ ಕಾಂಗ್ರೆಸ್​ನವರು ಅಂಬೇಡ್ಕರ್ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ರಾಹುಲ್ ಗಾಂಧಿ ಮೆಲ್ನೋಟಕ್ಕೆ ಸಂವಿಧಾನದ ಪ್ರತಿ ಹಿಡಿದುಕೊಂಡಂತೆ ಮಾಡುತ್ತಾರೆ, ಆದರೆ ಅವರು ಬೈಬಲ್ ಹಿಡಿದಿರುತ್ತಾರೆ. ಅಂಬೇಡ್ಕರ್ ಸಂವಿಧಾನ ಅಂತ ಹೇಳಿಕೊಂಡು ಆಟ ಆಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Sat, 14 December 24

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ