Lockdown in Karnataka: ಲಾಕ್​ಡೌನ್ ಯಶಸ್ವಿಗೊಳಿಸಲು ಮತ್ತಷ್ಟು ಬಿಗಿ ಕ್ರಮ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಘೋಷಣೆ

ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್​ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ‌. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು. ಈಗ ಜಾರಿಯಲ್ಲಿರುವ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಲಾಕ್​ಡೌನ್ ಯಶಸ್ವಿಗೊಳಿಸಲಾಗುವುದು -ಸಚಿವ ಬಸವರಾಜ್ ಬೊಮ್ಮಾಯಿ

Lockdown in Karnataka: ಲಾಕ್​ಡೌನ್ ಯಶಸ್ವಿಗೊಳಿಸಲು ಮತ್ತಷ್ಟು ಬಿಗಿ ಕ್ರಮ - ಗೃಹ ಸಚಿವ ಬಸವರಾಜ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ
Follow us
ಸಾಧು ಶ್ರೀನಾಥ್​
|

Updated on: May 20, 2021 | 12:06 PM

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್​ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್​ಡೌನ್ ಅನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ್ ಬೊಮ್ಮಾಯಿ, ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್​ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ‌. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು. ಈಗ ಜಾರಿಯಲ್ಲಿರುವ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಲಾಕ್​ಡೌನ್ ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್​ಡೌನ್ ಜಾರಿ ಮಾಡಿದ್ದಾರೆ. ಆದರೂ ಕೂಡ ಜನ ಗಂಭೀರತೆಯನ್ನು ಅರಿತು ಕೊಳ್ಳುತ್ತಿಲ್ಲ. ಲಾಕ್​ಡೌನ್ ಗೆ ಸಹಕಾರ ನೀಡುತ್ತಿಲ್ಲ. ಲಾಕ್​ಡೌನ್ ಯಾಕೆ ಜಾರಿಯಾಗಿದೆ ಎಂಬುದನ್ನ ಅರ್ಥಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಂದಿಗ್ಧದ ಆರ್ಥಿಕ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಬಡಜನರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ‌ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬುದರ ಬಗ್ಗೆ ಪರಿಶೀಲನೆ ಮಾಡ್ತೀನಿ ಅಂತ ಹೇಳಿದ್ದಾರೆ. ಇವೆಲ್ಲವೂ ಮುಖ್ಯಮಂತ್ರಿಗಳ ಗಮನದಲ್ಲಿ ಇದೆ ಎಂದು‌ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು‌.

(as covid 19 intensifies lockdown in karnataka more stringent rules to be applied by state police says home minister basavaraj bommai) ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತಿಗೆ ಸಿದ್ದರಾಮಯ್ಯ ಕಾಮಿಡಿ ಪಂಚ್