ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿ ಚಳಿ ಶುರುವಾಗುತ್ತಿದ್ದಂತೆ ಫೆಂಗಲ್ ಚಂಡಮಾರುತದ ಅಬ್ಬರದಿಂದಾಗಿ ಮತ್ತೆ ಮಳೆಯಾಗಿ ಚಳಿ ಮಾಯವಾಗಿತ್ತು. ಇದೀಗ ಎಲ್ಲೆಡೆ ಬಿಸಿಲಿನ ತಾಪ ಜೋರಾಗಿದೆ, ಆದರೆ ಚಳಿಯ ಸುಳಿವೇ ಇಲ್ಲದಾಗಿದೆ. ಒಂದೆರಡು ದಿನಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ಡಿಸೆಂಬರ್ 10ರವರೆಗೂ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಅಂಕೋಲಾ, ಗೇರುಸೊಪ್ಪದಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಶುಭ್ರ ಆಕಶವಿದ್ದು, ಬಿಸಿಲಿದೆ, ಎಚ್ಎಎಲ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ ಕರಾವಳಿ, ಬೆಂಗಳೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.9ರವರೆಗೂ ಮಳೆ
ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:40 am, Fri, 6 December 24