ನಿರೀಕ್ಷೆಯಂತೆ ವಿಜಯೇಂದ್ರ ಪದಗ್ರಹಣ ಸಮಾರಂಭಕ್ಕೆ ಗೈರಾಗಿ ಮಧ್ಯಪ್ರದೇಶದಿಂದ ವಿಡಿಯೋ ಸಂದೇಶ ಕಳಿಸಿದ ಸಿಟಿ ರವಿ
ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಮತ್ತಷ್ಟು ಬಲಗೊಂಡು ಮುಂಬರುವ ಲೋಕ ಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಎಲ್ಲ ಚುನಾವಣೆಗಳಲ್ಲಿ ಜಯಭೇರಿ ಬಾರಿಸಲಿ ಎಂದು ರವಿ ಹೇಳಿದ್ದಾರೆ. ಹಾಗೆಯೇ, ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ರವಿ ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಸಿಟಿ ರವಿ (CT Ravi) ಏನೇ ಸಬೂಬು ಹೇಳಿದರೂ ಅವರು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪದಗ್ರಹಣ ಸಮಾರಂಭದಲ್ಲಿ ಹಾಜರಿರಲಾರರು ಅನ್ನೋದನ್ನು ನಿರೀಕ್ಷಿಸಲಾಗಿತ್ತು. ಅಸಲಿಗೆ, ರವಿ ಮಧ್ಯಪ್ರದೇಶ ವಿಧಾನ ಸಭಾ ಚುನಾವಣೆ (MP Assembly polls) ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲ್ಪುರದಿಂದ ಒಂದು ವಿಡಿಯೋ ಸಂದೇಶದ ಮೂಲಕ ವಿಜಯೇಂದ್ರ ಅವರಿಗೆ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ. ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಮತ್ತಷ್ಟು ಬಲಗೊಂಡು ಮುಂಬರುವ ಲೋಕ ಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಎಲ್ಲ ಚುನಾವಣೆಗಳಲ್ಲಿ ಜಯಭೇರಿ ಬಾರಿಸಲಿ ಎಂದು ರವಿ ಹೇಳಿದ್ದಾರೆ. ಹಾಗೆಯೇ, ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ರವಿ ಹೇಳಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಕಟೀಲ್ ಪಕ್ಷ ಸಂಘಟನೆಗಾಗಿ ತಮ್ಮ ಸಾಮರ್ಥ್ಯ ಮೀರಿ ಕೆಲಸ ಮಾಡಿದರು ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ