ಕೊಟ್ಟ ಮಾತಿನಂತೆ ಬಾಗಲಕೋಟೆಯ ಯುವತಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ
ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ.
ಬಾಗಲಕೋಟೆ, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಕೊಟ್ಟ ಮಾತಿನಂತೆ ಮೋದಿ ಇದೀಗ ಪತ್ರ ಬರೆದಿದ್ದಾರೆ. ಏಪ್ರಿಲ್ 29 ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಬಾಗಲಕೋಟೆ (Bagalkote) ಆಗಮಿಸಿದ್ದಾಗ ಯುವತಿಯ ಸ್ಕೆಚ್ ಪ್ರಧಾನಿ ಮೋದಿ ಗಮನ ಸೆಳೆದಿತ್ತು. ತಾನು ಚಿತ್ರಿಸಿದ ಸ್ಕೆಚ್ ಹಿಡಿದು ಯುವತಿ ವೇದಿಕೆ ಮುಂಭಾಗದಲ್ಲಿ ನಿಂತಿದ್ದಳು. ತಾಯಿಯ ಫೋಟೋ ಫ್ರೆಮ್ ನೋಡಿ ಎಸ್ಪಿಜಿ ಸಿಬ್ಬಂದಿಗೆ ಹೇಳಿ ಮೋದಿ ತರಿಸಿಕೊಂಡಿದ್ದರು.
ಅದರಲ್ಲಿ ನಿನ್ನ ಹೆಸರು ವಿಳಾಸ ಬರದು ಕೊಡು ನಾನು ಪತ್ರ ಕಳಿಸುತ್ತೇನೆ ಎಂದು ಮೋದಿ ಹೇಳಿದ್ದರು. ಅದೇ ರೀತಿಯಾಗಿ ಯುವತಿಗೆ ಕೊಟ್ಟ ಮಾತಿನಂತೆ ಮೇ 5 ರಂದು ಪತ್ರ ಬರೆದಿದ್ದು, ಪೋಸ್ಟ್ ಮೂಲಕ ಯುವತಿಗೆ ಪತ್ರ ಬಂದು ತಲುಪಿದೆ.
ಇದನ್ನೂ ಓದಿ: ಬಾಗಲಕೋಟೆ ಮೋದಿ ಸಮಾವೇಶದಲ್ಲಿ ಕಂಬಳಿ: ಸ್ವಾರಸ್ಯಕರ ಸಂಗತಿ ಬಿಚ್ಚಿಟ್ಟ ಚರಂತಿಮಠ
ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ.
ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: PM Modi Bagalkot Rally Live: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಮಿಂಚಿನ ಸಂಚಾರ ನಡೆಸಿದ್ದರು. ಏ.28 ರಂದು ಬೆಳಗಾವಿ, ಶಿರಸಿ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಏ.29 ಬಾಗಲಕೋಟೆಗೆ ಆಗಮಿಸಿದ್ದರು. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರವಾಗಿ ಮತಯಾಚಿಸಿದ್ದರು. ಜೊತೆಗೆ ಬೃಹತ್ ಸಮಾವೇಶ ನಡೆಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.