ಮೂರು ತಿಂಗಳಿನಿಂದ ವೇತನ ಬಂದಿಲ್ಲ; ಜೀವನ ಸಂಕಷ್ಟದಲ್ಲಿದೆ ಎಂದು ಸದಾನಂದಗೌಡ ಭೇಟಿಯಾಗಿ ಆಶಾ ಕಾರ್ಯಕರ್ತೆ ಅಳಲು
ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡಗೆ ಆಶಾ ಕಾರ್ಯಕರ್ತೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಆಶಾ ಕಾರ್ಯಕರ್ತೆ ಸುಮಿತ್ರಾ ಕೈಮುಗಿದು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ತಮಗೆ ಬರಬೇಕಾದ ವೇತನವನ್ನು ಕೊಡಿಸುವಂತೆ ಡಿ.ವಿ. ಸದಾನಂದಗೌಡಗೆ ಆಶಾ ಕಾರ್ಯಕರ್ತೆ ಮನವಿ ಮಾಡಿದ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ಕಳೆದ 3 ತಿಂಗಳಿಂದ ವೇತನವಿಲ್ಲದೆ ಜೀವನ ಸಂಕಷ್ಟದಲ್ಲಿದೆ. ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ ಎಂದು ಆಶಾ ಕಾರ್ಯಕರ್ತೆ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡಗೆ ಆಶಾ ಕಾರ್ಯಕರ್ತೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಆಶಾ ಕಾರ್ಯಕರ್ತೆ ಸುಮಿತ್ರಾ ಕೈಮುಗಿದು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಕೇ? ಕೊವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು. 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ ₹3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೊವಿಡ್ 19 ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೊನಾ ವೈರಸ್ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು. 1/5
— H D Kumaraswamy (@hd_kumaraswamy) May 23, 2021
ಕೊರೊನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೆ ಮತ್ತೇನು ಎಂದು ಸರಣಿ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.
ಕೊರೊನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆಗೆ ಮಾತ್ರ 50 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಉಳಿದ 15 ಮಂದಿಗೆ ಪರಿಹಾರ ಕೊಟ್ಟಿಲ್ಲ. ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೊವಿಡ್ 19 ನಿಯಂತ್ರಣ ಕೈ ಮೀರುತ್ತದೆ. ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಅನಗತ್ಯವಾಗಿ ಸುತ್ತಾಡುವ ಸವಾರರಿಗೆ ವಿಭಿನ್ನ ರೀತಿಯಲ್ಲಿ ಎಚ್ಚರಿಕೆ; ಹಾರ ಹಾಕಿ, ಕುಂಕುಮ ಇಟ್ಟು, ಆರತಿ ಬೆಳಗಿ ಸನ್ಮಾನ
Covid-19: ಕೊರೊನಾ ಸೋಂಕು ಗಂಭೀರ ಹಂತಕ್ಕೆ ಹೋಗದಂತೆ ತಡೆಯಲು ಈ ಸೂಚನೆಗಳನ್ನು ಪಾಲಿಸಿ
Published On - 5:38 pm, Sun, 23 May 21