AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ 7,000 ರೂ. ವರ್ಗಾವಣೆ: ದಿನೇಶ್ ಗುಂಡೂರಾವ್ ಭರವಸೆ

ASHA Workers Protest: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಭರವಸೆಗೂ ಆಶಾ ಕಾರ್ಯಕರ್ತೆಯರು ಮಣಿದಿಲ್ಲ. ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಮತ್ತು ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ 7,000 ರೂ. ವರ್ಗಾವಣೆ: ದಿನೇಶ್ ಗುಂಡೂರಾವ್ ಭರವಸೆ
ಆಶಾ ಕಾರ್ಯಕರ್ತೆಯರ ಪ್ರತಿಭಟನೆ & ದಿನೇಶ್ ಗುಂಡೂರಾವ್ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 14, 2024 | 10:59 AM

Share

ಬೆಂಗಳೂರು, ಫೆಬ್ರವರಿ 14: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು (ASHA Workers) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಭೇಟಿ ಮಾಡಿ ಅಹವಾಲು ಆಲಿಸಿದರು. ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗಳಿಗೆ ಈಗಿರುವ 5,000 ರೂ.ಗೆ ಬದಲಾಗಿ 7,000 ರೂ. ವರ್ಗಾವಣೆ ಮಾಡಲು ಕ್ರಮಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆ ಹಿಂಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಆದರೆ, ಪಟ್ಟು ಬಿಡದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಶೇ 50 ರಷ್ಟು ಆಶಾ ಕಾರ್ಯಕರ್ತೆಯರಿಗೆ ಅವರು ಮಾಡಿದ ಕೆಲಸಕ್ಕೆ ತಕ್ಕ ವೇತನ ಸಿಗುತ್ತಿಲ್ಲ ಎಂದು ಅವರು ಆರೋಪಿದ್ದಾರೆ. ಅಲ್ಲದೆ, ರಿಪ್ರೊಡಕ್ಟಿವ್ ಆ್ಯಂಡ್ ಚೈಲ್ಡ್ ಹೆಲ್ತ್ (ಆರ್‌ಸಿಎಚ್) ಪೋರ್ಟಲ್ ಅನ್ನು ಪಾವತಿ ಪ್ರಕ್ರಿಯೆಯಿಂದ ಡಿಲಿಂಕ್ ಮಾಡಿ, 15,000 ರೂ. ನಿಗದಿತ ಗೌರವಧನವಾಗಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

7,000 (ಅಸ್ತಿತ್ವದಲ್ಲಿರುವ 5,000 ರೂ. ಗೌರವಧನ ಮತ್ತು 2,000 ರೂ. ನಾನ್-ಎಂಸಿಟಿಎಸ್ ಒಟ್ಟಿಗೆ ಸೇರಿಸಿ) ನೇರವಾಗಿ ವರ್ಗಾವಣೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ತಮ್ಮ ಚಟುವಟಿಕೆಗಳನ್ನು ಅಪ್‌ಲೋಡ್ ಮಾಡಲು ಮತ್ತು ಟ್ರ್ಯಾಕ್ ಮಾಡಲು ಸಹಾಯ ಮಾಡುವ ಸಾಫ್ಟ್‌ವೇರ್ ಅನ್ನು ಸರ್ಕಾರ ಅಭಿವೃದ್ಧಿಪಡಿಸುತ್ತಿದೆ ಎಂದು ಹೇಳಿದ್ದಾರೆ.

ನೂತನ ಸಾಫ್ಟ್​​ವೇರ್ ಪಾವತಿ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಆಶಾ ಕಾರ್ಯಕರ್ತೆಯರಿಗೆ ನಿಗದಿತ ಗೌರವಧನವನ್ನು ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?

ಆರೋಗ್ಯ ಸಚಿವರ ಭರವಸೆಗಳು ಬೇಡಿಕೆಗಳನ್ನು ಪೂರ್ತಿಯಾಗಿ ಈಡೇರಿಸುವಂತಿಲ್ಲದ ಕಾರಣ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಪಿಎಫ್, ಇಎಸ್‌ಐ, ಗ್ರಾಚ್ಯುಟಿ ಸೌಲಭ್ಯಗಳನ್ನು ನೀಡಬೇಕು. ನಗರಗಳಲ್ಲಿ ಕೆಲಸ ಮಾಡುವ ಕಾರ್ಯಕರ್ತೆಯರಿಗೆ 2,000 ರೂ ಗೌರವಧನ ಹೆಚ್ಚಿಸುವುದು ಇತ್ಯಾದಿಗಳು ಅವರ ಇತರ ಬೇಡಿಕೆಗಳಾಗಿವೆ.

ಇದನ್ನೂ ಓದಿ: ಬಜೆಟ್‌ಗೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?