ಬ್ಲ್ಯಾಕ್ ಫಂಗಸ್‌ಗೆ ರಾಜ್ಯದ ಆರು ಕಡೆ ಉಚಿತ ಚಿಕಿತ್ಸೆ, ಈಗಾಗಲೇ 1000 ವೈಲ್ಸ್ ಔಷಧಿ ಬಂದಿದೆ: ಅಶ್ವತ್ಥ ನಾರಾಯಣ
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಬ್ಲ್ಯಾಕ್ ಫಂಗಸ್‌ಗೆ ಉಚಿತ ಚಿಕಿತ್ಸೆ ಕೊಡಲಾಗುತ್ತಿದೆ. ಎಲ್ಲಿಯೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರದಿಂದ ಇನ್ನೂ ಹೆಚ್ಚಿನ ಔಷಧಿ ಪಡೆಯಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರು: ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಬಳಸಲಾಗುವ ಔಷಧಿಗೆ ಕೊರತೆ ಇಲ್ಲ. ಈಗಾಗಲೇ ಕೇಂದ್ರದಿಂದ 1000 ವೈಲ್ಸ್ ಬಂದಿದೆ. ಈ ಔಷಧಿಯ ಕೊರತೆ ನೀಗಿಸಲು ಸರಕಾರ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು.
ಬೆಂಗಳೂರಿನಲ್ಲಿ ಬುಧವಾರ ಬಂಟರ ಸಂಘವು ಹೋಮ್ ಐಸೋಲೇಷನ್ ಆಗಿರುವ ಕೋವಿಡ್ ಸೋಂಕಿತರಿಗಾಗಿ ವ್ಯವಸ್ಥೆ ಮಾಡಿರುವ 20 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆಗೆ ಚಾಲನೆ ಕೊಟ್ಟ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು,
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಬ್ಲ್ಯಾಕ್ ಫಂಗಸ್‌ಗೆ ಉಚಿತ ಚಿಕಿತ್ಸೆ ಕೊಡಲಾಗುತ್ತಿದೆ. ಎಲ್ಲಿಯೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರದಿಂದ ಇನ್ನೂ ಹೆಚ್ಚಿನ ಔಷಧಿ ಪಡೆಯಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಮಧುಕರ ಶೆಟ್ಟಿ, ಉಮೇಶ ಶೆಟ್ಟಿ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಬೇಲೂರು, ಸಂಘದ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ನಿಶಾಕಾಂತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಕೊರೊನಾ ಸೋಂಕಿತ 7 ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಹೊರ ಜಿಲ್ಲೆಗಳ ರೋಗಿಗಳು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಧಾರವಾಡ, ಕೊಪ್ಪಳ, ಚಿತ್ರದುರ್ಗ ದಾವಣಗೆರೆ, ಹರಿಹರದ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಈಗಾಗಲೇ 6 ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಪೂರ್ಣಗೊಂಡಿದೆ.
ಅನ್ಯ ಚಿಕಿತ್ಸೆಗೆ ದಾಖಲಾದವರಲ್ಲಿ ಕೊರೊನಾ ದೃಢಪಟ್ಟಿತ್ತು. ಮಧುಮೇಹ ಕಾಯಿಲೆಯಿಂದಲೂ ಸೋಂಕಿತರು ಬಳಲುತ್ತಿದ್ದಾರೆ. ಈ ಬಗ್ಗೆ ಉಡುಪಿ ಡಿಹೆಚ್ಒ ಡಾ.ಸುಧೀರ್ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ಗದಗ ಜಿಲ್ಲೆಯಲ್ಲಿ ಇಬ್ಬರಿಗೆ ಬ್ಲ್ಯಾಕ್ ಫಂಗಸ್ ಗದಗ ಜಿಲ್ಲೆಯಲ್ಲಿ ಇಬ್ಬರಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟಿವಿ9ಗೆ ಗದಗ ಡಿಸಿ ಸುಂದರೇಶಬಾಬು ಮಾಹಿತಿ ನೀಡಿದ್ದಾರೆ. ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ನೀಡಲು ಔಷಧ ಇಲ್ಲ. ಇದ್ದ ಸೌಲಭ್ಯದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ಸಂಕಷ್ಟ; ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವ ಸಲುವಾಗಿ ಪರ್ಯಾಯ ಕ್ರಮಕ್ಕೆ ಸಿದ್ಧತೆ: ಸಚಿವ ಸುರೇಶ್ ಕುಮಾರ್
ಕೊರೊನಾ ಸೋಂಕಿತರಿಗೆ ಬೇಕಿರುವ ಕೊಲಿಸ್ಟಿನ್ ಮಾತ್ರೆ ಪೂರೈಕೆಗೆ ಕೇಂದ್ರದ ಒಪ್ಪಿಗೆ: ರಾಜ್ಯ ಆರೋಗ್ಯ ಇಲಾಖೆ ಮಾಹಿತಿ
Published On - 9:51 pm, Wed, 19 May 21