ವರ್ಕ್ ಫ್ರಮ್ ಹೋಮ್ ಪದ್ಧತಿಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ: ಸಚಿವ ಅಶ್ವತ್ಥ್ ನಾರಾಯಣ ಮಾಹಿತಿ

| Updated By: ganapathi bhat

Updated on: Nov 02, 2021 | 8:27 PM

Work from Home: ಕೇಂದ್ರದ ಐಟಿ ಸಚಿವರು 24ನೇ ಟೆಕ್ ಸಮ್ಮಿಟ್​ನಲ್ಲಿದ್ದಾರೆ. ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಪಿಪಿಪಿ ಮಾಡೆಲ್​ನಲ್ಲಿ ಹಲವು ಯೋಜನೆ ತರಲು ಚಿಂತನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವರ್ಕ್ ಫ್ರಮ್ ಹೋಮ್ ಪದ್ಧತಿಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ: ಸಚಿವ ಅಶ್ವತ್ಥ್ ನಾರಾಯಣ ಮಾಹಿತಿ
ಅಶ್ವತ್ಥ್ ನಾರಾಯಣ
Follow us on

ದೆಹಲಿ: ಪ್ರಸ್ತುತ ವರ್ಕ್ ಫ್ರಮ್ ಹೋಮ್ ಪದ್ಧತಿ ಹೆಚ್ಚಾಗಿದೆ. ಹೀಗಾಗಿ ವರ್ಕ್ ಫ್ರಮ್​ ಹೋಮ್​ಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸಚಿವರ ಭೇಟಿ ವೇಳೆ ಈ ಬಗ್ಗೆ ಮನವಿ ಮಾಡಿದ್ದೇನೆ ಎಂದು ದೆಹಲಿಯಲ್ಲಿ ಐಟಿ-ಬಿಟಿ ಸಚಿವ ಅಶ್ವತ್ಥ್ ನಾರಾಯಣ ಇಂದು (ನವೆಂಬರ್ 2) ಹೇಳಿಕೆ ನೀಡಿದ್ದಾರೆ. ಕೇಂದ್ರದ ಐಟಿ ಸಚಿವರು 24ನೇ ಟೆಕ್ ಸಮ್ಮಿಟ್​ನಲ್ಲಿದ್ದಾರೆ. ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಪಿಪಿಪಿ ಮಾಡೆಲ್​ನಲ್ಲಿ ಹಲವು ಯೋಜನೆ ತರಲು ಚಿಂತನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸ್ಟಾರ್ಟ್​ಅಪ್​ಗಳಿಗೆ ಸಾಲ ನೀಡುವ ಬಗ್ಗೆ ಹೊಸ ಯೋಜನೆ ಬಗ್ಗೆ ವಿಚಾರ ಮಾಡಲಾಗಿದೆ. ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಲಾಗಿದೆ. ಆರಂಭದಲ್ಲಿ ಬಂಡವಾಳ ಹೂಡಿಕೆಗೆ ಸರ್ಕಾರದಿಂದ ನೆರವು ನೀಡಲಾಗುತ್ತದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ನೂತನ ಶಿಕ್ಷಣ ನೀತಿ ಬಗ್ಗೆ ಕೇಂದ್ರ ಶಿಕ್ಷಣ ಸಚಿವರ ಜತೆಗೆ ಚರ್ಚಿಸಿದ್ದೇನೆ. ರಾಜ್ಯಕ್ಕೆ ಬಂದು ಉನ್ನತ ಮಟ್ಟದ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂದು ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ. ಜ್ಞಾನದ ಜತೆಗೆ ಉದ್ಯಮಶೀಲತೆ ಹೆಚ್ಚಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಮಾಡಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಜತೆ ಚರ್ಚಿಸಿದ ಬಳಿಕ ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಇತಿಹಾಸ ತಿರುಚುವ ಪ್ರಯತ್ನವಲ್ಲ. ಎನ್​ಇಪಿಯಿಂದ ಆಗುವ ಸಮಸ್ಯೆ ಏನೆಂದು ಸರಿಯಾಗಿ ಹೇಳ್ತಿಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಕರ್ನಾಟಕ ಉಪಚುನಾವಣೆ ಫಲಿತಾಂಶದ​ ಬಗ್ಗೆ ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಸಿಂದಗಿಯಲ್ಲಿ ಜನರು ಪಕ್ಷವನ್ನ ನೋಡಿ ಮತ ಹಾಕಿದ್ದಾರೆ. ಹಾನಗಲ್‌ ಕ್ಷೇತ್ರದಲ್ಲಿನ ಗೆಲುವು ಅದು ವ್ಯಕ್ತಿಗತ ಗೆಲುವು. ಹಾನಗಲ್‌ನಲ್ಲಿ ಅದು ಶ್ರೀನಿವಾಸ್ ಮಾನೆಗೆ ಸಿಕ್ಕ ಗೆಲುವು. ಹಾನಗಲ್​​ನಲ್ಲಿ ಕಾಂಗ್ರೆಸ್​ ಪಕ್ಷದ ಗೆಲುವು ಅಲ್ಲ ಎಂದು ಅಶ್ವತ್ಥ್​ ನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಟ್ ಕಾಯಿನ್ ದಂಧೆ ವಿಚಾರವಾಗಿ ಅವರು ಮಾತನಾಡಿದ್ದಾರೆ. ಬಿಟ್ ಕಾಯಿನ್ ದಂಧೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಮರೆಮಾಚುವ ಉದ್ದೇಶ ಇಲ್ಲ, ದಾಖಲೆ ಇದ್ರೆ ನೀಡಲಿ. ತನಿಖಾ ಸಂಸ್ಥೆಗಳಿಗೆ ತನಿಖೆ ನಡೆಸಲು ಅವಕಾಶ ಇದೆ ಎಂದು ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ