ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

TV9 Digital Desk

| Edited By: sandhya thejappa

Updated on: Jun 24, 2021 | 2:47 PM

ಕೊರೊನಾ ಮೂರನೇ ಅಲೆ ಅಪ್ಪಳಿಸುವ ಹಿನ್ನೆಲೆ ಜುಲೈ ತಿಂಗಳೊಳಗೆ ಸಂಪೂರ್ಣವಾಗಿ 18 ವರ್ಷನವರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ, ಸಹಾಯಕ ಸಿಬ್ಬಂದಿಗೆ ಲಸಿಕೆ ನೀಡುವುದಕ್ಕೆ ನಿರ್ಧಾರವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಸಮನ್ವಯದೊಂದಿಗೆ ಹಾಗೂ ಕೇಂದ್ರದ ಮಾರ್ಗಸೂಚಿಯಂತೆ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಟ್ವೀಟ್ ಮಾಡಿದ್ದಾರೆ. ಕಾಲೇಜು ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಕೊವಿಡ್ ಲಸಿಕೆ ನೀಡಿದ ಬಳಿಕವಷ್ಟೇ ಕಾಲೇಜು ಆರಂಭವಾಗುತ್ತದೆ. ಜುಲೈ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ವ್ಯಾಕ್ಸಿನ್ ನೀಡಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಕೊರೊನಾ ಮೂರನೇ ಅಲೆ ಅಪ್ಪಳಿಸುವ ಹಿನ್ನೆಲೆ ಜುಲೈ ತಿಂಗಳೊಳಗೆ ಸಂಪೂರ್ಣವಾಗಿ 18 ವರ್ಷನವರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ತಿಳಿಸಿದ್ದು, ಕಾಲೇಜು ಹಂತದಲ್ಲೇ ಎಲ್ಲರಿಗೂ ವ್ಯಾಕ್ಸಿನ್ ನೀಡಲು ಸರ್ಕಾರ ಮುಂದಾಗಿದೆ.

ಶೈಕ್ಷಣಿಕ ಚಟುವಟಿಕೆಗಳು ನಿಂತಿಲ್ಲ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿಂತಿಲ್ಲ. ಆನ್​ಲೈನ್​ನಲ್ಲಿ ಚಟುವಟಿಕೆಗಳು ಮುಂದುವರಿದಿದೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗೆ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಕ್ಕೆ ಅವಕಾಶ ನೀಡಲಾಗುವುದು. ಒಂದು ಡೋಸ್ ಲಸಿಕೆ ಪಡೆದ ಬಳಿಕ ಕಾಲೇಜು ಆರಂಭಿಸಲಾಗುತ್ತದೆ. ಅಲ್ಲಿಯವರೆಗೂ ಕಾಲೇಜಿಗೆ ಬರುವುದು ಕಡ್ಡಾಯ ಮಾಡಿಲ್ಲ. ಒಂದು ಡೋಸ್ ಲಸಿಕೆ ಬಳಿಕ ಕಾಲೇಜಿಗೆ ಬರಬಹುದು. ಇಮ್ಯೂನಿಟಿ ಪವರ್ ಹೆಚ್ಚುತ್ತದೆ. ಎರಡನೇ ಡೋಸ್ ನಂತರ ಕೊಡಬಹುದು ಎಂದು ತಿಳಿಸಿದರು.

ಇದನ್ನೂ ಓದಿ

ಬಾಲ್ಡ್​ವಿನ್​ ಶಾಲೆಯಿಂದ ಆನ್​ಲೈನ್​ ಕ್ಲಾಸ್ ಆರಂಭ; ಟಿವಿ9ಗೆ ಧನ್ಯವಾದ ತಿಳಿಸಿದ ಪೋಷಕರು

School Reopening: ಕೊವಿಡ್ ತಾಂತ್ರಿಕ ಸಮಿತಿ ವರದಿ ಬೆನ್ನಲೆ ಶಾಲೆ ಆರಂಭಕ್ಕೆ ಶಿಕ್ಷಣ ತಜ್ಞರ ಸಲಹೆ

(Ashwath Narayan says college would be started after Corona vaccine was given)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada