AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಫ್ಲೈಓವರ್​ ಕಾಮಗಾರಿ ವೇಳೆ ಎಎಸ್​ಐ ಸಾವು ಕೇಸ್​: 11 ಜನರ ಬಂಧನ

ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸರ್ಕಾರಿ ಅಧಿಕಾರಿಯೋರ್ವರು ಫ್ಲೈ ಓವರ್ ಕಾಮಗಾರಿಗೆ ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರು ಹುಬ್ಬಳ್ಳಿ ಪೊಲೀಸರು ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಎಂಬ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಫ್ಲೈಓವರ್​ ಕಾಮಗಾರಿ ವೇಳೆ ಎಎಸ್​ಐ ಸಾವು ಕೇಸ್​: 11 ಜನರ ಬಂಧನ
ಶಿವಕುಮಾರ್ ಪತ್ತಾರ್
| Edited By: |

Updated on:Sep 16, 2024 | 3:14 PM

Share

ಹುಬ್ಬಳ್ಳಿ, ಸೆಪ್ಟೆಂಬರ್​ 16: ನಗರದ ಹಳೆ ಕೋರ್ಟ್​ ಬಳಿ ತೆರಳುತ್ತಿದ್ದಾಗ ಫ್ಲೈಓವರ್ ಕಾಮಗಾರಿಯ (Flyover Construction) ರಾಡ್​ ತಲೆ ಮೇಲೆ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸರು, ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ.

11 ಜನರ ಬಂಧನ

ಝಂಡು ಕನ್​ಸ್ಟ್ರಕ್ಷನ್​ ಸೂಪರ್ ವೈಸರ್​ ಹರ್ಷ ಹೊಸಗಾಣಿಗೇರ, ಲೈಸನಿಂಗ್ ಇಂಜಿನಿಯರ್ ಜಿತೇಂದ್ರ ಪಾಲ್, ಇಂಜನಿಯರ್ ಭೂಪೇಂದರ್, ನೌಕರರಾದ ಮಹಮ್ಮದ್ ಮಿಯಾ, ಅಸ್ಲಂ, ಮೊಹಮ್ಮದ್ ಹಾಜಿ, ಸಬೀಬ್, ರಿಜಾವುಲ್, ಶಮೀಮ್ ಅಲಿಯಾಸ್ ಪಿಂಟು ಶೇಕ್, ಮೊಹಮ್ಮದ್ ಆರೀಫ್ ಹಾಗೂ ಕಾರ್ಮಿಕ ಗುತ್ತಿಗೆದಾರ ಮೊಹಮ್ಮದ್ ರಬಿವುಲ್ ಹಕ್ ಬಂಧಿತರು.

ಇದನ್ನೂ ಓದಿ: ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಗಾಯಗೊಂಡಿದ್ದ ಎಎಸ್​ಐ ಸಾವು

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಕಳೆದ ಆರು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನಾಭಿರಾಜ್ ನಿನ್ನೆ ‌ಕೊನೆಯುಸಿರೆಳೆದಿದ್ದಾರೆ. ಘಟನೆ ನಡೆದ ದಿನವೇ 19 ಜನರ ಮೇಲೆ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಾರೇ ಇರಲಿ ಕಾನೂನು ಕ್ರಮ ಕೈಗೊಳುತ್ತೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್​ ಹೇಳಿದ್ದರು.

ಹುಬ್ಬಳ್ಳಿಯ ಹೃದಯ ಭಾಗ ಚೆನ್ನಮ್ಮ ವೃತ್ತದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಗೆ ಬಲಿಪಡೆದುಕೊಂಡಿದೆ. ಅದು‌ ಕೂಡ ಓರ್ವ ಪೊಲೀಸ್ ಅಧಿಕಾರಿ. ಕಳೆದ ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಕೆಲಸಕ್ಕೆ ಹೋಗುವ ಸಮಯದಲ್ಲಿ ಹುಬ್ಬಳ್ಳಿಯ ಕೋರ್ಟ್ ವೃತ್ತದ ಬಳಿ ಫ್ಲೈ ಓವರ್ ಕಾಮಗಾರಿಯ ರಾಡ್ ನಾಭಿರಾಜ್ ದಯಣ್ಣವರ ತಲೆ ಮೇಲೆ ಬಿದ್ದಿತ್ತು. ಹೆಲ್ಮೆಟ್ ಹಾಕಿದ್ದರೂ ಹೆಲ್ಮೆಟ್ ಸೀಳಿ ನಾಭಿರಾಜ್ ತಲೆಗೆ ಗಂಭೀರ ಗಾಯವಾಗಿತ್ತು.

ಕೂಡಲೇ ನಾಭಿರಾಜ್​ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಂದು ರಾತ್ರಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ನಾಭಿರಾಜ್​ರನ್ನ ಶಿಫ್ಟ್ ‌ಮಾಡಲಾಗಿತ್ತು. ಆದರೆ ನಿನ್ನೆ ಬೆಳಗಿನ ಜಾವ 3.45 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಫ್ಲೈಓವರ್ ಕಾಮಗಾರಿ ವೇಳೆ ASI ತಲೆ ಮೇಲೆ ಬಿದ್ದ ರಾಡ್; ​​21 ಗಂಟೆ ಕಳೆದರೂ ಪ್ರಜ್ಞಾಹೀನ ಸ್ಥಿತಿ, 16 ಜನರ ವಿರುದ್ಧ ದೂರು

ಇದೇ ಸ್ಥಳದಲ್ಲಿ ಹಿಂದೆ ಎರಡು ಬಾರಿ ಅವಘಡ ಸಂಭವಿಸಿದಾಗಲೂ ಗುತ್ತಿಗೆದಾದರರು ಎಚ್ಚೆತ್ತುಕೊಂಡಿಲ್ಲ. ಅದರ ಪರಿಣಾಮ ಹತ್ತು ತಿಂಗಳಲ್ಲಿ ನಿವೃತ್ತಿಯಾಗಬೇಕಿದ್ದ ನಾಭಿರಾಜ್ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತ ದೂರು ದಾಖಲಾಗುತ್ತಲೇ ಝಂಡು ಕನ್​ಸ್ಟ್ರಕ್ಷನ್​ನ ಹುಬ್ಬಳ್ಳಿಯ ಎರಡು ಕಚೇರಿಗಳನ್ನು ಬಂದ್ ಮಾಡಿಕೊಂಡು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Mon, 16 September 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು