ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

KS Eshwarappa Case News: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಗೆ ಸಂಕಷ್ಟ ತಂದೊಡ್ಡಿದೆ. ಹೌದು....ಈ ಪ್ರಕರಣ ರದ್ದು ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದು, ಆದ್ರೆ ಹೈಕೋರ್ಟ್ ಈಶ್ವರಪ್ಪನವರ ಅರ್ಜಿಯನ್ನು ವಜಾ ಮಾಡಿದೆ.

ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್
Ks Eshwarappa
Edited By:

Updated on: Jul 03, 2026 | 2:32 PM

ಮುಖ್ಯಾಂಶಗಳು

  • ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ನಲ್ಲಿ ಕೆ.ಎಸ್.ಈಶ್ವರಪ್ಪಗೆ ಸಂಕಷ್ಟ
  • ಪ್ರಕರಣ ರದ್ದು ಕೋರಿದ್ದ ಕೆ.ಎಸ್.ಈಶ್ವರಪ್ಪ‌ ಸಲ್ಲಿಸಿದ್ದ ಅರ್ಜಿ ವಜಾ
  • ನ್ಯಾyಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ

ಬೆಂಗಳೂರು, (ಜುಲೈ 03): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ (KS Eshwarappa) ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದು ಕೋರಿ ಕೆ.ಎಸ್.ಈಶ್ವರಪ್ಪ‌ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 03) ಕರ್ನಾಟಕ ಹೈಕೋರ್ಟ್ (Karnataka High Court) ವಜಾ ಮಾಡಿದೆ.

ಕೆ.ಎಸ್.ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ ಮಾಡಿದರು. ಬಳಿಕ ಲೋಕಾಯುಕ್ತ ಎಸ್​ಪಿಪಿ ವೆಂಕಟೇಶ್ ಅರಬಟ್ಟಿ ಪ್ರತಿವಾದ ಮಂಡಿಸಿದ್ದು, ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೋರ್ಟ್​​ ಮುಂದೆ ಸ್ಪಷ್ಟಪಡಿಸಿದರು. ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್‌, ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತ ಪೊಲೀಸರ ಮುಂದೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ಆನಂತರ ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.

ತದನಂತರ ನ್ಯಾಯಾಲಯವು ಮರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಆ ಆದೇಶ ಆಧರಿಸಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸದಾಗಿ ಎಫ್‌ಐಆರ್‌ ದಾಖಲಿಸಿದ್ದರು. ತದನಂತರ ಈಶ್ವರಪ್ಪನವರು ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಹೈಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us