ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಹುದ್ದೆ ಪರೀಕ್ಷೆ: ಶೀಘ್ರವೇ ಮರು ದಿನಾಂಕ ನಿಗದಿ

ಸಹಾಯಕ ಲೋಕೋ ಪೈಲಟ್ ಹುದ್ದೆ ಮುಂಬಡ್ತಿ ಪರೀಕ್ಷೆ ಕನ್ನಡದಲ್ಲಿ ನಡೆಸುವಂತೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಸಚಿವ ವಿ.ಸೋಮಣ್ಣ ಸೂಚಿಸಿದ್ದರು. ಅವರ ನಿರ್ದೇಶನದಂತೆ ಇದೀಗ ಕನ್ನಡದಲ್ಲಿಯೂ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ವಲಯವು ಕ್ರಮ ಕೈಗೊಂಡಿದೆ. ಶೀಘ್ರವೇ ದಿನಾಂಕ ಮರು ನಿಗದಿಪಡಿಸಿ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ.

ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಹುದ್ದೆ ಪರೀಕ್ಷೆ: ಶೀಘ್ರವೇ ಮರು ದಿನಾಂಕ ನಿಗದಿ
ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಹುದ್ದೆ ಪರೀಕ್ಷೆ: ಶೀಘ್ರವೇ ಮರು ದಿನಾಂಕ ನಿಗದಿ
Edited By:

Updated on: Aug 07, 2024 | 9:42 PM

ಬೆಂಗಳೂರು, ಆಗಸ್ಟ್​​ 07: ವಿಷಯ ರೈಲ್ವೆ ಮತ್ತು ಜಲ ಶಕ್ತಿ ಖಾತೆ ಸಚಿವ ವಿ. ಸೋಮಣ್ಣ (V. Somanna) ನಿರ್ದೇಶನದಂತೆ ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ (Assistant Loco Pilot) ಹುದ್ದೆ ಮುಂಬಡ್ತಿ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಲಾಗಿದೆ. ಶೀಘ್ರವೇ ದಿನಾಂಕ ಮರು ನಿಗದಿಪಡಿಸಿ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ವಲಯವು ಮುಂದಾಗಿದೆ. ಆಗಸ್ಟ್ 3ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಿಗದಿಯಾಗಿತ್ತು. ಆದರೆ ಕೇವಲ ಇಂಗ್ಲಿಷ್‌, ಹಿಂದಿ ಭಾಷೆಗಳಲ್ಲಿ ಮಾತ್ರ ಬರೆಯಲು ಅವಕಾಶವಿತ್ತು. ಕನ್ನಡದಲ್ಲೂ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಸೂಚನೆ ನೀಡಲಾಗಿದೆ.

ಇಲಾಖೆಯ ಈ ಕ್ರಮದಿಂದ ನೈರುತ್ಯ ರೈಲ್ವೆ ವಲಯದಲ್ಲಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಅನಾನುಕೂಲವಾಗುತ್ತಿದೆ ಎಂಬ ವಿಷಯ ರೈಲ್ವೆ ಮತ್ತು ಜಲ ಶಕ್ತಿ ಖಾತೆ ಸಚಿವ ವಿ ಸೋಮಣ್ಣ ಅವರ ಗಮನಕ್ಕೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾಗಿ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಕನ್ನಡದಲ್ಲಿಯೂ ಪರೀಕ್ಷೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. ಇದರ ಫಲವಾಗಿ, ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಮುಂಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಲು ಇದೀಗ ನೈರುತ್ಯ ರೈಲ್ವೆ ವಲಯವು ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ಗುಡ್​ನ್ಯೂಸ್: ನೈಋತ್ಯ ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ

ಈ ಸಂಬಂಧ ನೈರುತ್ಯ ರೈಲ್ವೆ ಕೇಂದ್ರ ಕಚೇರಿಯಿಂದ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮೂರೂ ವಿಭಾಗೀಯ ಅಧಿಕಾರಿಗಳಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಇದರಿಂದ ರೈಲ್ವೆಯಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗ ಸಿಬ್ಬಂದಿಗಳಿಗೆ ಸಹಾಯಕವಾಗಲಿದೆ. ಸದ್ಯದಲ್ಲಿಯೇ ದಿನಾಂಕ ಮರು-ನಿಗದಿಪಡಿಸಿ ಪರೀಕ್ಷೆಯನ್ನು ನಡೆಸಲು ಕ್ರಮವಹಿಸಲಾಗುತ್ತಿದೆ.

ಇದನ್ನೂ ಓದಿ: RRB JE Recruitment 2024: ರೈಲ್ವೆ ನೇಮಕಾತಿ ಮಂಡಳಿ ಜೂನಿಯರ್ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕನ್ನಡ ಭಾಷೆಗೆ ಪ್ರಾತಿನಿಧ್ಯ, ಪ್ರಾಮುಖ್ಯತೆ ನೀಡುವ ಜೊತೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಕನ್ನಡವನ್ನು ಮಾತೃಭಾಷೆಯಾಗಿ ಹೊಂದಿದ ಅನೇಕ ಗ್ರೂಪ್ -ಡಿ, ಗ್ರೂಪ್- ಸಿ ಸಿಬ್ಬಂದಿಗಳಿಗೆ ಪರೀಕ್ಷೆಯನ್ನು ತಮ್ಮ ಸ್ವಂತ ಭಾಷೆಯಲ್ಲಿಯೇ ಆತ್ಮವಿಶ್ವಾಸದಿಂದ ಎದುರಿಸಿಲು ಈ ನಿರ್ಧಾರ ಪೂರಕವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us