ದೆಹಲಿ: ಜನವರಿ 26ರಂದು ದೆಹಲಿಯ ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ(Delhi Republic Day Parade) ಈ ವರ್ಷ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ(Karnataka Tableau) ಅವಕಾಶ ನಿರಾಕರಿಸಲಾಗಿತ್ತು. ಕೇಂದ್ರದ ಈ ನಿರ್ಧಾರಕ್ಕೆ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ.
ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. 14ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯವ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದ ಬಗ್ಗೆ ಟಿವಿ9 ವರದಿ ಮಾಡಿತ್ತು. ಟಿವಿ9 ವರದಿ ಬಳಿಕ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಗಣರಾಜ್ಯೋತ್ಸವ ಪರೇಡ್: ಕರ್ನಾಟಕ ಸ್ತಬ್ಧಚಿತ್ರಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರ
ಪದ್ಮಶ್ರೀ ಪುರಸ್ಕೃತ ಮಹಿಳಾ ಸಾಧಕರ ಸಾಧನೆ ಅನಾವರಣಗೊಳಿಸಲು ರಾಜ್ಯ ನಾರಿ ಶಕ್ತಿ ಕಲ್ಪನೆಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ ಮೂವರು ಮಹಿಳಾ ಸಾಧಕಿಯರ ಬಗ್ಗೆ ಸ್ತಬ್ಧಚಿತ್ರ ತಯಾರಾಗಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಿಸಿಗೌಡ ಇವರ ಸಾಧನೆ ಅನಾವರಣಗೊಳ್ಳಲಿದೆ.
ಕಳೆದ ವರ್ಷ ದೆಹಲಿಯ ರಾಜಪಥ್‍ನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಭಾಗವಹಿಸಿದ್ದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ಸಿಕ್ಕಿತ್ತು. ಸತತ 13 ವರ್ಷಗಳಿಂದ ಪ್ರದರ್ಶನಗೊಳ್ಳುತ್ತ ಬಂದಿದ್ದ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ವರ್ಷವೂ ಅವಕಾಶ ಸಿಕ್ಕಿದ್ದು ಸತತ 14ನೇ ಬಾರಿ ರಾಜ್ಯದ ಸ್ಥಬ್ದ ಚಿತ್ರ ಪ್ರದರ್ಶನಗೊಳ್ಳಲಿದೆ.
#RepublicDay ನಲ್ಲಿ ರಾಜ್ಯದಿಂದ ಪ್ರದರ್ಶನಗೊಂಡ ‘ಕರ್ನಾಟಕ: ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು’ ವಿಷಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.
ಸ್ತಬ್ಧಚಿತ್ರವನ್ನು ರೂಪಿಸಿದ ಹಾಗೂ ಪ್ರದರ್ಶನದಲ್ಲಿ ಪಾಲ್ಗೊಂಡ ಕಲಾವಿದರು, ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಹಾರ್ದಿಕ ಅಭಿನಂದನೆಗಳು ?@PMOIndia @CMofKarnataka pic.twitter.com/eFHefuAdOU
— DIPR Karnataka (@KarnatakaVarthe) February 4, 2022
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ