ರಾಜ್ಯದಲ್ಲಿ ಮುಂದುವರಿದ ಕೊರೊನಾ ರುದ್ರನರ್ತನ, ಒಂದೇ ದಿನ 6,805 ಜನರಿಗೆ ವಕ್ಕರಿಸಿದ ಸೋಂಕು
ಬೆಂಗಳೂರು: ಕೊರೊನಾ ಆರ್ಭಟ ರಾಜ್ಯದಲ್ಲಿ ಮುಂದುವರಿದಿದ್ದು ಇಂದು ಹೊಸದಾಗಿ 6,805 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಈಗ 1,58,254ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2,544 ಜನರಿಗೆ ಕೊರೊನಾ ಸೋಂಕು ವಕ್ಕರಿಸಿದ್ದು, ಇದರೊಂದಿಗೆ ಕೊರೊನಾ ಪೀಡಿತರ ಸಂಖ್ಯೆ ಬೆಂಗಳೂರಿನಲ್ಲಿ 67,425 ಕ್ಕೇರಿಕೆಯಾಗಿದೆ. ಬೆಂಗಳೂರಿನ 15 ಜನರು ಮತ್ತು ದಕ್ಷಿಣ ಕನ್ನಡದ 11 ಜನರು ಸೇರಿ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 93 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೆಂಗಳೂರು […]
ಬೆಂಗಳೂರು: ಕೊರೊನಾ ಆರ್ಭಟ ರಾಜ್ಯದಲ್ಲಿ ಮುಂದುವರಿದಿದ್ದು ಇಂದು ಹೊಸದಾಗಿ 6,805 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಈಗ 1,58,254ಕ್ಕೆ ಏರಿಕೆಯಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2,544 ಜನರಿಗೆ ಕೊರೊನಾ ಸೋಂಕು ವಕ್ಕರಿಸಿದ್ದು, ಇದರೊಂದಿಗೆ ಕೊರೊನಾ ಪೀಡಿತರ ಸಂಖ್ಯೆ ಬೆಂಗಳೂರಿನಲ್ಲಿ 67,425 ಕ್ಕೇರಿಕೆಯಾಗಿದೆ.
ಬೆಂಗಳೂರಿನ 15 ಜನರು ಮತ್ತು ದಕ್ಷಿಣ ಕನ್ನಡದ 11 ಜನರು ಸೇರಿ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 93 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 2,897 ಕ್ಕೇರಿಕೆಯಾಗಿದೆ.
ಕೊರೊನಾದಿಂದ ಗುಣಮುಖರಾಗಿ ಒಟ್ಟು 80,281 ಜನರು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಹಾಗೇನೆ 75,068 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.