ಕರ್ನಾಟಕದಲ್ಲಿ ಇಂದು 7,665 ಜನರಿಗೆ ಕೊರೊನಾ, 139 ಜನರ ಸಾವು
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ರಾಜ್ಯದಲ್ಲಿಂದು ಹೊಸದಾಗಿ 7,665 ಜನರಿಗೆ ಕೊರೊನಾ ಸೋಂಕು ತಗಲಿರೋದು ದೃಢವಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 2242 ಜನರಿಗೆ ಸೋಂಕು ತಗುಲಿದ್ದು, ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ 94,106 ಕ್ಕೇರಿಕೆಯಾಗಿದೆ. ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಇವತ್ತು 139 ಜನರ ಸಾವನ್ನಪ್ಪಿದ್ದು, ಇದರಲ್ಲಿ ಬೆಂಗಳೂರಿನಲ್ಲಿಯೇ 49 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೊನಾದಿಂದ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 4,201 ರಷ್ಟಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಪೈಕಿ 1,56,949 ಜನ […]

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ರಾಜ್ಯದಲ್ಲಿಂದು ಹೊಸದಾಗಿ 7,665 ಜನರಿಗೆ ಕೊರೊನಾ ಸೋಂಕು ತಗಲಿರೋದು ದೃಢವಾಗಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 2242 ಜನರಿಗೆ ಸೋಂಕು ತಗುಲಿದ್ದು, ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ 94,106 ಕ್ಕೇರಿಕೆಯಾಗಿದೆ.
ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಇವತ್ತು 139 ಜನರ ಸಾವನ್ನಪ್ಪಿದ್ದು, ಇದರಲ್ಲಿ ಬೆಂಗಳೂರಿನಲ್ಲಿಯೇ 49 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೊನಾದಿಂದ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 4,201 ರಷ್ಟಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಪೈಕಿ 1,56,949 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 79,782 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.



