ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ

ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಡಿ.ಸಿ ಕಚೇರಿ ಎದುರು AT&S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರಿಂದ ಧರಣಿ ನಡೆಯಿತು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT&S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ
AT&S ನೌಕರರ ಧರಣಿ
Follow us
KUSHAL V
|

Updated on:Feb 11, 2021 | 5:51 PM

ಮೈಸೂರು: ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು AT & S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರು ಧರಣಿ ನಡೆಸಿದರು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT & S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ಕಾರ್ಮಿಕರು ಧರಣಿಗೆ ಮುಂದಾಗಲು ಕಾರಣವೇನು? ಕೊರೊನಾ ಸಂದರ್ಭದಲ್ಲಿ ರಜೆ ಕೇಳಿದ್ದಕ್ಕೆ AT & S ​ ಕಾರ್ಖಾನೆ 71 ಕಾರ್ಮಿಕರನ್ನು ಕೆಲಸದಿಂದ ತೆಗೆದಿತ್ತು ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 12 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕಂಪನಿ ಉದ್ಯೋಗದಿಂದ ಏಕಾಏಕಿ ವಜಾಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಇದೀಗ, ಕೆಲಸದಿಂದ ವಜಾಗೊಂಡ 71 ಕಾರ್ಮಿಕರ ಜೀವನ ದುಸ್ತರವಾಗಿದೆ. ಹಾಗಾಗಿ, ಜಿಲ್ಲಾಡಳಿತ ಮಧ್ಯಪ್ರವೇಶಿಸಿ ತಮ್ಮನ್ನು ಕಂಪನಿ ಮರುನೇಮಕಾತಿ ಮಾಡಿಕೊಳ್ಳೂವಂತೆ ಮಾಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಜೊತೆಗೆ, ಕಾರ್ಮಿಕರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಜಿಲ್ಲಾಡಳಿತಕ್ಕೆ ಕಾರ್ಮಿಕರು ಒತ್ತಾಯಿಸಿದರು.

ಇದನ್ನೂ ಓದಿ: ದೇವನಹಳ್ಳಿ: ದುಬೈನಿಂದ ತಂದಿದ್ದ ಡ್ರೋನ್, iPhone ಸೇರಿದಂತೆ 75 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

Published On - 5:36 pm, Thu, 11 February 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ