AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕರ ಬಗ್ಗೆ ಅಶ್ಲೀಲ ಪದ ಬಳಕೆ: ಅಟ್ರಾಸಿಟಿ ಕೇಸ್ ದಾಖಲಾಗುತ್ತಿದ್ದಂತೆಯೇ ಕತ್ತಿ ಸ್ಪಷ್ಟನೆ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಗಿಯುತ್ತಿದ್ದಂತೆಯೇ ಜಿಲ್ಲೆಯಲ್ಲಿ ಮತ್ತೊಂದು ಗುದ್ದಾಟ ಶುರುವಾಗಿದೆ. ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅಶೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ರಮೇಶ್ ಕತ್ತಿ ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ನಾಯಕರ ಬಗ್ಗೆ ಅಶ್ಲೀಲ ಪದ ಬಳಕೆ: ಅಟ್ರಾಸಿಟಿ ಕೇಸ್ ದಾಖಲಾಗುತ್ತಿದ್ದಂತೆಯೇ ಕತ್ತಿ ಸ್ಪಷ್ಟನೆ
Ramesh Katti
ಸಹದೇವ್​ ಮಾನೆ
| Edited By: |

Updated on:Oct 19, 2025 | 9:13 PM

Share

ಬೆಳಗಾವಿ, (ಅಕ್ಟೋಬರ್ 19): ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಸಮಾಜದ ಮುಖಂಡ ರಾಜಶೇಖರ ತಳವಾರ್​ ಅವರ ನೀಡಿದ ದೂರಿನ ಮೇರೆಗೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ(ಅಟ್ರಾಸಿಟಿ) ಕೇಸ್ ದಾಖಲಾಗಿದೆ. ಆದರೂ ಸಹ ನಾಳೆ ರಾಜ್ಯಾದ್ಯಂತ ಹೋರಾಟಕ್ಕೆ ವಾಲ್ಮೀಕಿ ಸಮಾಜ ಕರೆ ನೀಡಿದೆ. ಇದರ ಬೆನ್ನಲ್ಲೇ ರಮೇಶ್ ಕತ್ತಿ ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿರೋಧಿಗಳು ನನ್ನ ಹೇಳಿಕೆಯನ್ನ ತಿರುಚಿದ್ದಾರೆ. ಯಾರಿಗಯಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸ್ಪಷ್ಟನೆ ನೀಡಿದ ರಮೇಶ್ ಕತ್ತಿ

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದು, ನನ್ನ ಹೇಳಿಕೆಯನ್ನ ತಿರುಚಲಾಗಿದೆ. ಡಾಲ್ಬಿ ಹಚ್ಚಲು ಅಭಿಮಾನಿಗಳು ಒತ್ತಾಯಿಸಿದಾಗ ನಾನು ಬ್ಯಾಡರೋ (ಬೇಡ) ಎಂದಿದ್ದೆ. ಆದರೆ, ನನ್ನ ಹೇಳಿಕೆಯನ್ನ ನನ್ನ ಗೆಲುವು ಸಹಿಸಲಾಗದ ವಿರೋಧಿಗಳಿಂದ ತಿರುಚಲಾಗಿದೆ. ಇದರಿಂದ ಯಾರಿಗಯಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ನಾಯಕ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅಶ್ಲೀಲ ಪದ ಬಳಿಕೆ: ವಿಡಿಯೋ ವೈರಲ್

ರಾಜ್ಯಾದ್ಯಂತ ಹೋರಾಟಕ್ಕೆ ಕರೆ

ಈ ಪ್ರಕರಣ ಸಂಬಂಧ ವಾಲ್ಮೀಕಿ ಸಮುದಾಯದವರು ಆಕ್ರೋಶಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರಮೇಶ್ ಕತ್ತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾಳೆ (ಅಕ್ಟೋಬರ್ 19) ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯ ಹೋರಾಟಕ್ಕೆ ಕರೆ ನೀಡಿದೆ. ವಾಲ್ಮೀಕಿ ಸಮಾಜದ ನಾಯಕರು, ನಾಳೆ ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Published On - 9:12 pm, Sun, 19 October 25

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು