ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿ ಮತಾಂತರ ಯತ್ನ ಪ್ರಕರಣ ಬೆಂಗಳೂರಿಗೆ ವರ್ಗಾವಣೆ, ಇಬ್ಬರು ಆರೋಪಿಗಳು ಅರೆಸ್ಟ್

| Updated By: ಆಯೇಷಾ ಬಾನು

Updated on: Oct 05, 2022 | 10:19 AM

ಶ್ರೀಧರ್​ನನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದು ಆತನಿಗೆ ಕತ್ನಾ ಮಾಡಲಾಗಿದೆಯಂತೆ. ಬಲವಂತವಾಗಿ ಇಸ್ಲಾಂ ಧರ್ಮದಂತೆ 'ಕತ್ನಾ'‌ಮಾಡಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂ ಯುವಕನಿಗೆ ಬಲವಂತವಾಗಿ ಕತ್ನಾ ಮಾಡಿಸಿ ಮತಾಂತರ ಯತ್ನ ಪ್ರಕರಣ ಬೆಂಗಳೂರಿಗೆ ವರ್ಗಾವಣೆ, ಇಬ್ಬರು ಆರೋಪಿಗಳು ಅರೆಸ್ಟ್
ಬನಶಂಕರಿ ಠಾಣೆ
Follow us on

ಬೆಂಗಳೂರು: ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಪ್ರಕರಣ ಸಂಬಂಧ ಹುಬ್ಬಳ್ಳಿ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಈಗ ಇದನ್ನು ಬೆಂಗಳೂರಿನ ಬನಶಂಕರಿ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು ಬನಶಂಕರಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಶಬ್ಬೀರ್, ಹತಾವುರ್ ರೆಹಮಾನ್ ಬಂಧಿತ ಆರೋಪಿಗಳು. ನಾಪತ್ತೆಯಾದ ಮಸೀದಿ ಅಧ್ಯಕ್ಷ ನಯಾಜ್ ಪಾಷಾಗೆ ಶೋಧ ಕಾರ್ಯ ನಡೆಯುತ್ತಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಶ್ರೀಧರ ಎಂಬಾತನನ್ನು ಬಲವಂತವಾಗಿ ಮತಾಂತರ ಮಾಡಿರುವುದು ಬೆಂಗಳೂರಿನಲ್ಲಿ. ಈ ಹಿನ್ನೆಲೆಯಲ್ಲಿ ಅಲ್ಲಿನ ಬನಶಂಕರಿ ಪೊಲೀಸ್‌ ಠಾಣೆಗೆ ಪ್ರಕರಣ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಪ್ರಕರಣದಕ್ಕೆ ಸಂಬಂಧಿಸಿ ಎಸಿಪಿ ನೇತೃತ್ವದ ತಂಡವೊಂದು ಬೆಂಗಳೂರಿಗೆ ತೆರಳಿ, ಕೆಲವಷ್ಟು ಮಾಹಿತಿ ಸಂಗ್ರಹಿಸಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ಶ್ರೀಧರ್ ತನಗೆ ಹಣಕಾಸಿನ ತೊಂದರೆ ಎದುರಾಗಿದೆ ಎಂಬ ಬಗ್ಗೆ ಎ ಒನ್ ಆರೋಪಿ ಅತ್ತಾವರ ರೆಹಮಾನ್ ಬಳಿ ಹೇಳಿಕೊಂಡಿದ್ದ. ನಂತರ ಆತ ಶ್ರೀಧರ್ ಎಸ್​ಸಿ ಎಸ್​ಟಿ ಎಂದು ತಿಳಿದು ಎ2 ಆರೋಪಿ ಅಜಿಸಾಬ್ ಎಂಬಾತನನ್ನ ಬನಶಂಕರಿಯ ಮಸೀದಿಗೆ ಕರೆದುಕೊಂಡು ಹೋಗಿ ಪರಿಚಯಿಸಿದ್ದ. ಈ ವೇಳೆ ಅಜಿಸಾಬ್ ಹಿಂದೂ ದೇವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಇವರನ್ನೆಲ್ಲಾ ದೇವರಾ? ಎಂದು ದೇವರನ್ನು ನಿಂದಿಸಿದ್ದನಂತೆ. ನಂತರ ಇಸ್ಲಾಂ ಧರ್ಮದ ಬಗ್ಗೆ ಭೋದನೆ ಮಾಡಿ ಆ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿದ್ದನಂತೆ. ಬಳಿಕ ಅವನ ಮೊಬೈಲನ್ನ ಪಡೆದು ಒಂದು ವಾರಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿದ್ದರಂತೆ. ಇದೆಲ್ಲ ಆದ ಮೇಲೆ ಬಲವಂತವಾಗಿ ಕತ್ನಾ ಮಾಡಿಸಿದ್ದಾರೆ ಎಂದು ಶ್ರೀಧರ್ ಆರೋಪಿಸಿದ್ದಾರೆ. ಸದ್ಯ ಈ ಸಂಬಂಧ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಸದ್ಯ ಬನಶಂಕರಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಇದನ್ನೂ ಓದಿ: Crime News: ಆಸ್ತಿಗಾಗಿ 88 ವರ್ಷದ ವಯಸ್ಸಾದ ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ ಅರೆಸ್ಟ್

ದೂರಿನಲ್ಲಿರುವುದೇನು?

ಶ್ರೀಧರ್​ನನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದು ಆತನಿಗೆ ಕತ್ನಾ ಮಾಡಲಾಗಿದೆಯಂತೆ. ಬಲವಂತವಾಗಿ ಇಸ್ಲಾಂ ಧರ್ಮದಂತೆ ‘ಕತ್ನಾ’‌ಮಾಡಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ 12 ಜನರ ವಿರುದ್ಧ ದೂರು ದಾಖಲಾಗಿದೆ. ಇಸ್ಲಾಂ ಧರ್ಮದ ಭೋದನೆ ಮಾಡಿ, ಮರ್ಮಾಂಗದ ‘ಕತ್ನಾ’ಮಾಡಿದಲ್ಲದೆ ದನದ ಮಾಂಸವನ್ನ ಬಲವಂತವಾಗಿ ತಿನ್ನಿಸಿದ್ದಾರೆ ಎನ್ನಲಾಗಿದೆ. ಶ್ರೀಧರನಿಗೆ ಮೊಹಮ್ಮದ್ ಸಲ್ಮಾನ್ ಎಂದು ನಾಮಕರಣ ಮಾಡಿ ಖಾಲಿ ಬಾಂಡ್ ಪೇಪರ್ ಮೇಲೆ ಬರೆಸಿಕೊಂಡಿದ್ದಾರಂತೆ. ಬನಶಂಕರಿಯ ಮಸೀದಿಗೆ ಕರೆ ತಂದು ಅಕ್ರಮವಾಗಿ ಗೃಹಬಂಧನದಲ್ಲಿಟ್ಟಿದ್ದಾರೆಂದು ಶ್ರೀಧರ್ ಆರೋಪಿಸಿದ್ದಾರೆ. ಈ ವೇಳೆ ಶ್ರೀಧರ್ ಪ್ರತಿಭಟಿಸಿದಾಗ ಪರವಾನಿಗೆ ಇರುವ ಗನ್ ಇಟ್ಟು ಭಯೋತ್ಪಾದಕನಂತೆ ಬಿಂಬಿಸಿ ವಿಡಿಯೋ ಮಾಡಿಕೊಂಡಿದ್ದಾರಂತೆ. ನಂತರ ಮತಾಂತರದ ಬಗ್ಗೆ ಬರೆಸಿಕೊಂಡಿದ್ದಾರೆ. ಇದರ ಬಗ್ಗೆ ಏನಾದರು ಹೊರಗಡೆ ತಿಳಿದರೆ ಭಯೋತ್ಪಾದಕನಂತೆ ಬಿಂಬಿಸಿದ ವಿಡಿಯೋವನ್ನ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಹಾಗು ವರ್ಷಕ್ಕೆ ಮೂರು ಜನರನ್ನ ಕರೆ ತಂದು ಮತಾಂತರ ಮಾಡಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ಅನೇಕ ರೀತಿಯಲ್ಲಿ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:16 am, Wed, 5 October 22