ಬೆಂಗಳೂರು, ಆಗಸ್ಟ್ 18: ಮುಡಾದಲ್ಲಿ (muda) ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಕಷ್ಟ ತಂದೊಡ್ಡಿದೆ. ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನಿನ್ನೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದು ಬೆಂಬಲಿಗರು ರೊಚ್ಚಿಗೆದ್ದಿದ್ರು. ಇವತ್ತು ಕೂಡಾ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಯಲ್ಲಿ ದೊಡ್ಡ ಹೋರಾಟ ನಡೆಸಿದ್ದರು. ಇನ್ನು ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆ ಬಿಸಿ ತಟ್ಟಲಿದೆ.
ನಿನ್ನೆ ನಡೆದ ಪ್ರತಿಭಟನೆ ಜಸ್ಟ್ ಟ್ರೇಲರ್ ಅಷ್ಟೇ, ಇಂದು ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಲು ಸಜ್ದಾಗಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೂಡಾ ಬೆಂಬಲ ನೀಡಿವೆ. ಆದರೆ ಇಂದು ಮೈಸೂರು ಬಂದ್ ಪ್ಲ್ಯಾನ್ ಮಾಡಿದ್ದ ಅಹಿಂದ ಸಂಘಟನೆಗಳು ಹಿಂದೆ ಸರಿದಿವೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರು ಪಾದಯಾತ್ರೆ ನಡೆಸಿದ್ದ ಬಿಜೆಪಿ, ಜೆಡಿಎಸ್ ದೋಸ್ತಿಗಳಿಗೆ, ಪ್ರಾಸಿಕ್ಯೂಷನ್ ಬ್ರಹ್ಮಾಸ್ತ್ರವಾಗಿ ಸಿಕ್ಕಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪಟ್ಟವನ್ನು ಮತ್ತಷ್ಟು ಭದ್ರಗೊಳಿಸಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಬಂಡೆಯಿಂದಲೇ ಡೇಂಜರ್: ಪರೋಕ್ಷವಾಗಿ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ
ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ-ಜೆಡಿಎಸ್ ನಾಯಕರು ಪ್ರತಿಭಟನೆ ಮಾಡಲಿದ್ದಾರೆ. ಇಂದು ರಾಜ್ಯ ರಾಜಕೀಯದ ಅಖಾಡ ರಂಗೇರಲಿದೆ. ಕೋರ್ಟ್ ಒಳಗೆ ಕಾನೂನು ಸಮರ ನಡೆದರೆ ಹೊರಗೆ ಪ್ರತಿಭಟನೆಯ ಕಿಚ್ಚು ಹೊತ್ತಿಕೊಳ್ಳಲಿದೆ.
ಇದನ್ನೂ ಓದಿ: ಆಗಸ್ಟ್ 23 ಸಿದ್ದರಾಮಯ್ಯ ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!
ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಿನ್ನಲೆ ಬೆಂಗಳೂರಿನಲ್ಲಿ ಕೂಡ ಪ್ರತಿಭಟನಾ ಕಾವು ಹೆಚ್ಚಲಿದೆ. ಹೀಗಾಗಿ ಪ್ರತಿಭಟನೆಯನ್ನ ಹತ್ತಿಕ್ಕಲು ಪೊಲೀಸ್ ಕೂಡ ಮುಂದಾಗಿದ್ದಾರೆ. ಸಭೆ ನಡೆಸಿದ ಪೊಲೀಸ್ ಆಯುಕ್ತರು ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಿ ಯಾವ ಭಾಗದಲ್ಲಿ ಹೆಚ್ಚು ಪ್ರತಿಭಟನೆ ಸಾಧ್ಯತೆ ಇದೆಯೋ ಅಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜನೆ ಮಾಡಲು ಸೂಚನೆ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.