AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್​​ ಶಾಕ್​​: ಇಡಿ ಬೆನ್ನಲ್ಲೇ ಐಟಿ ರೇಡ್​​; 19 ಸ್ಥಳಗಳಲ್ಲಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್​​ ಶಾಕ್​​: ಇಡಿ ಬೆನ್ನಲ್ಲೇ ಐಟಿ ರೇಡ್​​; 19 ಸ್ಥಳಗಳಲ್ಲಿ ದಾಳಿ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 25, 2026 | 12:14 PM

Share

ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ಮುಕ್ತಾಯಗೊಂಡ ಕೆಲವೇ ಗಂಟೆಗಳಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂಪನಿಯ 19 ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ವ್ಯವಹಾರದಲ್ಲಿನ ಅಕ್ರಮಗಳು ಮತ್ತು ಗ್ರಾಹಕರಿಂದ ಚಿನ್ನ ಖರೀದಿ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ಬೆಂಗಳೂರು, ಸೆಪ್ಟೆಂಬರ್​​ 25: ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ಮುಕ್ತಾಯಗೊಂಡ ಕೆಲವೇ ಗಂಟೆಗಳಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಟ್ಟಿಕಾ ಗೋಲ್ಡ್ ಕಂಪನಿಯ ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು , ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ತಮ್ಮ ರೇಡ್​​ ಮುಕ್ತಾಯಗೊಳಿಸಿದ್ದರು. ಇದೀಗ, ಐಟಿ ಇಲಾಖೆಯ ಅಧಿಕಾರಿಗಳು ಕಂಪನಿಗೆ ಸಂಬಂಧಿಸಿದ 19 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಟ್ಟಿಕಾ ಗೋಲ್ಡ್ ಕಂಪನಿಯ ವ್ಯವಹಾರದಲ್ಲಿನ ಅಕ್ರಮಗಳು, ನೇರವಾಗಿ ಗ್ರಾಹಕರಿಂದ ಚಿನ್ನ ಖರೀದಿ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಕಲೆಹಾಕುವ ನಿಟ್ಟಿನಲ್ಲಿ ಇಡಿ ದಾಳಿ ನಡೆದಿತ್ತು. ಇದೀಗ ಐಟಿ ಅಧಿಕಾರಿಗಳು ಕೂಡ ಕಂಪನಿಯ ಹಣಕಾಸು ವ್ಯವಹಾರ ಮತ್ತು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More