ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್​: ಬಾಮೈದ, ಅತ್ತೆಯನ್ನು ಬಂಧಿಸಿದ ಬೆಂಗಳೂರು ಪೊಲೀಸ್

| Updated By: ಗಂಗಾಧರ​ ಬ. ಸಾಬೋಜಿ

Updated on: Dec 12, 2024 | 10:13 PM

ಬೆಂಗಳೂರಿನ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್​ ಇಬ್ಬರನ್ನೂ ಮಾರತ್ತಹಳ್ಳಿ ಠಾಣೆ ಪೊಲೀಸರು ಉತ್ತರ ಪ್ರದೇಶದ ಜೌನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ನಿಶಾ ಸಿಂಘಾನಿಯಾ ಮನೆಗೆ ಬೀಗ ಜಡಿದು ಪರಾರಿಯಾಗಲು ಯತ್ನಿಸಿದ್ದರು.

ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್​: ಬಾಮೈದ, ಅತ್ತೆಯನ್ನು ಬಂಧಿಸಿದ ಬೆಂಗಳೂರು ಪೊಲೀಸ್
(ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್​: ಬಾಮೈದ, ಅತ್ತೆಯನ್ನು ಬಂಧಿಸಿದ ಬೆಂಗಳೂರು ಪೊಲೀಸ್)
Follow us on

ಬೆಂಗಳೂರು, ಡಿಸೆಂಬರ್​​ 12: ಪತ್ನಿ ಕಿರುಕುಳಕ್ಕೆ ನೊಂದು ಅತುಲ್ ಸುಭಾಷ್ (Atul Subhash) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಅತುಲ್ ಮಾಡಿರುವ ವಿಡಿಯೋ, ಅದ್ರಲ್ಲಿ ಉಲ್ಲೇಖಸಿರುವ ಅಂಶಗಳು ದೇಶಾದ್ಯಂತ ದೊಡ್ಡ ಚರ್ಚೆ ಹುಟ್ಟು ಹಾಕಿದೆ. ಇನ್ನು ದೂರು ದಾಖಲಾಗುತ್ತಿದ್ದಂತೆ ದೆಹಲಿಯ ಜೌನ್ಪುರದಲ್ಲಿರುವ ತಮ್ಮ ಮನೆಯಿಂದ ಪರಾರಿಯಾಗಿದ್ದ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್​ರನ್ನು ಉತ್ತರ ಪ್ರದೇಶದ ಜೌನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪರಾರಿಗೆ ಯತ್ನ: ವಿಡಿಯೋ ಸೆರೆ

ಪ್ರಕರಣ ದಾಖಲಾಗುತ್ತಿದ್ದಂತೆ ನಿಶಾ ಸಿಂಘಾನಿಯಾ ತಪ್ಪಿಸಿಕೊಳ್ಳಲು ಮುಂದಾಗಿದ್ದು, ಮನೆಗೆ ಬೀಗ ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ. ಪರಾರಿಯಾಗುತ್ತಿರು ವಿಡಿಯೋ ಸ್ಥಳೀಯ ಹೋಟೆಲ್​ಗೆ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ ‌ಕೇಸ್: ರಾಷ್ಟ್ರಪತಿ, ಸುಪ್ರೀಂ ಜಡ್ಜ್​​ಗೆ ಮೇಲ್​​ ಮಾಡಿದ್ದ ಟೆಕ್ಕಿ

ಆರೋಪಿಗಳಿಗಾಗಿ ಉತ್ತರ ಪ್ರದೇಶ, ದೆಹಲಿಯಲ್ಲಿ ಬೆಂಗಳೂರು ಪೊಲೀಸರಿಂದ ಹುಡುಕಾಟ ನಡೆಸಿ ಇದೀಗ ಇಬ್ಬರನ್ನೂ ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಜೌನ್ಪುರ ಠಾಣೆಗೆ ಇಬ್ಬರನ್ನೂ ಪೊಲೀಸರು ಕರೆದೊಯ್ದಿದ್ದು, ಪ್ರಾಥಮಿಕ ವಿಚಾರಣೆ ಮಾಡಲಾಗಿದೆ. ಮಾರತ್ತಹಳ್ಳಿ ಠಾಣೆ ಪೊಲೀಸರು ನಾಳೆ‌ ಕೋರ್ಟ್ ಅನುಮತಿ ಪಡೆದು ಬೆಂಗಳೂರಿಗೆ ಕರೆತರಲಿದ್ದಾರೆ.

ಸದ್ಯ ಅತುಲ್ ಸಾವಿನ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರ ವಿಶೇಷ ತಂಡ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಅತುಲ್ ಪತ್ನಿ ನಿಖಿತಾ ಸಿಂಘಾನಿಯ ಸೇರಿದಂತೆ ನಾಲ್ವರಿಗೆ ಬಂಧನದ ಭೀತಿ ಎದುರಾಗಿದೆ. ಮೊದಲು ಪತ್ನಿಗೆ ನೋಟಿಸ್ ನೀಡಿ ಬಳಿಕ ವಿಚಾರಣೆ ನಡೆಸಲು ಮಾರತ್ತಹಳ್ಳಿ ಪೊಲೀಸರು ಸಜ್ಜಾಗಿದ್ದಾರೆ. ವಿಚಾರಣೆಗೆ ಸಹಕರಿಸದೇ ಇದ್ದರೆ, ನಿಖಿತಾ ಮೇಲೆ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Atul Subhash: ಅತುಲ್​ಗೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ಬಾರ್ದು ಎಂಬ ನಿಕಿತಾ ಪ್ರಶ್ನೆಗೆ ನಕ್ಕಿದ್ದ ಜಡ್ಜ್​ ರೀಟಾ

ಇನ್ನು ಪ್ರಕರಣ ಹಿನ್ನಲೆ ಸೇವ್ ಇಂಡಿಯಾ ಫ್ಯಾಮಿಲಿ ಫೌಂಡೇಷನ್​ನಿಂದ ಸರ್ಜಾಪುರ ರಸ್ತೆಯ ಇಕೋಸ್ಪೇಸ್ ಮುಂಭಾಗ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಮೇಣದ ಬತ್ತಿ ಹಿಡಿದು ಸಾವಿಗೆ ನ್ಯಾಯ ಬೇಕೆಂದು ಒತ್ತಾಯಿಸಿದ್ದಾರೆ. ಅದೇ ರೀತಿಯಾಗಿ ದೆಹಲಿಯ ಸೆಂಟ್ರಲ್‌ ಸೆಕ್ರೆಟರಿಯೇಟ್ ಬಳಿ ಸಂತ್ರಸ್ತರಿಂದ ಧರಣಿ ಮಾಡಲಾಗಿದೆ. ಅತುಲ್ ಕೇಸ್​ನ ಮಾದರಿಯ ಹಲವು ಸಂತ್ರಸ್ತರಿಂದ ಪ್ರತಿಭಟನೆ ಮಾಡಲಾಗಿದ್ದು, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:10 pm, Thu, 12 December 24