AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಈ ಎರಡು ಕಡೆ ನದಿ ಪಾತ್ರ ಜನರಿಗೆ ಪ್ರವಾಹ ಎಚ್ಚರಿಕೆ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಹಲವೆಡೆ ಮಳೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಡ್ಯಾಂಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಭೀತಿ ಎದುರಾಗಿದೆ. ರಾಜ್ಯದ ಕೆಲ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಹಾಗಾದರೆ ಕರ್ನಾಟಕದ ಜಲಾಶಯದಲ್ಲಿ ಇಂದಿನ ನೀರಿನ ಪ್ರಮಾಣ ಎಷ್ಟಿದೆ? ಇಲ್ಲಿದೆ ಮಾಹಿತಿ

Karnataka Dam Water Level: ಈ ಎರಡು ಕಡೆ ನದಿ ಪಾತ್ರ ಜನರಿಗೆ ಪ್ರವಾಹ ಎಚ್ಚರಿಕೆ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಜಲಾಶಯ
ಆಯೇಷಾ ಬಾನು
|

Updated on:Aug 13, 2024 | 7:50 AM

Share

ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಬಹುತೇಕ ಡ್ಯಾಂಗಳು ತುಂಬಿ ತುಳುಕುತ್ತಿವೆ. ಆದರೆ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿರುವ ಕಾರಣ ಜಲಾಶಯದಿಂದ ಹೆಚ್ಚಿನ ನೀರು ಹೊರ ಹರಿ ಬಿಡಲಾಗಿದೆ. ಇದರಿಂದ ನೀರು ಪೋಲು ಹಾಗುತ್ತಿದ್ದು ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇನ್ನು ಮತ್ತೊಂದೆಡೆ ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದ್ದು ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪ್ರವಾಹ ಎಚ್ಚರಿಕೆ ಸಂದೇಶವನ್ನು ಹಂಚಿಕೊಂಡಿದೆ. ಕರ್ನಾಟಕದ ತುಂಗಭದ್ರಾ ಜಲಾಶಯ ಸೇರಿಂದತೆ ರಾಜ್ಯದ 14 ಡ್ಯಾಂಗಳಲ್ಲಿ ಇಂದು (ಆ.13) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 118.22 122.66 54830 20108
ತುಂಗಭದ್ರಾ ಜಲಾಶಯ (Tungabhadra Dam) 497.71 105.79 97.75 89.26 25571 99985
ಮಲಪ್ರಭಾ ಜಲಾಶಯ (Malaprabha Dam) 633.80 37.73 34.31 22.61 1877 1877
ಕೆ.ಆರ್.ಎಸ್ (KRS Dam) 38.04 49.45 49.45 34.65 21060 38318
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 143.92 74.71 7713 7611
ಕಬಿನಿ ಜಲಾಶಯ (Kabini Dam) 696.13 19.52 18.77 18.05 4782 6350
ಭದ್ರಾ ಜಲಾಶಯ (Bhadra Dam) 657.73 71.54 64.47 49.75 7683 8841
ಘಟಪ್ರಭಾ ಜಲಾಶಯ (Ghataprabha Dam) 662.91 51.00 51.00 43.54 5791 5629
ಹೇಮಾವತಿ ಜಲಾಶಯ (Hemavathi Dam) 890.58 37.10 35.94 31.72 9206 15875
ವರಾಹಿ ಜಲಾಶಯ (Varahi Dam) 594.36 31.10 21.19 11.04 901 0
ಹಾರಂಗಿ ಜಲಾಶಯ (Harangi Dam)​​ 871.38 8.50 7.78 8.44 3168 2000
ಸೂಫಾ (Supa Dam) 564.00 145.33 1221.68 80.73 5093 4638
ನಾರಾಯಣಪುರ ಜಲಾಶಯ (Narayanpura Dam) 492.25 33.31 33.12 32.60 16818 13002
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 19.20 24.59 693 135

ಮುಂದಿನ 3 ದಿನಗಳವರೆಗೆ ರಾಜ್ಯದ ಹಲವೆಡೆ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಆಗಸ್ಟ್ 12 ರಿಂದ ಆಗಸ್ಟ್ 20 ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ, ಆಗಸ್ಟ್ 12 ರಿಂದ ಆಗಸ್ಟ್ 15 ರವರೆಗೆ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಅಲ್ಲಲ್ಲಿ ಚದುರಿದಂತೆ ತುಂತುರು ಮಳೆ, ಆಗಸ್ಟ್ 13 ರಿಂದ ಮಳೆ ಕ್ರಮೇಣ ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:48 am, Tue, 13 August 24