AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಹಲವೆಡೆ ಮಳೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಡ್ಯಾಂಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಭೀತಿ ಎದುರಾಗಿದೆ. ರಾಜ್ಯದ ಕೆಲ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಹಾಗಾದರೆ ಕರ್ನಾಟಕದ ಜಲಾಶಯದಲ್ಲಿ ಇಂದಿನ ನೀರಿನ ಪ್ರಮಾಣ ಎಷ್ಟಿದೆ? ಇಲ್ಲಿದೆ ಮಾಹಿತಿ

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಡ್ಯಾಂ
ಆಯೇಷಾ ಬಾನು
|

Updated on: Aug 14, 2024 | 8:24 AM

Share

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಅರ್ಕಾವತಿ, ಪಾಲಾರ್ ಮೇಲ್ಕಂಡೆ, ಪೊನ್ನಯ್ಯರ್ ಮೇಲ್ಕಂಡೆ, ಪೆನ್ನಾರ್ ಮೇಲ್ಕಂಡೆ, ವೇದಾವತಿ, ಶಿಂಷಾ, ಕಾವೇರಿ ಮತ್ತು ಅದರ ಉಪನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ. ಹಾಗೂ ಧೋನಿ ನದಿಯು ವಿಜಯಪುರ ಜಿಲ್ಲೆಯಲ್ಲಿ ಪ್ರವಾದ ಮಟ್ಟ ಮೀರಿ ಹರಿಯುವುದರಿಂದ ನದಿತೀರ ಪ್ರದೇಶದ ಜನವಸತಿಗಳು ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಕರ್ನಾಟಕದ ತುಂಗಭದ್ರಾ ಜಲಾಶಯ ಸೇರಿಂದತೆ ರಾಜ್ಯದ 14 ಡ್ಯಾಂಗಳಲ್ಲಿ ಇಂದು (ಆ.14) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 119.91 122.48 37089 17541
ತುಂಗಭದ್ರಾ ಜಲಾಶಯ (Tungabhadra Dam) 497.71 105.79 91.31 89.26 35425 109984
ಮಲಪ್ರಭಾ ಜಲಾಶಯ (Malaprabha Dam) 633.80 37.73 34.31 22.71 1794 194
ಕೆ.ಆರ್.ಎಸ್ (KRS Dam) 38.04 49.45 47.00 34.42 14190 15251
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 143.92 74.71 7741 7634
ಕಬಿನಿ ಜಲಾಶಯ (Kabini Dam) 696.13 19.52 18.69 17.99 5526 6350
ಭದ್ರಾ ಜಲಾಶಯ (Bhadra Dam) 657.73 71.54 64.33 49.75 6075 7811
ಘಟಪ್ರಭಾ ಜಲಾಶಯ (Ghataprabha Dam) 662.91 51.00 51.00 43.69 5796 5632
ಹೇಮಾವತಿ ಜಲಾಶಯ (Hemavathi Dam) 890.58 37.10 35.94 31.50 9977 9375
ವರಾಹಿ ಜಲಾಶಯ (Varahi Dam) 594.36 31.10 21.26 10.93 901 0
ಹಾರಂಗಿ ಜಲಾಶಯ (Harangi Dam)​​ 871.38 8.50 7.89 8.41 3325 2000
ಸೂಫಾ (Supa Dam) 564.00 145.33 122.76 80.60 5182 4270
ನಾರಾಯಣಪುರ ಜಲಾಶಯ (Narayanpura Dam) 492.25 33.31 33.13 32.60 14534 14534
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 19.27 24.58 693 135

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ