Karnataka Dam Water Level: ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯ ರೈತರಿಗೆ ಕೃಷಿ ಮತ್ತು ಕುಡಿಯುವ ನೀರಿಗೆ ಅನಕೂಲವಾಗಿದೆ. ಮತ್ತೊಂದೆಡೆ ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯಿಂದ ಡ್ಯಾಂಗೆ ಅಪಾರ ಪ್ರಮಾಣದ ನೀರು ಬರ್ತಿರುವುದರಿಂದ ಜಲಾಶಯದಿಂದ ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದೆ. ಇದು ನದಿಪಾತ್ರದ ಜನರ ಸಂಕಷ್ಟಕ್ಕೆ ಕಾರಣವಾಗುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ವಿವರ ಇಲ್ಲಿದೆ.
ರಾಜ್ಯದಲ್ಲಿ ಭಾರೀ ಮಳೆ ಮುಂದುವರೆದಿದೆ. ಅದರಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಹಲವು ಕಡೆ ಮಳೆಯಿಂದಾಗಿ ಜಲಾಶಯಗಳು, ನದಿಗಳು ತುಂಬಿದ್ದು ಪ್ರವಾಹ ಭೀತಿ ಎದುರಾಗಿದೆ. ರಸ್ತೆ, ಮನೆಗಳು, ದೇವಾಲಯಗಳು ಮುಳುಗುತ್ತಿವೆ. ಹಲವು ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆಗಸ್ಟ್ 01ರ ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ (Karnataka Dam Water Level) ವಿವರ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 67.66 | 102.26 | 3,23,259 | 3,25,504 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 99.70 | 76.19 | 52,414 | 63,716 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 32.08 | 19.62 | 21,222 | 4,951 |
ಕೆ.ಆರ್.ಎಸ್ (KRS Dam) | 38.04 | 49.45 | 47.31 | 34.89 | 95,502 | 1,03,222 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 131.27 | 68.21 | 82,587 | 3,770 |
ಕಬಿನಿ ಜಲಾಶಯ (Kabini Dam) | 696.13 | 19.52 | 18.07 | 19.06 | 54,137 | 70,750 |
ಭದ್ರಾ ಜಲಾಶಯ (Bhadra Dam) | 657.73 | 71.54 | 69.65 | 44.96 | 61,042 | 41,957 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 48.22 | 35.29 | 39,006 | 26,608 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 34.94 | 29.33 | 61,273 | 74,875 |
ವರಾಹಿ ಜಲಾಶಯ (Varahi Dam) | 594.36 | 31.10 | 17.87 | 10.36 | 10,787 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 6.95 | 7.88 | 9,098 | 19,250 |
ಸೂಫಾ (Supa Dam) | 564.00 | 145.33 | 104.09 | 75.07 | 45,738 | 0 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 23.56 | 30.65 | 3,07,487 | 3,06,644 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 18.45 | 24.81 | 1301 | 147 |
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದೆ. ಇಂದು ಕೂಡ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಐದೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:40 am, Thu, 1 August 24