ಆಗಸ್ಟ್​ 27ರಂದೇ KPSC ಪರೀಕ್ಷೆ ಫಿಕ್ಸ್​: ಮುಂದೂಡಿಕೆ ಮಾಡದಿರುವ ಬಗ್ಗೆ ಸ್ಪಷ್ಟನೆ ಕೊಟ್ಟ ಸರ್ಕಾರ

ಕೆಲ ಕೆಎಎಸ್​​ ಆಕ್ಷಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಹಿರಿಯ ಅಧಿಕಾರಿಗಳಿಂದ ಒತ್ತಡ ತರುತ್ತಿದ್ದಾರೆ. ಅಲ್ಲದೇ, ಅವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಕೆಪಿಎಸ್​​ಸಿಯಲ್ಲಿ (KPSC) ಹಗರಣ ನಡೆದಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ, ಯಾವುದೇ ಹಗರಣ ನಡೆದಿಲ್ಲ, ಆಗಸ್ಟ್​ 27 ರಂದೇ ಪರೀಕ್ಷೆ ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ.

ಆಗಸ್ಟ್​ 27ರಂದೇ KPSC ಪರೀಕ್ಷೆ ಫಿಕ್ಸ್​: ಮುಂದೂಡಿಕೆ ಮಾಡದಿರುವ ಬಗ್ಗೆ ಸ್ಪಷ್ಟನೆ ಕೊಟ್ಟ ಸರ್ಕಾರ
ವಿಧಾನಸೌಧ
Follow us
ವಿವೇಕ ಬಿರಾದಾರ
|

Updated on: Aug 25, 2024 | 12:28 PM

ಬೆಂಗಳೂರು, ಆಗಸ್ಟ್​ 25: ಕೆಎಎಸ್​​ ಪೂರ್ವಭಾವಿ ಪರೀಕ್ಷೆ (KAS Prelims Exam) ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮತ್ತು ತರಾತುರಿಯಲ್ಲಿ ಪರೀಕ್ಷೆಯನ್ನು ನಡೆಸುತ್ತಿಲ್ಲ. ಅಭ್ಯರ್ಥಿಗಳು ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೆಲ ಕೆಎಎಸ್​​ ಆಕ್ಷಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಸರ್ಕಾರ, ಕೆಲ ಕೆಎಎಸ್​​ ಆಕ್ಷಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಹಿರಿಯ ಅಧಿಕಾರಿಗಳಿಂದ ಒತ್ತಡ ತರುತ್ತಿದ್ದಾರೆ. ಅಲ್ಲದೇ, ಅವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಕೆಪಿಎಸ್​​ಸಿಯಲ್ಲಿ (KPSC) ಹಗರಣ ನಡೆದಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ, ಯಾವುದೇ ಹಗರಣ ನಡೆದಿಲ್ಲ, ಆಗಸ್ಟ್​ 27 ರಂದೇ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಕೆಪಿಎಸ್​ಸಿ ಅಥವಾ ಸರ್ಕಾರವು ಹೆಚ್ಚುವರಿ ಅವಕಾಶ ಮತ್ತು ವಯೋಮಿತಿ ಸಡಿಲಿಕೆಗೊಳಿಸಿದ ನಂತರ 2017-18ರಲ್ಲಿ ಪರೀಕ್ಷೆ ಬರೆದಿದ್ದ 1500 ಅಭ್ಯರ್ಥಿಗಳು ಕೂಡ ಪರೀಕ್ಷೆಗೆ ಅರ್ಜಿಸಲ್ಲಿಸಿದ್ದಾರೆ. ಇವರು ಸೇರಿದಂತೆ ಒಟ್ಟು 2.5 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಸಿದ್ದರಾಗಿದ್ದಾರೆ.

ಮುಂದೂಡಿಕೆ ಬಗ್ಗೆ ಸರ್ಕಾರದ ಸ್ಪಷ್ಟನೆ

ಕೆಎಎಸ್​ ಪೂರ್ವಭಾವಿ ಪರೀಕ್ಷೆಯನ್ನು ಮೇ 05 ರಂದು ನಡೆಸುವುದಾಗಿ ಸರ್ಕಾರ ಫೆಬ್ರವರಿ 26 ಸರ್ಕಾರ ಅಧಿಸೂಚನೆ ಹೊರಡಿಸಿತು. ಆದರೆ ಮೇ7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದ್ದರಿಂದ ಕೆಪಿಎಸ್​ಸಿ ಪರೀಕ್ಷೆಯನ್ನು ಜುಲೈ 07ಕ್ಕೆ ಮುಂದೂಡಲಾಯಿತು.ಆದರೆ ಜುಲೈ 07 ರಂದು ಯುಪಿಎಸ್​ಸಿ ಪರೀಕ್ಷೆ ಇದ್ದಿದ್ದರಿಂದ ಕೆಪಿಎಸ್​​ಸಿ ಪರೀಕ್ಷೆಯನ್ನು ಮತ್ತೆ ಮುಂದೂಡಿ ಜುಲೈ 21ಕ್ಕೆ ನಿಗದಿ ಮಾಡಲಾಯಿತು.

ಇದನ್ನೂ ಓದಿ: ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ, ಪರೀಕ್ಷೆ ಮುಂದೂಡಲ್ಲ: ಸಿಎಂ ಸಿದ್ದರಾಮಯ್ಯ

ಆದರೆ, ಈ ಮಧ್ಯೆ ⁠2017-18ರಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಮನವಿ ಮೇರೆಗೆ, ಸರ್ಕಾರ ಅವರಿಗೆ ಮತ್ತೊಂದು ಅವಕಾಶ ನೀಡಲು ಮುಂದಾಯಿತು. ಈ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಿ, ಜೊತೆಗೆ ವಯೋಮಿತಿ ಸಡಲಿಕೆಗೊಳಿಸಿ ಸರ್ಕಾರ ಜೂನ್​ 21 ರಂದು ಅಧಿಸೂಚನೆ ಹೊರಡಿಸಿತು. ಕೆಪಿಎಸ್​ಸಿ ಜೂನ್​ 26 ರಂದು ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸಿತು. 2017-18 ಬ್ಯಾಚ್​ನ ಅಭ್ಯರ್ಥಿಗಳು ಹೊಸದಾಗಿ ಮತ್ತೊಮ್ಮೆ ಅರ್ಜಿಸಲ್ಲಿಸಲು ಜುಲೈ 21ರವರೆಗೆ ಅವಕಾಶ ನೀಡಿತು. ಅದರಂತೆ ಸುಮಾರು 1560 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು.

ಕೆಎಎಸ್​ ಪೂರ್ಭಭಾವಿ ಪರೀಕ್ಷೆಗಳನ್ನು ಆಗಸ್ಟ್​ 25ಕ್ಕೆ ಮುಂದೂಡಲಾಯಿತು. ಆದರೆ, ಆಗಸ್ಟ್​ 25 ರಂದು IBPS ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಆಗಸ್ಟ್​ 27ಕ್ಕೆ ಮುಂದೂಡಿತು.

ಆದ್ದರಿಂದ, ಅಭ್ಯರ್ಥಿಗಳು ಪರೀಕ್ಷೆಗೆ ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂಬ ಅಂಶವು ತುಂಬಾ ಸ್ಪಷ್ಟವಾಗಿದೆ. ಕೆಪಿಎಸ್‌ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಲು ಯಾವುದೇ ಆಧಾರವಿಲ್ಲ ಎಂದು ಸರ್ಕಾರ  ಸ್ಪಷ್ಟಪಡಿಸಿದೆ.

ಮುಂದಿನ ಎರಡು ತಿಂಗಳವರೆಗಿನ ಭಾನುವಾರಗಳಂದು ವಿವಿಧ ಪರೀಕ್ಷೆ ಮತ್ತು ಇನ್ನಿತರೆ ಕಾರಣಗಳಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕೆಲಸದ ದಿನದಂದು ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದೆ.

2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲು ಸಾಕಷ್ಟು ತಯಾರಿ ನಡೆಯುತ್ತದೆ. ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. ಎರಡು ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಪೇಪರ್ ಸೋರಿಕೆಯಾಗುವ ಅಪಾಯವಿರುವುದರಿಂದ ಪೇಪರ್‌ಗಳನ್ನು ಹೆಚ್ಚು ಹೊತ್ತು ಇಡುವಂತಿಲ್ಲ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ