ಬೆಂಗಳೂರು: ಜಾಸ್ತಿ ಬಾಡಿಗೆ ಹಣ ಕೊಡಲು ನಿರಾಕರಿಸಿದಕ್ಕೆ ಯುವತಿಗೆ ಆಟೋ ಚಾಲಕನಿಂದ ಅವಾಚ್ಯವಾಗಿ ನಿಂದನೆ

ಆಟೋ ಚಾಲಕ ಹೆಚ್ಚಿನ ಬಾಡಿಗೆ ಹೇಳಿದ್ದು ಮಾತಿಗೆ ಮಾತು ಬೆಳೆದಿದೆ. ಸಿಲ್ಕ್ ಬೋರ್ಡ್ ಇಲ್ಲೆ ಇದ್ಯಾ ಎನ್ನುತ್ತಾ ಅವಾಚ್ಯ ಶಬ್ಧಗಳಿಂದ ಯುವತಿಗೆ ಆಟೋ ಚಾಲಕ ಕೆಲವು ಅವಾಚ್ಯ ಶಬ್ಧಗಳನ್ನು ಬಳಸಿ ನಿಂದಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಈ ಸಂಬಂಧ ಎಕ್ಸ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದು ಬೆಂಗಳೂರು ಪೊಲೀಸರಿಗೆ ದೂರು ನೀಡಲಾಗಿದೆ.

ಬೆಂಗಳೂರು: ಜಾಸ್ತಿ ಬಾಡಿಗೆ ಹಣ ಕೊಡಲು ನಿರಾಕರಿಸಿದಕ್ಕೆ ಯುವತಿಗೆ ಆಟೋ ಚಾಲಕನಿಂದ ಅವಾಚ್ಯವಾಗಿ ನಿಂದನೆ
ಜಾಸ್ತಿ ಬಾಡಿಗೆ ಹಣ ಕೊಡಲು ನಿರಾಕರಿಸಿದಕ್ಕೆ ಯುವತಿಗೆ ಆಟೋ ಚಾಲಕನಿಂದ ನಿಂದನೆ
Follow us
Jagadisha B
| Updated By: ಆಯೇಷಾ ಬಾನು

Updated on:Oct 02, 2024 | 11:46 AM

ಬೆಂಗಳೂರು, ಅ.02: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರು (Auto Drivers) ಮಹಿಳಾ ಪ್ರಯಾಣಿಕರ ಮೇಲೆ ರೇಗಾಡುವ ಪ್ರಕರಣಗಳು ಹೆಚ್ಚಾಗಿವೆ. ಇತ್ತೀಚೆಗೆ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ ಕೋಪಗೊಂಡು ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2ರಂದು ನಡೆದಿತ್ತು. ಇದೀಗ ಇಂಥದ್ದೇ ಮತ್ತೊಂದು ಘಟನೆ ನಡೆದಿದೆ. ಜಾಸ್ತಿ ಬಾಡಿಗೆ ಹಣ ಕೊಡಲು ಆಗುವುದಿಲ್ಲ ಎಂದ ಯುವತಿಗೆ ಆಟೋ ಚಾಲಕ ಅವಾಚ್ಯ ಪದ ಬಳಸಿ ನಿಂದಿಸಿದ್ದಾನೆ.

ಯುವತಿ ಆಟೋ ಹತ್ತುವಾಗ ಬಾಡಿಗೆ ಕೇಳಿದ್ದಾರೆ. ಈ ವೇಳೆ ಆಟೋ ಚಾಲಕ ಹೆಚ್ಚಿನ ಬಾಡಿಗೆ ಹೇಳಿದ್ದು ಮಾತಿಗೆ ಮಾತು ಬೆಳೆದಿದೆ. ಸಿಲ್ಕ್ ಬೋರ್ಡ್ ಇಲ್ಲೆ ಇದ್ಯಾ ಎನ್ನುತ್ತಾ ಅವಾಚ್ಯ ಶಬ್ಧಗಳಿಂದ ಯುವತಿಗೆ ಆಟೋ ಚಾಲಕ ಕೆಲವು ಅವಾಚ್ಯ ಶಬ್ಧಗಳನ್ನು ಬಳಸಿ ನಿಂದಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಇನ್ನು 150 ರೂಪಾಯಿ ಬಾಡಿಗೆ ಕೊಡ್ತೀನಿ ಜಾಸ್ತಿ ಕೊಡೋಕೆ ಆಗೋದಿಲ್ಲ ಎಂದು ಯುವತಿ ಹೇಳಿದ್ದು ಅಸಭ್ಯ ಪದಬಳಿಸಿ ನಿಂದನೆ ಮಾಡಿ ಚಾಲಕ ಆಟೋ ಹತ್ತಿ ಹೊರಟಿದ್ದಾನೆ. ಈ ಸಂಬಂಧ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ಯುವತಿ ವಿಡಿಯೋ ಪೋಸ್ಟ್ ಮಾಡಿದ್ದಾಳೆ. ಆಟೋ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸದ್ಯ ಘಟನೆ ಸ್ಥಳದ ಬಗ್ಗೆ ನಿಖರ ಮಾಹಿತಿ ನೀಡುವಂತೆ ಪೊಲೀಸರು ಕೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಮಹಿಳಾ ನಿಂದನೆ

ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ ಕೋಪಗೊಂಡು ಯುವತಿಯನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2ರಂದು ನಡೆದಿತ್ತು. ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರೂ ಓಲಾ ಆಟೋವನ್ನು ಬುಕ್ ಮಾಡಿದ್ದರು. ಸಕಾಲಕ್ಕೆ ಆಟೋ ಬಾರದ ಹಿನ್ನೆಲೆ ಯುವತಿ ಮತ್ತೊಂದು ಆಟೋವನ್ನು ಬುಕ್ ಮಾಡಿದ್ದಳು. ಬಳಿಕ ಮುಂಚಿತವಾಗಿ ಬಂದ ಆಟೋವನ್ನು ಹತ್ತಿ, ಈ ಹಿಂದೆ ಬುಕ್ ಮಾಡಿದ್ದ ಆಟೋವನ್ನು ರದ್ದು ಮಾಡಿದ್ದಳು. ಇದನ್ನು ಗಮನಿಸದ ಆಟೋ ಚಾಲಕ ಯುವತಿಯನ್ನ ಹಿಂಬಾಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಳು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:38 am, Wed, 2 October 24

ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ