ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ಗಮನಿಸಿ: ಆರ್ಥಿಕ ಪ್ಯಾಕೇಜ್ಗೆ ಗುರುವಾರ ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಆರಂಭ
Lockdown Package: ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಾಳೆ ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಸೇವಾ ಸಿಂಧು ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ ಆರ್ಥಿಕ ಪ್ಯಾಕೇಜ್ ನೀಡುವ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ. ಸೇವಾ ಸಿಂಧು ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಬಗ್ಗೆ ಹೇಳಿದ್ದಾರೆ.
ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಾಳೆ ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಸೇವಾ ಸಿಂಧು ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅದರ ಅನ್ವಯ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ ಕೊವಿಡ್ ಆರ್ಥಿಕ ಪ್ಯಾಕೇಜ್ ಪರಿಹಾರ ಧನ ವಿತರಣೆ ಮಾಡಲಾಗುತ್ತದೆ.
ಮುಂದಿನ 10ರಿಂದ 12 ದಿನಗಳಲ್ಲಿ ಲಾಕ್ಡೌನ್ ಪ್ಯಾಕೇಜ್ನಲ್ಲಿ ಪರಿಹಾರ ಧನ ಸಿಗದಿದ್ದವರಿಗೆ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಮೇ 24ರಂದು ತಿಳಿಸಿದ್ದರು. ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಹಣಕಾಸಿನ ಇತಿಮಿತಿಯಲ್ಲಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಎಷ್ಟೇ ಟೀಕಿಸಿದರೂ, ಅವರು ಅಧಿಕಾರದಲ್ಲಿದ್ದಾಗ ಯಾರಿಗೆ ಏನು ಮಾಡಿಕೊಟ್ಟರು ಅಂತಾ ಜಗತ್ತಿಗೇ ಗೊತ್ತಿದೆ ಎಂದು ಸಿಎಂ ಯಡಿಯೂರಪ್ಪ ಟೀಕಿಸಿದ್ದರು.
ಹಳ್ಳಿಗಳಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಅಸಮಾಧಾನವಾಗುತ್ತಿದೆ. 14 ದಿನಗಳ ಕಾಲ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಜನರು ಈ ಬಗ್ಗೆ ತಪ್ಪುತಿಳಿದುಕೊಳ್ಳದೇ ಸಹಕಾರ ನೀಡಬೇಕು. ಗ್ರಾಮೀಣ ಪ್ರದೇಶಕ್ಕೆ ಹೆಚ್ಚಿನ ಒತ್ತು ಕೊಡುತ್ತಿದ್ದೇವೆ. ಬೆಂಗಳೂರಿನಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಇಳಿಕೆ ಆಗಿದೆ. ಕೊವಿಡ್ ಪ್ರಕರಣಗಳ ಸಂಖ್ಯೆ 5,700ಕ್ಕೆ ಇಳಿಕೆ ಕಂಡಿದೆ. ಮುಂದಿನ ದಿನದಲ್ಲಿ ಕೊವಿಡ್ ಕೇಸ್ 2,000ಕ್ಕೆ ಇಳಿಯಬೇಕು ಎಂದು ಅವರು ಹೇಳಿದ್ದರು.
Published On - 6:48 pm, Wed, 26 May 21