Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಅಯ್ಯಪ್ಪಸ್ವಾಮಿ ಪವಾಡ: ಮಾಲೆ ಹಾಕಿದ ಬಳಿಕ ಬಾಲಕನಿಗೆ ಬಂತು ಮಾತು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರಿನ ಸಾಮೆತ್ತಡ್ಕದ ಪ್ರಸನ್ನ ಎಂಬ ಬಾಲಕ, ಮಾತನಾಡಲು ಅಸಮರ್ಥನಾಗಿದ್ದರೂ, ಕಳೆದ ವರ್ಷ ಶಬರಿಮಲೆಗೆ ಯಾತ್ರೆ ನಡೆಸಿದ್ದ. ಈ ಯಾತ್ರೆಯ ನಂತರ, ಅವನು ಮಾತನಾಡಲಾರಂಭಿಸಿದ್ದಾನೆ. ಇದು ಅಯ್ಯಪ್ಪನ ಪವಾಡವೇ ಎನ್ನಲಾಗುತ್ತಿದೆ. ಈ ಬಾಲಕ ಈ ಬಾರಿ ಮತ್ತೆ ಶಬರಿಮಲೆಗೆ ಯಾತ್ರೆ ಹೋಗಲು ಸಜ್ಜಾಗಿದ್ದಾನೆ.

ಮಂಗಳೂರಿನಲ್ಲಿ ಅಯ್ಯಪ್ಪಸ್ವಾಮಿ ಪವಾಡ: ಮಾಲೆ ಹಾಕಿದ ಬಳಿಕ ಬಾಲಕನಿಗೆ ಬಂತು ಮಾತು
ಮಂಗಳೂರಿನಲ್ಲಿ ಅಯ್ಯಪ್ಪಸ್ವಾಮಿ ಪವಾಡ: ಮಾಲೆ ಹಾಕಿದ ಬಳಿಕ ಬಾಲಕನಿಗೆ ಬಂತು ಮಾತು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Dec 15, 2024 | 3:09 PM

ಮಂಗಳೂರು, ಡಿಸೆಂಬರ್​ 15: ಅಯ್ಯಪ್ಪ ಸ್ವಾಮಿಯ (Ayyappaswami) ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ಧಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆ. ಇಂತಹದೊಂದು ಪವಾಡ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಒಂದು ಶಬ್ದ ಕೂಡ ಮಾತನಾಡಲು ಬಾಯಿ ಬರದ ಬಾಲಕನೊಬ್ಬ ಒಂದು ವರ್ಷದ ಹಿಂದೆ ಶಬರಿಮಲೆ ಏರಿದ್ದ. ಈ ಬಾರಿ ಮತ್ತೆ ಶಬರಿಮಲೆ ಏರಲು ಮಾಲೆ ಹಾಕಿರುವ ಬಾಲಕ ಇದೀಗ ಮಾತನಾಡಲು ಆರಂಭಿಸಿದ್ದಾನೆ. ಈ ಘಟನೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಾಮೆತ್ತಡ್ಕ ನಿವಾಸಿ ಪ್ರಸನ್ನ ಇದೀಗ ಮಾತನಾಡುವ ಮೂಲಕ ಅಯ್ಯಪ್ಪ ಮಾಲಾಧಾರಿಗಳಿಗೆ ಅಚ್ಚರಿ ತಂದಿದ್ದಾರೆ. ಸಣ್ಣ ಮಕ್ಕಳು ಮೊದ ಮೊದಲಿಗೆ ಯಾವ ರೀತಿ ತೊದಲು ಮಾತನಾಡುತ್ತಾರೆ, ಅದೇ ರೀತಿ ಈ ಬಾಲಕ ಮಾತನಾಡಲು ಆರಂಭಿಸಿದ್ದಾರೆ‌. ಒಂದು ಶಬ್ದವನ್ನೂ ಸರಿಯಾಗಿ ಮಾತನಾಡದ ಪ್ರಸನ್ನ ಕಳೆದ ವರ್ಷ ಕರುಣಾಮಯಿ ಅಯ್ಯಪ್ಪ ಭಕ್ತವೃಂದ ಪುತ್ತೂರು ಇವರ ತಂಡದಲ್ಲಿ ಅಯ್ಯಪ್ಪ ಮಾಲೆ ಹಾಕಿ, ನಲವತ್ತೆಂಟು ದಿನಗಳ ಕಾಲ ಕಠಿಣ ವೃತಾಚರಣೆ ನಡೆಸಿ ಶಬರಿಮಲೆ ಏರಿದ್ದ.

ಇದನ್ನೂ ಓದಿ: ಕಾಂಗ್ರೆಸ್-ಬಿಜೆಪಿ ಮಧ್ಯೆ KSRTC ಬಸ್ ಕ್ರೆಡಿಟ್ ವಾರ್: ಒಂದೇ ಬಸ್ಸಿಗೆ ಮೂರು ಕಡೆ ಭರ್ಜರಿ ಸ್ವಾಗತ

ಸುಮಾರು 48 ಮೈಲು ದುರ್ಗಮ ಕಾಡಿನ ಹಾದಿಯಲ್ಲಿ ಸಾಗಿ ಸ್ವಾಮಿ ದರ್ಶನವನ್ನು ಪಡೆದಿದ್ದ ಈ ಬಾಲಕ ಇದೀಗ ಮಾತನಾಡಲು ಆರಂಭಿಸಿದ್ದಾನೆ. ಒಂದು ವರ್ಷಗಳ ಹಿಂದೆ ಒಂದು ಶಬ್ದ ಮಾತನಾಡಲೂ ಚಡಪಡಿಸುತ್ತಿದ್ದ ಈ ಬಾಲಕ ಇಂದು ಅಯ್ಯಪ್ಪ ಸ್ವಾಮಿಯ ಶರಣು ಕರೆಯುತ್ತಾನೆ. ಶಬ್ದಗಳು ಅಷ್ಟು ಸ್ಪಷ್ಟವಾಗಿಲ್ಲದಿದ್ದರೂ, ಅರ್ಥವಾಗುತ್ತದೆ. ಈ ಬಾರಿ ಮತ್ತೆ ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಏರಲು ಸಿದ್ಧತೆ ನಡೆಸಿದ್ದಾನೆ. ಈ ಬಾರಿ ಶಬರಿಮಲೆ ಏರಿದರೆ ಪ್ರಸನ್ನ ಇನ್ನಷ್ಟು ಸ್ಪಷ್ಟವಾಗಿ ಮಾತನಾಡುವ ಸಾಧ್ಯತೆಯಿದೆ ಎನ್ನುವ ನಿರೀಕ್ಷೆಯಲ್ಲಿ ಹಿರಿಯ ಸ್ವಾಮಿಗಳಲ್ಲಿದೆ. ಮೊದಲ ಬಾರಿಗೆ ಮಾಲೆ ಧರಿಸಲು ಬಂದಾಗ ಕೇಳಲು ಮತ್ತು ಮಾತನಾಡಲು ಆಗದ ಸ್ಥಿತಿಯಲ್ಲಿದ್ದ ಪ್ರಸನ್ನನಿಗೆ ಇದೀಗ ಒಂದು ಕಿವಿ ಕೇಳಿಸುತ್ತಿದೆ, ಮಾತನಾಡಲು ಶಬ್ದಗಳು ಹೊರಡುತ್ತಿದೆ.

ಮೊದಲ ಬಾರಿಗೆ ಮಾಲೆ‌ ಹಾಕಲು ಬಂದ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದ ಪ್ರಸನ್ನ ಇದೀಗ ಮಾತನಾಡಲಾರಂಭಿಸಿರುವುದು ಗುರು ಸ್ವಾಮಿಗಳಿಗೆ ಸಂತಸ‌ ತಂದಿದೆ. ಈ ರೀತಿಯ ಘಟನೆಗಳನ್ನು ಹಿರಿಯ ಅಯ್ಯಪ್ಪ ಮಾಲಾಧಾರಿಗಳು ಉದಾಹರಣೆಯ ಸಹಿತ ವಿವರಿಸಿದ್ದಾರೆ. ಈ ಸಾಲಿಗೆ ಪ್ರಸನ್ನ ಕೂಡ ಸೇರಿದ್ದು, ಅಯ್ಯಪ್ಪನ ಮಹಿಮೆಯಿಂದ ಎಲ್ಲವೂ ಸಾಧ್ಯ ಎನ್ನುವುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ.

ಇದನ್ನೂ ಓದಿ: ಹಾಸನ: ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಉದ್ಘಾಟನೆಗೆ ಸಜ್ಜು, ಕಾಮಗಾರಿಯೇ ಮುಗಿದಿಲ್ಲ!

ಪುತ್ತೂರಿನ ಮಹಾಲಿಂಗೇಶ್ವರ ಐಟಿಐ ನಲ್ಲಿ ಎರಡನೇ ವರ್ಷದ ಸಿವಿಲ್ ಡಿಪ್ಲೊಮಾ ಮಾಡುತ್ತಿರುವ ಪ್ರಸನ್ನ, ವರ್ಷದ ಹಿಂದೆ ತನಕ ಒಂದು ಶಬ್ದವನ್ನೂ ಮಾತನಾಡಲಾರದ ಸ್ಥಿತಿಯಲ್ಲಿದ್ದ. ಇದೀಗ ಈತನ ಸ್ವಭಾವದಲ್ಲಾದ ಬದಲಾವಣೆ ಆತನ ಮೇಲೆ ಅಯ್ಯಪ್ಪ ಸ್ವಾಮಿ ದಯೆ ತೋರಿದ್ದಾನೆ ಅನ್ನೋದು ಹಿರಿಯ ಅಯ್ಯಪ್ಪ ಮಾಲಾಧಾರಿಗಳ ಅಭಿಪ್ರಾಯವಾಗಿದೆ‌.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:04 pm, Sun, 15 December 24

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ