ರಾಮ ಮಂದಿರ ಉದ್ಘಾಟನೆ: ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಇಂದು ಅನಧಿಕೃತ ರಜೆ ಘೋಷಣೆ
ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣಾ ಪ್ರತಿಷ್ಠಾಪನೆಗೆ ಕೆಲವೊಂದು ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಸರ್ಕಾರವು ರಜೆ ಘೋಷಣೆ ಮಾಡಿಲ್ಲ. ಅದಾಗ್ಯೂ, ನೆಲಮಂಗಲ ತಾಲೂಕಿನ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಅನಧಿಕೃತವಾಗಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಶಿಕ್ಷಕರ ವಿರುದ್ಧ ಕ್ರಮಕ್ಕೆ ಬಿಇಒ ಮುಂದಾಗಿದ್ದಾರೆ.
ನೆಲಮಂಗಲ, ಜ.22: ಅಯೋಧ್ಯೆ ರಾಮ ಮಂದಿರ (Ayodhya Ram Mandir) ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣಾ ಪ್ರತಿಷ್ಠಾಪನೆಗೆ ಕೆಲವೊಂದು ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಸರ್ಕಾರವು ರಜೆ ಘೋಷಣೆ ಮಾಡಿಲ್ಲ. ಅದಾಗ್ಯೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಅನಧಿಕೃತವಾಗಿ ರಜೆ ಘೋಷಣೆ ಮಾಡಲಾಗಿದೆ.
ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ ಒಟ್ಟು 44 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ. ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಮುಖ್ಯ ಶಿಕ್ಷಕ ಪುಟ್ಟರಾಜು, ಶಿಕ್ಷಕ ನಾರಾಯಣ್ ಶಾಲೆಗೆ ರಜೆ ಘೋಷಣೆ ಮಾಡಿದ್ದಾರೆ. ಶಿಕ್ಷಕರು ಕೂಡ ಶಾಲೆಗೆ ಗೈರಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಇಒ ತಿಮ್ಮಯ್ಯ ಅವರು, ವರದಿ ಪಡೆದು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಹೋಲಿಕೆ ಮಾಡುತ್ತಾ ರಾಜ್ಯದಲ್ಲಿ ಇಂದು ರಜೆ ನೀಡದಿರುವುದನ್ನ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ರಾಜ್ಯದಲ್ಲಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಇಂದು ಮತ್ತೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರಜೆ ನೀಡಿದ್ಯಾ? ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ಆದರೆ ಕೇರಳ, ದೆಹಲಿ (ಜನವರಿ 22 ರಂದು ದೆಹಲಿ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ), ಪಶ್ಚಿಮ ಬಂಗಾಳದಲ್ಲಿ ರಜೆ ಇದ್ಯಾ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:44 pm, Mon, 22 January 24