AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಹೆಚ್​ಡಿ ಕುಮಾರಸ್ವಾಮಿ

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: Ganapathi Sharma|

Updated on: Jan 22, 2024 | 7:47 AM

Share

ಬೆಂಗಳೂರು, ಜನವರಿ 22: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve gowda) ಜತೆ ಮುಂಜಾನೆಯೇ ಅವರು ಅಯೋಧ್ಯೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದು, ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ ಎಂದು ಉಲ್ಲೇಖಿಸಿದ್ದಾರೆ.

‘ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ದಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ. ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ’ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಮತ್ತೊಂದು ಸಂದೇಶದಲ್ಲಿ, ‘ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ ಈ ಪುಣ್ಯಕ್ಷಣದಲ್ಲಿಯೇ ನಿಖಿಲ್‌, ಶ್ರೀರಾಮ ಸನ್ನಿಧಿಯಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇದು ಅವರ ಅದೃಷ್ಟವೇ ಹೌದು. ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದ ಸುಸಂದರ್ಭಕ್ಕೆ ಅವರೂ ಸಾಕ್ಷಿಯಾಗುತ್ತಿದ್ದಾರೆ. ಅಲ್ಲದೆ; ನಾಡಿನ ಜನರ ಸಂಕಷ್ಟಕ್ಕೆ ಮಿಡಿಯುವ, ನೊಂದವರಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡುವ ಅವಕಾಶ ನಿಖಿಲ್‌ಗೆ ದೊರೆಯಲಿ. ಆ ರಾಮದೇವರ ಕೃಪೆ ಸದಾ ಅವರ ಮೇಲಿರಲಿ ಎಂದು ಹರಸುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕ್ಷಣಗಣನೆ: ಲೈವ್ ಅಪ್​ಡೇಟ್ಸ್ ಇಲ್ಲಿದೆ

ಅಯೋಧ್ಯೆಯಲ್ಲಿ ಇಂದು ರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕುಟುಂಬ ಸಮೇತ ಅಯೋಧ್ಯೆಗೆ ತೆರಳಿದ್ದಾರೆ. ದೇವೇಗೌಡರು, ಪತ್ನಿ ಚೆನ್ನಮ್ಮ, ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಬೆಂಗಳೂರಿನ ಹೆಚ್​​ಎಎಲ್​ನಿಂದ ಪ್ರೈವೆಟ್​ ಜೆಟ್​ನಲ್ಲಿ ಅಯೋದ್ಯೆಗೆ ತೆರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ