ಸ್ವಾತಂತ್ರ್ಯದ ಅಮೃತ ಮಹೋತ್ಸವ: ನಾಳೆ ಇವರಿಗೆಲ್ಲ ಮೆಟ್ರೋದಲ್ಲಿ ಉಚಿತ ಪ್ರಯಾಣ

| Updated By: Rakesh Nayak Manchi

Updated on: Aug 14, 2022 | 7:21 AM

Bangalore News: ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾರ್ವಜನಿಕರಿಗೆ ಪಕ್ಷದ ಕಡೆಯಿಂದ ಉಚಿತ ಮೆಟ್ರೋ ಪ್ರಯಾಣ ಕಲ್ಪಿಸಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ: ನಾಳೆ ಇವರಿಗೆಲ್ಲ ಮೆಟ್ರೋದಲ್ಲಿ ಉಚಿತ ಪ್ರಯಾಣ
ನಮ್ಮ ಮೆಟ್ರೋ
Follow us on

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರಿನಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನಡಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಉಚಿತ ಪ್ರಯಾಣವನ್ನು ಕಲ್ಪಿಸುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar), ಸ್ವಾತಂತ್ರ್ಯ ನಡಿಗೆಯಲ್ಲಿ ಭಾಗಿಯಾಗುವವರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗುತ್ತಿದೆ. ನಮ್ಮ ಮೆಟ್ರೋಗೆ ಹಣ ಪಾವತಿಸಿ ಕೂಪನ್ ಪಡೆದಿದ್ದೇನೆ. ನಮ್ಮ ಮೆಟ್ರೋದವರು ಕೂಡ ಸಹಕಾರ ನೀಡಿದ್ದಾರೆ ಎಂದರು.

ನಾಳೆ (ಆಗಸ್ಟ್ 15ರಂದು) ಕಾಂಗ್ರೆಸ್​​ ಪಕ್ಷದಿಂದ ನಗರದಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಈ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಾಂಗ್ರೆಸ್ ಕಡೆಯಿಂದ ಉಚಿತ ಪ್ರಯಾಣ ಕಲ್ಪಿಸಲಾಗುತ್ತಿದೆ. ಸ್ವಾತಂತ್ರ್ಯ ನಡಿಗೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವೂ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಮುಕ್ತಾಯದ ಬಳಿಕವೂ ಉಚಿತವಾಗಿ ಮೆಟ್ರೋದಲ್ಲಿ ತೆರಳಬಹುದು. ಇದನ್ನು ಸಾರ್ವಜನಿಕರು ತಪ್ಪದೇ ಉಪಯೋಗಿಸುವ ಮೂಲಕ ಸಹಾರ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ನಗರದ ಮಾಣಿಕ್ ಷಾ ಪರೇಡ್ ಗ್ರೌಂಡ್​ನಲ್ಲಿ ಆಯೋಜಿಸಿದೆ. ಈ ಬಾರಿ ಅಮೃತ ಮಹೋತ್ಸವದ ವಿಶೇಷತೆ ಹಿನ್ನೆಲೆ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಪ್ರವೇಶ ನೀಡಲಾಗುತ್ತಿದ್ದು, ಇದಕ್ಕಾಗಿ ಆಮಂತ್ರಣ ಪತ್ರಿಕೆಗಳನ್ನು ಹಂಚಲಾಗುತ್ತಿದೆ. ಅಷ್ಟೇ ಅಲ್ಲದೆ ನಾಳೆ ವಿವಿಧ ಕಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆ ಇದೆ.

Published On - 7:21 am, Sun, 14 August 22