ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸೋದು ಕಡ್ಡಾಯವಾಗಿದೆ. ಹೀಗಾಗಿ ಯಾವುದೇ ಕುಂಟು ನೆಪ ಹೇಳದೆ ಎಲ್ಲಾ ಮದರಾಸಗಳಲ್ಲಿ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜು, ಮದರಸಾಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲಾ ಶಿಕ್ಷಣ ಸಿಬ್ಬಂದಿಗಳು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಸೂಚಿಸಲಾಗಿದೆ.
ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ 6 ದಿನ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಆದೇಶಿಸಿದ ಸರ್ಕಾರ, ಶಾಲಾ ಕಾಲೇಜು, ಮದರಸಾಗಳಲ್ಲಿ ರಾಷ್ಟ್ರ ಭಕ್ತಿ ಮೂಡಿಸುವ ಗೀತಗಾಯನ, ಪ್ರಭಂದ, ಕ್ವಿಜ್, ಸ್ವಾತಂತ್ರ್ಯ ಹೋರಾಟಗಾರ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಬ್ರಿಟಿಷರ ಕೈಯೊಂದ ಭಾರತ ಸ್ವಾತಂತ್ರ್ಯಗೊಂಡು ಆಗಸ್ಟ್ 15ಕ್ಕೆ 75 ವರ್ಷಗಳು ಪೂರೈಸುತ್ತದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವನ್ನು ವಿಜ್ರಭಂಣೆಯಿಂದ ಆಚರಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
Published On - 11:17 am, Tue, 19 July 22