Azadi Ka Amrut Mahotsav: ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾದುಕೊಳ್ಳೋಣ: ನಾಡ ಜನರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

Independence Day 2021: ಸ್ವಾತಂತ್ರ್ಯ ದಿವಸವನ್ನು ಅರ್ಥಪೂರ್ಣ ವಿಭಿನ್ನವಾಗಿ ಆಚರಿಸಬೇಕೆಂದು ಕಲ್ಪನೆ ಇತ್ತು. ಕೊವಿಡ್ ಹಾಗೂ ಕರ್ಪ್ಯೂ ಇರುವ ಕಾರಣ ಕಾರ್ಯಕ್ರಮ ಮೊಟಕುಗೊಳಿಸಿದ್ದೇವೆ ಎಂದು ಅವರು ತಿಳಿಸಿದರು.

Azadi Ka Amrut Mahotsav: ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾದುಕೊಳ್ಳೋಣ: ನಾಡ ಜನರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Aug 14, 2021 | 8:28 PM

ಬೆಂಗಳೂರು: 1947ರಲ್ಲಿ ಬಂದ ಸ್ವಾತಂತ್ರ್ಯ ಸಾತ್ವಿಕ ಹೋರಾಟದಿಂದ ಬಂದಿದೆ. ನಾವೆಲ್ಲ 75 ವರ್ಷ ಕಳೆದಿದ್ದೇವೆ, ಹಿಂತಿರುಗಿ ನೋಡಬೇಕಾಗಿದೆ. ಮುಂದಿನ ನವ ಕರ್ನಾಟಕ ಕಲ್ಪನೆ ಬಿತ್ತಬೇಕಾಗಿದೆ. ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳು ಕಾಯಬೇಕು. ಪ್ರಜಾಪ್ರಭುತ್ವದ ಬುನಾದಿಯ ಮೇಲೆ ಮುನ್ನಡೆಯಬೇಕಾಗಿದೆ. ಅಮೃತ ಮಹೋತ್ಸವವನ್ನು (Azadi Ka Amrut Mahotsav)  ಅರ್ಥಪೂರ್ಣವಾಗಿ ಮುನ್ನಡೆಸೋಣ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನರಿಗೆ ಕರೆ ಕೊಟ್ಟರು. ಸ್ವಾತಂತ್ರ್ಯ ದಿವಸವನ್ನು ಅರ್ಥಪೂರ್ಣ ವಿಭಿನ್ನವಾಗಿ ಆಚರಿಸಬೇಕೆಂದು ಕಲ್ಪನೆ ಇತ್ತು. ಕೊವಿಡ್ ಹಾಗೂ ಕರ್ಪ್ಯೂ ಇರುವ ಕಾರಣ ಕಾರ್ಯಕ್ರಮ ಮೊಟಕುಗೊಳಿಸಿದ್ದೇವೆ ಎಂದು ಅವರು ತಿಳಿಸಿದರು.

ಗೋಖಲೆ, ತಿಲಕ್, ವೀರ ಸಾವರ್ಕರ್ ಈ ಹಿನ್ನೆಲೆಯಿಂದ ಪ್ರಾರಂಭವಾಗಿ ಸ್ವಾಮಿ ವಿವೇಕಾನಂದ ಕೂಡ ಸ್ವಾತಂತ್ರ್ಯದ ವಿಚಾರ ಮಾತನಾಡಿದರು. ಸಾತ್ವಿಕ ಸತ್ಯವಾದ ಅಸ್ತ್ರವನ್ನ ಕೊಟ್ಟಿದ್ದು ಮಹಾತ್ಮಾ ಗಾಂಧೀಜಿ. ಇಂದಿಗೆ ನಾವೆಲ್ಲ ಸ್ವಾತಂತ್ರ್ಯ ಪಡೆದು 75 ವರ್ಷ ಕಳೆದಿದ್ದೇವೆ. ಹಿಂದಿನ ದಿನಗಳನ್ನು ಹಿಂತಿರುಗಿ ನೋಡಬೇಕಾಗಿದೆ, ಮುಂದಿನ ನವ ಕರ್ನಾಟಕ ಕಲ್ಪನೆ ಬಿತ್ತಬೇಕಾಗಿದೆ. ನವ ಕರ್ನಾಟಕ ನವ ಭಾರತದ ಚೈತನ್ಯ ತುಂಬಿ ದೇಶ ಕಟ್ಟುವ ಕೆಲಸ ಮಾಡಬೇಕಾಗಿದೆ. ದೇಶ ವಿಭಜನೆ ಆಗಿದ್ದು ನೋವಿನ ಸಂಗತಿ. ಅಂದು ಸಾವಿರಾರು ಜನ ಸಂಕಷ್ಟಕ್ಕೊಳಗಾದರು. ಅಂದಿನ ದಿನಗಳನ್ನು ಮತ್ತೆ ನೆನಪಿಸಿಕೊಳ್ಳಬೇಕು ಎಂದು ಅವರು ಕರೆ ಕೊಟ್ಟರು.

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ದೀಪ ಬೆಳಗಿಸಲು ಮುಖ್ಯಮಂತ್ರಿ ಮತ್ತು ಸಚಿವರು ಪರದಾಡಿದ ಘಟನೆಯೂ ನಡೆಯಿತು. ಗಾಳಿ ಬೀಸುತ್ತಿದ್ದರಿಂದ ಪದೇಪದೇ ದೀಪ ಆರಿಹೋಗುತ್ತಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಡಾ.ಸುಧಾಕರ್, ಎಸ್.ಆರ್.ವಿಶ್ವನಾಥ್ ದೀಪ ಬೆಳಗಿಸಲು ಪ್ರಯತ್ನಿಸಿದರೂ ಗಾಳಿಯಿಂದ ದೀಪ ಬೆಳಗಿಸಲು ಆಗದೆ ಕೈಬಿಟ್ಟರು.

ನಾಳೆ ಧ್ವಜಾರೋಹಣ ನೆರವೇರಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 75 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. 10 ಗಂಟೆಗೆ ಸಂಗೊಳ್ಳಿ ರಾಯಣ್ಣ ಹುಟ್ಟುಹಬ್ಬದ ಅಂಗವಾಗಿ ಕೆಎಸ್ ಆರ್ ರೈಲ್ವೆ ಬಳಿಯ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: 

ಪೋಷಕರೇ ಮಕ್ಕಳಲ್ಲಿ ಕ್ರೀಡೆಯ ಆಸಕ್ತಿ ಬೆಳೆಸಿ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಕರೆ

75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​

(Azadi Ka Amrut Mahotsav CM Basavaraj Bommai says midnight freedom must be kept up day and night)

Published On - 8:03 pm, Sat, 14 August 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ