AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ಖಾತಾ ಅರ್ಜಿ ಸಲ್ಲಿಸಲು ಇನ್ನೂ 3 ತಿಂಗಳ ಕಾಲಾವಕಾಶ: ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಕರ್ನಾಟಕದ ನಗರ ಪ್ರದೇಶಗಳಲ್ಲಿನ ಅನಧಿಕೃತ ಬಡಾವಣೆಗಳ ಆಸ್ತಿಗಳಿಗೆ ಬಿ-ಖಾತಾ ನೀಡಲು ನಿಗದಿಪಡಿಸಲಾಗಿದ್ದ ಮೂರು ತಿಂಗಳ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮೇ 10ರ ಗಡುವು ಮುಗಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ 10 ಲಕ್ಷ ಅರ್ಜಿಗಳು ಬಂದಿದ್ದು, 2 ಲಕ್ಷ ಆಸ್ತಿ ಮಾಲೀಕರಿಗೆ ಬಿ-ಖಾತಾ ನೀಡಲಾಗಿದೆ. ಉಳಿದ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವರು ತಿಳಿಸಿದ್ದಾರೆ.

ಬಿ ಖಾತಾ ಅರ್ಜಿ ಸಲ್ಲಿಸಲು ಇನ್ನೂ 3 ತಿಂಗಳ ಕಾಲಾವಕಾಶ: ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 15, 2025 | 9:26 AM

Share

ಬೆಂಗಳೂರು, ಮೇ 15: ನಗರ ಪ್ರದೇಶಗಳಲ್ಲಿನ ಆಸ್ತಿಗಳಿಗೆ ಎ ಖಾತಾ ಮತ್ತು ಅನಧಿಕೃತ ಬಡಾವಣೆಗಳ ಸೈಟ್​​ಗಳಿಗೆ ಬಿ ಖಾತಾ (B Khata) ನೀಡಲು ನಿಗದಿಪಡಿಸಿದ್ದ ಮೂರು ತಿಂಗಳ ಕಾಲಾವಕಾಶವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮೇ 10 ರ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಸರ್ಕಾರ (Karnataka Govt) ಈ ನಿರ್ಧಾರ ಕೈಗೊಂಡಿದೆ. ಮೂರು ತಿಂಗಳ ಅವಧಿಯಲ್ಲಿ ಖಾತಾ ನೀಡುವಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸದ ಕಾರಣ ಸರ್ಕಾರ ಗಡುವು ವಿಸ್ತರಿಸುವ ನಿರ್ಧಾರಕ್ಕೆ ಬಂದಿದೆ.

ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಬಿ-ಖಾತಾ ನೀಡಲು ಮತ್ತು ಅವುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಒಂದು ಬಾರಿಗೆ ಅವಕಾಶ ನೀಡುವಂತೆ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದರು. ಈ ಮೂಲಕ ಸರ್ಕಾರಕ್ಕೆ ಸುಮಾರು 3,500 ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಮೊದಲ 3 ತಿಂಗಳ ಅವಧಿಯಲ್ಲಿ ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ.

ನೂತನ ಯೋಜನೆಯಡಿ ಇದುವರೆಗೆ 10 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 2 ಲಕ್ಷ ಆಸ್ತಿ ಮಾಲೀಕರು ಬಿ-ಖಾತಾ ಪಡೆದಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ. ಉಳಿದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಮತ್ತು ಅರ್ಹ ಮಾಲೀಕರಿಗೆ ಬಿ-ಖಾತಾ ಸಿಗುತ್ತದೆ ಎಂದು ಅವರು ಹೇಳಿದ್ದಾರೆ. ಅಕ್ರಮ ಲೇಔಟ್​ಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ
Image
ಇ-ಕಾಮರ್ಸ್‌ ತಾಣಗಳಲ್ಲಿ ಪಾಕ್‌ ಸರಕು ಮಾರಿದರೆ ಹುಷಾರ್‌: ಜೋಶಿ ಎಚ್ಚರಿಕೆ
Image
ಮೂರು ತಿಂಗಳಾದರೂ ಬಂದಿಲ್ಲ ಗೃಹಲಕ್ಷ್ಮಿ ಹಣ: ಗದಗದಲ್ಲಿ ಸಿಡಿದೆದ್ದ ಮಹಿಳೆಯರು
Image
ಚಿನ್ನಾಭರಣ ಕದ್ದು ಬೇರೆ ಬ್ಯಾಂಕ್​ಗಳಲ್ಲಿ ಅಡವಿಟ್ಟ ಗೋಲ್ಡ್ ಲೋನ್ ಆಫೀಸರ್!
Image
ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಿಗೆ ಬಿತ್ತು ಕಡಿವಾಣ: ಸಿಎಂ ಖಡಕ್​ ಸೂಚನೆ

ಅಕ್ರಮವಾಗಿ ನಿವೇಶನಗಳನ್ನು ಖರೀದಿಸಿದ ಅಥವಾ ಮನೆಗಳನ್ನು ನಿರ್ಮಿಸಿದ ಮಾಲೀಕರಿಗೆ ಬಿ-ಖಾತಾ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಇದರಲ್ಲಿ ಪರಿವರ್ತನೆಯಾಗದ ಅಥವಾ ಯೋಜನಾ ಅನುಮೋದನೆ ಪಡೆಯದೆ ಅಭಿವೃದ್ಧಿಪಡಿಸಿದ ಆಸ್ತಿಗಳೂ ಸೇರಿವೆ. ಆಸ್ತಿ ಮಾಲೀಕರಿಗೆ ಇದು ಒಂದು ಬಾರಿಯ ಅವಕಾಶವಾಗಿದ್ದು, ಮಾಲೀಕರು ಶುಲ್ಕವನ್ನು ಪಾವತಿಸಿ ಮೇ 10 ರವರೆಗೆ ಬಿ-ಖಾತಾ ಪಡೆಯಬಹುದು ಎಂದು ಸಚಿವ ಸುರೇಶ್ ಅವರ ಕಚೇರಿ ಫೆಬ್ರವರಿಯಲ್ಲಿ ಪ್ರಕಟಣೆ ಹೊರಡಿಸಿತ್ತು.

ಇದನ್ನೂ ಓದಿ: ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಿಗೆ ಬಿತ್ತು ಕಡಿವಾಣ: ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ

ನಗರ ಪ್ರದೇಶಗಳಲ್ಲಿ ಮನೆಗಳು ಮತ್ತು ಪ್ಲಾಟ್‌ಗಳಿಗೆ ಎ-ಖಾತಾ ಮತ್ತು ಬಿ-ಖಾತಾ ನೀಡುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಪುರಸಭೆ ಆಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ತುಮಕೂರಿನಲ್ಲಿ ಸುದ್ದಿಗಾರರಿಗೆ ಬುಧವಾರ ತಿಳಿಸಿದ್ದಾರೆ. ಕಳೆದ 30-40 ವರ್ಷಗಳಿಂದ ಯಾವುದೇ ದಾಖಲೆಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿರುವ ಬಡವರ ಮನೆಗಳು ಮತ್ತು ಪ್ಲಾಟ್‌ಗಳನ್ನು ನೋಂದಾಯಿಸಲು ಬಿ-ಖಾತಾ ನೀಡುವ ಉಪಕ್ರಮ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ