Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ನಾಗೇಂದ್ರ ಹಿಸ್ಟರಿ: ಒಂದೇ ವರ್ಷದಲ್ಲಿ ಸಚಿವ ಸ್ಥಾನ ಕಳೆದಕೊಂಡ ನಾಗೇಂದ್ರ ಬಗ್ಗೆ ಒಂದಿಷ್ಟು ತಿಳಿಯಿರಿ

ಕರ್ನಾಟಕ ವಾಲ್ಮೀಕಿ ನಿಗಮದ ಕೋಟಿ, ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಂಪುಟದ ಒಂದು ವಿಕೆಟ್ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ ಅಕ್ರಮ ಬೆಳಕಿಗೆ ಬಂದಿದ್ದೆ ತಡ ಸಿಬಿಐ ಈ ಪ್ರಕರಣದಲ್ಲಿ ಎಂಟ್ರಿ ಕೊಟ್ಟಿದೆ. ಇದರ ಬೆನ್ನಲ್ಲೇ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಒಂದೇ ವರ್ಷದಲ್ಲಿ ಸಚಿವ ಸ್ಥಾನ ಕಳೆದುಕೊಂಡ ನಾಗೇಂದ್ರ ಯಾರು? ಅವರ ಹಿನ್ನಲೆ ಏನು ಎನ್ನುವ ವಿವರ ಇಲ್ಲಿದೆ.

ಬಿ ನಾಗೇಂದ್ರ ಹಿಸ್ಟರಿ: ಒಂದೇ ವರ್ಷದಲ್ಲಿ ಸಚಿವ ಸ್ಥಾನ ಕಳೆದಕೊಂಡ ನಾಗೇಂದ್ರ ಬಗ್ಗೆ ಒಂದಿಷ್ಟು ತಿಳಿಯಿರಿ
ನಾಗೇಂದ್ರ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ರಮೇಶ್ ಬಿ. ಜವಳಗೇರಾ

Updated on: Jun 06, 2024 | 7:25 PM

ಬೆಂಗಳೂರು/ಬಳ್ಳಾರಿ, (ಜೂನ್ 06): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ (B Nagendra) ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯ ಸರ್ಕಾರದ ಒಂದು ವಿಕೆಟ್​ ಪತನವಾದಂತಾಗಿದೆ. ಅಂದು ಹಾಲಿ ಸಚಿವರಾಗಿದ್ದ ಪ್ರಭಾವಿ ನಾಯಕ ಶ್ರೀರಾಮುಲು ಅವರನ್ನೇ ಸೋಲಿಸಿ ಮಂತ್ರಿಯಾಗಿದ್ದ ನಾಗೇಂದ್ರ, ಒಂದೇ ವರ್ಷದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ. ತಮ್ಮ ರಾಜಕೀಯ ಗುರುವಾಗಿದ್ದ ಶ್ರೀರಾಮುಲು ಅವರನ್ನೇ ಮಣಿಸಿ ಸಚಿವರಾಗಿದ್ದ ನಾಗೇಂದ್ರ ಹಿನ್ನಲೆ ಏನು? ಅವರ ಮೇಲೆ ಎಷ್ಟು ಪ್ರಕರಣಗಳಿವೆ ಎನ್ನುವ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.

ಬಿ. ನಾಗೇಂದ್ರ ಹಿನ್ನಲೆ

ಬಿ. ನಾಗೇಂದ್ರ ಮೂಲತಃ ಬಳ್ಳಾರಿ ಯವರು, 1993 ರಲ್ಲಿ ವೀರಶೈವ ಕಾಲೇಜು ಬಳ್ಳಾರಿ ಬಿ. ಕಾಂ ಪದವಿಯನ್ನ ಪಡೆದು ಕೊಂಡ್ರು ನಂತರ ಗಣಿ ಉದ್ಯಮದ ಕಡೆ ಆಸಕ್ತಿ ವಹಿಸಿ, ಗಣಿಗಾರಿಕೆ ಮಾಡಿದ್ರು, ಆ ಸಂದರ್ಭದಲ್ಲಿಯೇ ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಇವರ ನಡುವೆ ಸ್ನೇಹಾ ಬೆಳೆಯಿತು. ಉದ್ಯಮ ಬೆಳೆದಂತೆ ನಾಗೇಂದ್ರ ಕೂಡ ಬೆಳೆದ್ರು.. ನಂತರ 2008 ರಲ್ಲಿ ಜನಾರ್ದನ ಮತ್ತು ಶ್ರೀರಾಮುಲು ಸೇರಿ ಬಿಜೆಪಿಯಿಂದ ಕೂಡ್ಲಿಗಿ ಟಿಕೆಟ್ ಕೊಡಿಸಿ ಅವರನ್ನ ಗೆಲ್ಲಿಸಿಕೊಂಡು ಬಂದ್ರು. ಅಲ್ಲಿಂದ ರಾಜಕೀಯ ಜೀವನ ಪ್ರಾರಂಭವಾಯಿತು. ಅದರ ಜೊತೆಗೆ ಗಣಿ ಉದ್ಯಮ ಕೂಡ ವಿಸ್ತಾರಗೊಳ್ಳುತ್ತಾ ಹೋಯಿತು.

ಇದನ್ನೂ ಓದಿ: ಎಸ್​ಟಿ ನಿಗಮದ ಹಗರಣ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ ನಾಗೇಂದ್ರ

2013 ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕೂಡ್ಲಿಗಿಯಿಂದ ಸ್ಪರ್ಧೆ ಮಾಡಿ ಆಗಲೂ ಗೆಲುವನ್ನ ಸಾಧಿಸಿದ್ರು.. ನಂತರ ಗಣಿ ಕೇಸ್‌ಗಳ ಮೂಲಕ ಜೈಲುವಾಸ ಅನುಭವಿಸುವ ಸ್ಥಿತಿ ಕೂಡ ಬಂತು. ನಂತರ ಅಲ್ಲಿಂದ 2018 ರಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಬಳಿಕ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲೂ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿಯ ಶ್ರೀರಾಮುಲು ವಿರುದ್ಧ ಅಭೂತಪೂರ್ವ ಜಯ ಸಾಧಿಸಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವರಾಗಿದ್ದರು.

ಆದರೆ, ಸಚಿವರಾಗಿ ಒಂದು ವರ್ಷದ ಖುಷಿಯಲ್ಲಿದ್ದ ನಾಗೇಂದ್ರಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗದಮ ಹಗರಣ ಸಂಕಷ್ಟ ತಂದಿಟ್ಟಿದೆ. ಹೌದು.. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಮಗದಲ್ಲಾದ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ, ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಪ್ರಕರಣದಲ್ಲಿ ಸಿಬಿಐ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಇದೀಗ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇನ್ನು ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಕೇಸ್‌ಗಳು ನಾಗೇಂದ್ರರ ಮೇಲೆ ಇದ್ದು, ಇವುಗಳಲ್ಲಿ ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೆ, ಇನ್ನು ಕೆಲವು ಕೇಸ್​​ಗಳು ಇತ್ಯರ್ಥವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ