ಬಿ.ಎಸ್.ಯಡಿಯೂರಪ್ಪ ಆರೋಗ್ಯ ಸ್ಥಿರ; ಆಸ್ಪತ್ರೆಯಲ್ಲಿ ಪುಸ್ತಕ ಹಾಗೂ ದಿನಪತ್ರಿಕೆ ಓದುತ್ತಿರುವ ಮುಖ್ಯಮಂತ್ರಿ

| Updated By: Skanda

Updated on: Apr 19, 2021 | 7:23 AM

ಸಚಿವ ಡಾ.ಕೆ.ಸುಧಾಕರ್ ಮಣಿಪಾಲ್ ವೈದ್ಯರ ಜೊತೆ ಮಾತನಾಡಿದ್ದೇನೆ, ಆಸ್ಪತ್ರೆಗೆ ಭೇಟಿ ನೀಡುತ್ತೇನೆ. ಸಭೆ ಮತ್ತು ಕೊರೊನಾ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ಕೊಡುವುದಕ್ಕೆ ಹೋಗುತ್ತೀನಿ. ತಜ್ಞರು ಕೊಟ್ಟ ಎಲ್ಲ ವರದಿ ಬಗ್ಗೆ ಸಿಎಂ ಜೊತೆ ಮಾತನಾಡಿ ಸಲಹೆಯನ್ನು ಪಡೆಯುತ್ತೇನೆ ಎಂದಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಆರೋಗ್ಯ ಸ್ಥಿರ; ಆಸ್ಪತ್ರೆಯಲ್ಲಿ ಪುಸ್ತಕ ಹಾಗೂ ದಿನಪತ್ರಿಕೆ ಓದುತ್ತಿರುವ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us on

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿ.ಎಸ್.ಯಡಿಯೂರಪ್ಪ ಪುಸ್ತಕ ಮತ್ತು ದಿನಪತ್ರಿಕೆಯನ್ನು ಓದುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಮಣಿಪಾಲ್ ವೈದ್ಯರ ಜೊತೆ ಮಾತನಾಡಿದ್ದೇನೆ, ಆಸ್ಪತ್ರೆಗೆ ಭೇಟಿ ನೀಡುತ್ತೇನೆ. ಸಭೆ ಮತ್ತು ಕೊರೊನಾ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ಕೊಡುವುದಕ್ಕೆ ಹೋಗುತ್ತೇನೆ. ತಜ್ಞರು ಕೊಟ್ಟ ಎಲ್ಲ ವರದಿ ಬಗ್ಗೆ ಸಿಎಂ ಜೊತೆ ಮಾತನಾಡಿ ಸಲಹೆಯನ್ನು ಪಡೆಯುತ್ತೇನೆ ಎಂದಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ಅವರು ಸಲಹೆ ಕೊಟ್ಡಿದ್ದಾರೆ. ರಾಜ್ಯಪಾಲರು ನೀಡಿದ ಸಲಹೆಯನ್ನು ರಾಜ್ಯದ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್  ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ (ಏಪ್ರಿಲ್ 16) ರಂದು ಕೊರೊನಾ ಸೋಂಕು ಧೃಡಪಟ್ಟಿತ್ತು. ಈ  ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ವೈದ್ಯರ ತಂಡ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ಇಟ್ಟು ಯಡಿಯೂರಪ್ಪ ಅವರನ್ನು ನೋಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು; ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ಸಿಎಂ ಬಿಎಸ್‌ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್‌

ಪ್ರಧಾನಿಯಿಂದ ಕೊರೊನಾ ಸ್ಥಿತಿ ಪರಿಶೀಲನಾ ಸಭೆ; ಮತ್ತೆ ತ್ರಿಬಲ್​ ಟಿ ಸೂತ್ರ ನೆನಪಿಸಿದ ನರೇಂದ್ರ ಮೋದಿ, ಔಷಧ, ಆಕ್ಸಿಜನ್ ಕೊರತೆ ಬಗ್ಗೆ ಚರ್ಚೆ

(BS Yeddyurappa health is stable and He reads the newspaper in manipal hospital)

Published On - 10:32 am, Sun, 18 April 21