ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತಕ್ಕ ಉತ್ತರ ನೀಡಲಿದ್ದೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತಕ್ಕ ಉತ್ತರ ನೀಡಲಿದ್ದೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ
|

Updated on:Nov 11, 2023 | 11:59 AM

ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಿದ್ದು ರಾಜ್ಯದ ಎಲ್ಲ ಬಿಜೆಪಿ ನಾಯಕರಿಗೆ ಸಂತಸ ಉಂಟುಮಾಡಿಲ್ಲ. ಬಿಎಸ್ ಯಡಿಯೂರಪ್ಪ ಕುಟುಂಬವನ್ನು ನಖಶಿಖಾಂತ ದ್ವೇಷಿಸುವ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಅವರಂಥ ಕೆಲ ನಾಯಕರನ್ನು ವಿಜಯೇಂದ್ರ ಹೇಗೆ ವಿಶ್ವಾಸಕ್ಕೆ ತೆಗೆದದುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. ಯತ್ನಾಳ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಸುಳ್ಳಲ್ಲ.

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಇಂದು ಬೆಂಗಳೂರಲ್ಲಿ ಗಾಂಧಿನಗರ ಬೂತ್ ನಂಬರ್ 23 ಅಧ್ಯಕ್ಷ ಶಶಿಧರ್ ಮನೆಗೆ ಭೇಟಿ ನೀಡಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಸಿದ್ದರಾಮಯ್ಯ ಸರ್ಕಾರ (Siddaramaiah government) ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ಗಳನ್ನು ದಾಖಲಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರೇನೆ ಮಾಡಿದರೂ ಬಿಜೆಪಿ ಕಾರ್ಯಕರ್ತರು ಹೋರಾಟ ನಿಲ್ಲಿಸಲ್ಲ, ಬಿಜೆಪಿಯ ಪ್ರತಿ ಕಾರ್ಯಕರ್ತನ ರಕ್ತಕಣಗಳಲ್ಲಿ ಹೋರಾಟದ ಅಂಶವಿದೆ. ತಮ್ಮ ಕಾರ್ಯಕರ್ತರು ಯಾವತ್ತೂ ಹೆದರಲ್ಲ ಮತ್ತು ಹೋರಾಟದಿಂದ ಹಿಂತೆಗೆಯಲ್ಲ ಎಂದು ಹೇಳಿದರು. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ (Lok Sabha polls) ಕಾಂಗ್ರೆಸ್ ತಕ್ಕ ಉತ್ತರ ನೀಡುವುದಾಗಿ ಹೇಳಿದ ವಿಜಯೇಂದ್ರ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ.

ಆದರೆ, ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಿದ್ದು ರಾಜ್ಯದ ಎಲ್ಲ ಬಿಜೆಪಿ ನಾಯಕರಿಗೆ ಸಂತಸ ಉಂಟುಮಾಡಿಲ್ಲ. ಬಿಎಸ್ ಯಡಿಯೂರಪ್ಪ ಕುಟುಂಬವನ್ನು ನಖಶಿಖಾಂತ ದ್ವೇಷಿಸುವ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಅವರಂಥ ಕೆಲ ನಾಯಕರನ್ನು ವಿಜಯೇಂದ್ರ ಹೇಗೆ ವಿಶ್ವಾಸಕ್ಕೆ ತೆಗೆದದುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. ಯತ್ನಾಳ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಸುಳ್ಳಲ್ಲ. ಸಂಸದ ಡಿವಿ ಸದಾನಂದ ಗೌಡ ನಿನ್ನೆಯಷ್ಟೇ ಕುಟಂಬ ರಾಜಕಾರಣವನ್ನು ಹೀಯಾಳಿಸುವ ಹೇಳಿಕೆ ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 11, 2023 11:57 AM