ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ

ದಕ್ಷಿಣ ಭಾರತದ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ರಾಜ್ಯ ಸರ್ಕಾರದ ನಡೆಯಿಂದ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರ ನೇಮಕ ಮಾಡಿದ್ದ ಅರ್ಚಕರಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಸಂಬಳ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಅರ್ಚಕರಿಗೆ ಸಂಬಳ ನೀಡದೆ ಇದ್ರೆ ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಸಂಬಳ ನೀಡಲು ಬಿಜೆಪಿ, ಹಿಂದೂ ಸಂಘಟನೆ ಪ್ಲಾನ್ ಮಾಡಿದೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Jun 13, 2024 | 11:22 AM

ಚಿಕ್ಕಮಗಳೂರು, ಜೂನ್.13: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದಕ್ಷಿಣ ಭಾರತದ ಅತಿದೊಡ್ಡ ವಿವಾದಿತ ಸ್ಥಳ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ(Baba Budangiri Dargah) ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ (Congress Government) ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿರುವ ಮುಜಾವರ್ ಗಳಿಗೆ ಸಂಬಳ ನೀಡಿ, ಆರ್ಚಕರಿಗೆ ಸಂಬಳ ನೀಡುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಇದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು ಆರ್ಚಕರ ಸಂಬಳದ ವಿವಾದ ಹೊಸ ತಿರುವು ಪಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಿ ಹಿಂದೂಗಳಿಗೆ ಅನ್ಯಾಯ ಮಾಡಲಾಗಿದೆ ಎಂಬ ಆರೋಪವನ್ನ MLC ಸಿ.ಟಿ. ರವಿ ಮಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ಭಿಕ್ಷಾಟನೆ ಅಸ್ತ್ರ ಪ್ರಯೋಗಿಸಿದೆ.

ಬಿಜೆಪಿ ಸರ್ಕಾರ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಒತ್ತಾಯಕ್ಕೆ ಮಣಿದು ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಇಬ್ಬರು ಆರ್ಚಕರನ್ನ ನೇಮಕ ಮಾಡಿತ್ತು. ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಒಂದೂವರೆ ವರ್ಷ ಕಳೆದ್ರು ಸಂಬಳ ನೀಡಿಲ್ಲ ಎಂಬುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಆರ್ಚಕರಿಗೆ ನೀಡುವ ಅಭಿಯಾನಕ್ಕೆ ಪ್ಲಾನ್ ಮಾಡಿದ್ದು ಬಿಜೆಪಿ ಕೂಡ ಕೈ ಜೋಡಿಸಲಿದೆ.

ಇದನ್ನೂ ಓದಿ: ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಅರ್ಚಕರ ನೇಮಕದಿಂದ ಖುಷಿಯಾಗಿದ್ದ ಹಿಂದೂ ಸಂಘಟನೆಗಳು ಅರ್ಚಕರಿಗೆ ಸಂಬಳ ನೀಡುತ್ತಿಲ್ಲ ಎಂಬ ವಿಚಾರಕ್ಕೆ ಆಕ್ರೋಶಗೊಂಡಿದ್ದು, ದಶಕಗಳ ಕಾಲ‌ ನಡೆದಿದ್ದ ಹೋರಾಟವನ್ನ ಮತ್ತಷ್ಟು ವಿಭಿನ್ನಗೊಳಿಸಿ ರಾಜ್ಯ ಸರ್ಕಾರವನ್ನ ಮುಜುಗರ ಪಡಿಸಲು ಪ್ಲಾನ್ ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ