ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್: ಇದು ಅಪ್ಪಟ ಸುಳ್ಳು: ಸಿಎಂ ಸಿದ್ದರಾಮಯ್ಯ

ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ‌ ಓಪನ್ ಮಾಡಲಾಗಿದೆ ಅನ್ನೋದು ಅಪ್ಪಟ ಸುಳ್ಳು, ಇದು ತಪ್ಪು ಮಾಹಿತಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. 2017ರಲ್ಲಿ ದಾಖಲಾಗಿದ್ದ ಕೇಸ್​ನ ಸಹಜ ಪ್ರಕ್ರಿಯೆ. ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ಕೋರ್ಟ್​​ ಸಮನ್ಸ್ ನೀಡಿದೆ ಅಷ್ಟೇ ಎಂದು ಹೇಳಿದ್ದಾರೆ.

ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್: ಇದು ಅಪ್ಪಟ ಸುಳ್ಳು: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Jan 04, 2024 | 5:27 PM

ಬೆಂಗಳೂರು, ಜನವರಿ 04: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ‌ ಓಪನ್ ಮಾಡಲಾಗಿದೆ ಅನ್ನೋದು ಅಪ್ಪಟ ಸುಳ್ಳು, ಇದು ತಪ್ಪು ಮಾಹಿತಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, 2017ರಲ್ಲಿ ದಾಖಲಾಗಿದ್ದ ಕೇಸ್​ನ ಸಹಜ ಪ್ರಕ್ರಿಯೆ. ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ಕೋರ್ಟ್​​ ಸಮನ್ಸ್ ನೀಡಿದೆ ಅಷ್ಟೇ ಎಂದು ಹೇಳಿದ್ದಾರೆ.

ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಅನ್ನುವುದು ಸುಳ್ಳು. ಇದು ತಪ್ಪು, ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೊಂದು ಕುಣಿಕೆ ಸಿದ್ದಗೊಳಿಸಿದ ಸಿದ್ದರಾಮಯ್ಯ ಸರ್ಕಾರ: ಗೋರಿ ಅಗೆದವರ ವಿರುದ್ಧದ ಕೇಸ್ ರೀಓಪನ್​ ಆಯ್ತು

2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು. 2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿ ನಾಳೆಗೆ ಮುಂದೂಡಿಕೆ

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಎಂದು ಸ್ಪಷ್ಟನೆ ನೀಡಿದ್ದಾರೆ.

ತೊಂದರೆ ಕೊಡಲು ಸರ್ಕಾರ ಚಾರ್ಜ್​ಶೀಟ್​ ಹಾಕಿದೆ: ಹಿಂದೂ ಕಾರ್ಯಕರ್ತರ ಪರ ವಕೀಲ ಸುಧಾಕರ್

ದತ್ತಪೀಠ ಹೋರಾಟಗಾರರ ವಿರುದ್ಧದ ಕೇಸ್ ರೀ ಓಪನ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ಪರ ವಕೀಲ ಸುಧಾಕರ್ ಪ್ರತಿಕ್ರಿಯಿಸಿದ್ದು, ತೊಂದರೆ ಕೊಡಲು ಸರ್ಕಾರ ಚಾರ್ಜ್​ಶೀಟ್​ ಹಾಕಿದೆ. 14 ಜನರಿಗೆ ಪೊಲೀಸ್ ಅಧಿಕಾರಿಗಳು ಸಮನ್ಸ್​ ನೀಡಿದ್ದಾರೆ. ಹಿಂದಿನ ಸರ್ಕಾರ ಕೇಸ್ ಹಿಂಪಡೆಯುವ ಬಗ್ಗೆ ಗೃಹ ಇಲಾಖೆಗೆ ತಿಳಿಸಿತ್ತು.

ಪೊಲೀಸರು ತನಿಖೆ ಎಂದು ಹಾಗೇ ಉಳಿಸಿಕೊಂಡಿದ್ದರು. ಹೊಸದಾಗಿ ಬಂದ ಪೊಲೀಸರು ತೊಂದರೆ ಕೊಡ್ತಿದ್ದಾರೆ ಎಂದು ಚಿಕ್ಕಮಗಳೂರು ಗ್ರಾಮೀಣ ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ. ಚಾರ್ಜ್​ಶೀಟ್ ಮಾಡದೇ ಇಟ್ಕೊಂಡಿದ್ದರಿಂದ ಸಮಸ್ಯೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:14 pm, Thu, 4 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ