ಬೆಂಗಳೂರು, ಜನವರಿ 04: ಬಾಬಾಬುಡನ್ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಅನ್ನೋದು ಅಪ್ಪಟ ಸುಳ್ಳು, ಇದು ತಪ್ಪು ಮಾಹಿತಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, 2017ರಲ್ಲಿ ದಾಖಲಾಗಿದ್ದ ಕೇಸ್ನ ಸಹಜ ಪ್ರಕ್ರಿಯೆ. ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ಕೋರ್ಟ್ ಸಮನ್ಸ್ ನೀಡಿದೆ ಅಷ್ಟೇ ಎಂದು ಹೇಳಿದ್ದಾರೆ.
ಜನವರಿ 8ರಂದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಅನ್ನುವುದು ಸುಳ್ಳು. ಇದು ತಪ್ಪು, ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮತ್ತೊಂದು ಕುಣಿಕೆ ಸಿದ್ದಗೊಳಿಸಿದ ಸಿದ್ದರಾಮಯ್ಯ ಸರ್ಕಾರ: ಗೋರಿ ಅಗೆದವರ ವಿರುದ್ಧದ ಕೇಸ್ ರೀಓಪನ್ ಆಯ್ತು
2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು. 2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿ ನಾಳೆಗೆ ಮುಂದೂಡಿಕೆ
ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಎಂದು ಸ್ಪಷ್ಟನೆ ನೀಡಿದ್ದಾರೆ.
ದತ್ತಪೀಠ ಹೋರಾಟಗಾರರ ವಿರುದ್ಧದ ಕೇಸ್ ರೀ ಓಪನ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ಪರ ವಕೀಲ ಸುಧಾಕರ್ ಪ್ರತಿಕ್ರಿಯಿಸಿದ್ದು, ತೊಂದರೆ ಕೊಡಲು ಸರ್ಕಾರ ಚಾರ್ಜ್ಶೀಟ್ ಹಾಕಿದೆ. 14 ಜನರಿಗೆ ಪೊಲೀಸ್ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಹಿಂದಿನ ಸರ್ಕಾರ ಕೇಸ್ ಹಿಂಪಡೆಯುವ ಬಗ್ಗೆ ಗೃಹ ಇಲಾಖೆಗೆ ತಿಳಿಸಿತ್ತು.
ಪೊಲೀಸರು ತನಿಖೆ ಎಂದು ಹಾಗೇ ಉಳಿಸಿಕೊಂಡಿದ್ದರು. ಹೊಸದಾಗಿ ಬಂದ ಪೊಲೀಸರು ತೊಂದರೆ ಕೊಡ್ತಿದ್ದಾರೆ ಎಂದು ಚಿಕ್ಕಮಗಳೂರು ಗ್ರಾಮೀಣ ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ. ಚಾರ್ಜ್ಶೀಟ್ ಮಾಡದೇ ಇಟ್ಕೊಂಡಿದ್ದರಿಂದ ಸಮಸ್ಯೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:14 pm, Thu, 4 January 24