ಸಿಎಂ ಕೈ ಸೇರಿದ ಹಿಂದುಳಿದ ವರ್ಗಗಳ ಆಯೋಗದ ಮೀಸಲಾತಿ ವರದಿ, ಆಯೋಗ ಏನೆಲ್ಲ ಶಿಫಾರಸು ಮಾಡಿದೆ? ಇಲ್ಲಿದೆ ವಿವರ

ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ವಿವಿಧ ಜಾತಿಗಳಿಗೆ ಮೀಸಲಾತಿ ನೀಡುವ ಕುರಿತು 32 ವರದಿಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಗಳಲ್ಲಿ ಏನೆಲ್ಲಾ ಶಿಫಾರಸು ಮಾಡಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಸಿಎಂ ಕೈ ಸೇರಿದ ಹಿಂದುಳಿದ ವರ್ಗಗಳ ಆಯೋಗದ ಮೀಸಲಾತಿ ವರದಿ, ಆಯೋಗ ಏನೆಲ್ಲ ಶಿಫಾರಸು ಮಾಡಿದೆ? ಇಲ್ಲಿದೆ ವಿವರ
ವಿಧಾನಸೌಧ
Follow us
ವಿವೇಕ ಬಿರಾದಾರ
|

Updated on:Mar 15, 2023 | 9:48 AM

ಬೆಂಗಳೂರು: ವಿವಿಧ ಜಾತಿಗಳಿಗೆ ಮೀಸಲಾತಿ ನೀಡುವ ವಿಚಾರವಾಗಿ,ಹಿಂದುಳಿದ ವರ್ಗಗಳ ಶಾಶ್ವತ ಆಯೋಗ (Backward Classes Commission), ವರದಿಯನ್ನು ಸಿದ್ದಪಡಿಸಿ ರಾಜ್ಯಸರ್ಕಾರಕ್ಕೆ (Karnataka Governmnet) ಸಲ್ಲಿಸಿದೆ. ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚಿಸಲಾಗಿತ್ತು. ಇದೀಗ ಆಯೋಗ ವಿವಿಧ ವಿಷಯಗಳಿಗೆ ಸಂಬಂಧಿಸಿದ ಒಟ್ಟು 32 ವರದಿಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿದೆ. ಸಣ್ಣ ಪುಟ್ಟ ಜಾತಿಗಳು ಮೀಸಲಾತಿ ವಂಚಿತವಾಗಿರುವ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ವಿವಿಧ ಸಣ್ಣ ಪುಟ್ಟ ಪಂಗಡಗಳ ಬಗ್ಗೆ ವರದಿಯಲ್ಲಿ ವಿವರಣೆ ನೀಡಲಾಗಿದೆ. ಹಾಗೆ ಹಿಂದುಳಿದ ಜಾತಿಗೆ ಸೇರುವ ಸಣ್ಣ ಸಣ್ಣ ಸಮುದಾಯಗಳಿಗೆ ಮೀಸಲಾತಿ ನೀಡಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಇನ್ನು ವರದಿಯಲ್ಲಿ ಕೆಲವು ಸಣ್ಣ ಜಾತಿಗಳ ಜೀವನ ಶೈಲಿ ಮತ್ತು ಕಡಿಮೆ ಜನಸಂಖ್ಯೆ ಹೊಂದಿರುವ ಜನ ಸಮುದಾಯದ ಕುರಿತು ಉಲ್ಲೇಖಿಸಲಾಗಿದೆ. ಕಾಡುಗೊಲ್ಲ, ಹಟ್ಟಿಗೊಲ್ಲ, ಚಪ್ಪರ್‌ ಬಂದ್‌, ಕುಡುಬಿ, ಮುಖಾರಿ, ಮುವಾರಿ, ಪೊಮ್ಮಲ, ಮರುತ್ತುವರ್‌, ಪರಿಯಾಳ ಜಾತಿಗಳ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.

ಕೊರೊನಾ ಸೇರಿದಂತೆ ಇತರ ಕಾರಣಗಳಿಂದ ಅನಾಥರಾದ ಮಕ್ಕಳಿಗೆ ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ‌ಮಾದರಿಯಲ್ಲಿ ವಿಶೇಷ ಮೀಸಲಾತಿ ನೀಡಬೇಕೆಂದು ಆಯೋಗ ಹೇಳಿದೆ. ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಬಗ್ಗೆಯೂ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ದೊಡ್ಡ ಸಮುದಾಯಗಳಿಗೆ ಮೀಸಲಾತಿ ನೀಡುವ ಕುರಿತು ಆಯೋಗ ಕೆಲವು ಸಲಹೆ ನೀಡಿದೆ. ಇನ್ನು ಮೀಸಲಾತಿ ಬಯಸುವ ಸಮುದಾಯಗಳ ಪೂರ್ಣ ಪ್ರಮಾಣದ ಅಧ್ಯಯನ ಅಗತ್ಯ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು, ಹಲವು ದಿನಗಳಿಂದ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಈ ಸಂಬಂಧ ಸಮುದಾಯದ ಮುಖಂಡರು ರಾಜ್ಯಸರ್ಕಾದ ಮೇಲೆ ಒತ್ತಡ ಹಾಕುತ್ತಿದ್ದು, ಮಾರ್ಚ್​ 15ರ ವರೆಗು ಗಡುವು ನೀಡಿದ್ದರು. ಇದಕ್ಕೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದತ್ತ ಬೊಟ್ಟು ಮಾಡಿ ತೋರಿಸಿತ್ತು. ಈಗ ಆಯೋಗ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿದ್ದು, ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ ಸಿಗುತ್ತಾ ಎಂದು ಕಾದು ನೋಡಬೇಕಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 am, Wed, 15 March 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ