AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಂಬಲ

ಲಕ್ಷಾಂತರ ರೈತರು ಕೆಆರ್​ಎಸ್​ ಜಲಾಶಯ ಅವಲಂಬಿಸಿದ್ದಾರೆ. ಕಳೆದ 20 ವರ್ಷದಿಂದ ಈವರೆಗೂ ಜಲಾಶಯಕ್ಕೆ ಅಪಾಯವಿದೆ. ಮಂಡ್ಯ ಜಿಲ್ಲೆಯ ಸಾಮಾನ್ಯ ಜನರಿಗೂ ಈ ಬಗ್ಗೆ ಅನುಮಾನ ಇದೆ. ಜಿಲ್ಲೆಯಲ್ಲಿ ಸಂಪೂರ್ಣ ಗಣಿಗಾರಿಕೆ ನಿಷೇಧ ಆಗಬೇಕು.

ಸುಮಲತಾ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಂಬಲ
ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ
TV9 Web
| Edited By: sandhya thejappa|

Updated on: Jul 11, 2021 | 12:55 PM

Share

ಮೈಸೂರು: ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಘೋಷಿಸಿದ್ದಾರೆ. ಕೆಆರ್​ಎಸ್​ ಭಾಗದಲ್ಲಿ ಗಣಿಗಾರಿಕೆ ನಿಷೇಧದ ಬಗ್ಗೆ ಸಾಕಷ್ಟು ಮನವಿ ಮಾಡಿದ್ದೇವೆ. ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದವರಿಗೆ ಪ್ರಾಣ ಬೆದರಿಕೆ ಇದೆ. ಗಣಿಗಾರಿಕೆಗೆಯಿಂದ ಮುಂದೆ ಕೆಆರ್​ಎಸ್​ ಡ್ಯಾಂಗೆ ಅಪಾಯ ಇದೆ. ಹೆಚ್ಡಿಕೆ, ಜೆಡಿಎಸ್ ಶಾಸಕರು ಗಂಭೀರವಾಗಿ ಯೋಚಿಸಬೇಕು ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಲಕ್ಷಾಂತರ ರೈತರು ಕೆಆರ್​ಎಸ್​ ಜಲಾಶಯ ಅವಲಂಬಿಸಿದ್ದಾರೆ. ಕಳೆದ 20 ವರ್ಷದಿಂದ ಈವರೆಗೂ ಜಲಾಶಯಕ್ಕೆ ಅಪಾಯವಿದೆ. ಮಂಡ್ಯ ಜಿಲ್ಲೆಯ ಸಾಮಾನ್ಯ ಜನರಿಗೂ ಈ ಬಗ್ಗೆ ಅನುಮಾನ ಇದೆ. ಜಿಲ್ಲೆಯಲ್ಲಿ ಸಂಪೂರ್ಣ ಗಣಿಗಾರಿಕೆ ನಿಷೇಧ ಆಗಬೇಕು. ಹೀಗಾಗಿ ಸುಮಲತಾ ಹೋರಾಟಕ್ಕೆ ರೈತ ಸಂಘದ ಬೆಂಬಲವಿದೆ ಎಂದು ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಹೋರಾಟ ಮುಂದುವರಿಯುತ್ತದೆ ಎಂದ ಸುಮಲತಾ ನಾನು ಯಾರ ವಿರುದ್ಧ ಹೋರಾಟ ಮಾಡಿಲ್ಲ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಅಷ್ಟೆ. ನಾನು ಯಾರನ್ನೂ ಟಾರ್ಗೆಟ್ ಮಾಡಿ ಪಾಲಿಟಿಕ್ಸ್ ಮಾಡಿಲ್ಲ. ಈಗಾಗಲೇ 2 ಬಾರಿ ಗಣಿಗಾರಿಕೆ ವಿಚಾರ ಪ್ರಸ್ತಾಪಿಸಿದ್ದೇನೆ. ಇನ್ನು ಮುಂದೆ ಮತ್ತಷ್ಟು ಹೆಚ್ಚಾಗಿ ವಿಚಾರ ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದ ಸಂಸದೆ ಸುಮಲತಾ, ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ ಎಂಬುದು ಗೊತ್ತಿದೆ. ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ

ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ, ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ; ಸಂಸದೆ ಸುಮಲತಾ

ಸುಮಲತಾ, ಕುಮಾರಸ್ವಾಮಿ ವಾಕ್ ಸಮರ; ಅಂಬಿ ಅಭಿಮಾನಿಗಳಿಂದ ಪ್ರತಿಭಟನೆ

(Badagalapura Nagendra said Karnataka Rajya Raitha Association would support the Sumalatha struggle)

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ